ETV Bharat / state

ರೈಲ್ವೆ ಅಂಡರ್‌ಪಾಸ್ ನಿರ್ಮಾಣ ಕಾಮಗಾರಿ: ಬೆಂಗಳೂರು-ಮೈಸೂರು ರೈಲು ಸಂಚಾರ ವ್ಯತ್ಯಯ - Bengaluru Mysuru Trains Disrupted

ರೈಲ್ವೆ ಅಂಡರ್‌ಪಾಸ್ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರು- ಮೈಸೂರು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.

Bengaluru Mysuru train  Bengaluru  Mysuru  Ramanagara
ರೈಲುಗಳ ಸಂಚಾರದಲ್ಲಿ ವ್ಯತ್ಯಯ (ETV Bharat)
author img

By ETV Bharat Karnataka Team

Published : Jul 10, 2024, 10:22 AM IST

ರಾಮನಗರ: ಬೆಂಗಳೂರಿನ ಚೆಲ್ಲಘಟ್ಟ ಸಮೀಪ ಹೆಜ್ಜಾಲ ರೈಲ್ವೆ ಅಂಡರ್‌ಪಾಸ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳನ್ನು ಮಂಗಳವಾರ ರಾತ್ರಿ 10 ಗಂಟೆಯಿಂದ ಇಂದು ಬೆಳಗ್ಗೆ 9 ಗಂಟೆಯವರೆಗೆ ಸ್ಥಗಿತಗೊಳಿಸಿ ಕಾಮಗಾರಿ ಮಾಡಲಾಗುತ್ತಿದೆ.

ಎಲ್ಲಾ ರೈಲುಗಳ ಸಂಚಾರ ಬಂದ್ ಆಗಿರುವ ಕಾರಣಕ್ಕೆ 10ರಿಂದ 12 ಸಾವಿರ ಪ್ರಯಾಣಿಕರಿಗೆ ತೊಂದರೆಯಾಗಿದೆ. ಬೆಂಗಳೂರಿಗೆ ಹೋಗಬೇಕಿರುವ ರೈಲುಗಳನ್ನು ಶೆಟ್ಟಿಹಳ್ಳಿ, ಚನ್ನಪಟ್ಟಣ, ರಾಮನಗರ, ಬಿಡದಿ ರೈಲು ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಾಗಿದೆ.

Bengaluru Mysuru train  Bengaluru  Mysuru  Ramanagara
ರೈಲು ಸಂಚಾರದಲ್ಲಿ ವ್ಯತ್ಯಯ (ETV Bharat)

ಇಂದು (ಬುಧವಾರ) ಬೆಳಗ್ಗೆ 5 ಗಂಟೆಗೆ ಮುಗಿಯಬೇಕಿದ್ದ ಕಾಮಗಾರಿ ವಿಳಂಬವಾದ ಹಿನ್ನೆಲೆಯಲ್ಲಿ ರೈಲು ಸಂಚಾರಕ್ಕೆ ಸಮಸ್ಯೆಯಾಗಿದೆ. ಹೀಗಾಗಿ, 12ಕ್ಕೂ ಹೆಚ್ಚು ರೈಲುಗಳ ಸಂಚಾರ ಸ್ಥಗಿತವಾಗಿದೆ. ಪ್ರತಿದಿನ ಎರಡು ನಗರಿಗಳ ನಡುವೆ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಅಕ್ರಮ: ಮಾಜಿ ಸಚಿವ ಬಿ.ನಾಗೇಂದ್ರ, ಬಸವನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ - Valmiki Nigam Scam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.