ETV Bharat / state

ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ : ಆರ್‌.ಅಶೋಕ್ - BJP SUPPORTS PROTEST

ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 15,000 ರೂ. ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 7,000 ರೂ. ನೀಡಲಾಗುವುದು ಎಂದು ಘೋಷಿಸಲಾಗಿದೆ. ಅದರಂತೆ ಈಗಲೇ ಸರ್ಕಾರ ಗೌರವಧನ ನೀಡಲಿ ಎಂದು ಆರ್. ಅಶೋಕ್ ಆಗ್ರಹಿಸಿದರು.

BJP SUPPORTS PROTEST
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಸಾಥ್​ ನೀಡಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ್ (ETV Bharat)
author img

By ETV Bharat Karnataka Team

Published : Feb 1, 2025, 4:53 PM IST

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ಆಗ್ರಹಿಸಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿ ಅವರು ಮಾತನಾಡಿದರು.

ಅಂಗನವಾಡಿ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಅವರ ಮೇಲೆ ಪೊಲೀಸರು ದೌರ್ಜನ್ಯ ಮಾಡಿದ್ದಾರೆ. ಗಂಟು ಮೂಟೆ ಕಟ್ಟಿಕೊಂಡು ಮನೆಗೆ ಹೋಗಿ ಎಂದು ಬೆದರಿಸಿದ್ದಾರೆ. ಅವರಿಗೆ ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ. ಕುಡಿಯುವ ನೀರು, ಶೌಚಾಲಯ, ಟೆಂಟ್‌ ಮೊದಲಾದ ಸೌಲಭ್ಯ ನೀಡುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 15,000 ರೂ. ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 7,000 ರೂ. ನೀಡಲಾಗುವುದು ಎಂದು ಘೋಷಿಸಲಾಗಿದೆ. ಅದರಂತೆ ಈಗಲೇ ಸರ್ಕಾರ ಗೌರವಧನ ನೀಡಲಿ ಎಂದು ಆರ್. ಅಶೋಕ್ ಆಗ್ರಹಿಸಿದರು.

R Ashok demands increase in honorarium for Anganwadi workers as mentioned in the manifesto
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಸಾಥ್​ ನೀಡಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಮತ್ತು ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ. (ETV Bharat)

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಅವರನ್ನು ಕರೆದು ಮಾತಾಡಿ ಭರವಸೆ ನೀಡಲಿ. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿಭಟಿಸಲು ಅವಕಾಶ ನೀಡದೇ ಇದ್ದಲ್ಲಿ ನಾನೇ ಬಂದು ಪ್ರತಿಭಟನೆಗೆ ಕೂರುತ್ತೇನೆ ಎಂದು ಅವರು ಎಚ್ಚರಿಕೆ ರವಾನಿಸಿದರು.

R Ashok demands increase in honorarium for Anganwadi workers as mentioned in the manifesto
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಸಾಥ್​ ನೀಡಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ್ (ETV Bharat)

ಸಿಎಂ ಸಿದ್ದರಾಮಯ್ಯ ಯಾವ ಇಲಾಖೆಯಲ್ಲಿಯೂ ಹುದ್ದೆಗಳನ್ನ ಭರ್ತಿ ಮಾಡಿಲ್ಲ. ಆದರೆ, ಅವರ ಜೇಬು ಮಾತ್ರ ಭರ್ತಿಯಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಭರವಸೆ ನೀಡಿದಂತೆಯೇ ಗೌರವಧನ ಹೆಚ್ಚಳ ಮಾಡಲು ಯಾಕೆ ಸಾಧ್ಯವಿಲ್ಲ?. ಬೇರೆ ರಾಜ್ಯದ ಸಂತ್ರಸ್ತರಿಗೆ ಪರಿಹಾರ ನೀಡಲು ಹಣವಿದೆ. ಆದರೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಣ ನೀಡುವಾಗ ಖಜಾನೆ ಖಾಲಿಯಾಗಿದೆ. ಇನ್ನು ಮೇಲೆ ಫ್ರೀ ಕೊಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಜನರ ಮೇಲೆ ತೆರಿಗೆ ಹೇರಲಾಗಿದೆ. ಪೆಟ್ರೋಲ್‌-ಡೀಸೆಲ್‌ ದರ ಹೆಚ್ಚಿಸಲಾಗಿದೆ. ಇಷ್ಟೆಲ್ಲ ಆದಾಯ ಬಂದರೂ ಅಂಗನವಾಡಿ ಕಾರ್ಯಕರ್ತೆಯರಿಗೆ ನೆರವಾಗುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಹೇಗೂ ನಿರ್ಗಮಿಸುತ್ತಿದ್ದಾರೆ. ಇಂತಹ ಸಮಯದಲ್ಲಿಯಾದರೂ ಜನರಿಗೆ ಸಹಾಯ ಮಾಡಲಿ ಎಂದು ಅಶೋಕ್ ತಿಳಿಸಿದರು.

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ - ANGANWADI WORKERS HONORARIUM HIKE

ETV Bharat Logo

Copyright © 2025 Ushodaya Enterprises Pvt. Ltd., All Rights Reserved.