ETV Bharat / state

ರಾಜ್ಯದಲ್ಲಿ ಮತ್ತೆ ಹಿಂಗಾರು ಸಕ್ರಿಯ: ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ನೈಋತ್ಯ ಬಂಗಾಳ ಕೊಲ್ಲಿಯಲ್ಲಿನ ಹವಾಮಾನ ಬದಲಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹಿಂಗಾರು ಮತ್ತೆ ಸಕ್ರಿಯಗೊಂಡಿದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Rain  alert
ಮಳೆ (IANS)
author img

By ETV Bharat Karnataka Team

Published : Nov 14, 2024, 7:43 PM IST

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಹವಾಮಾನ ಇಲಾಖೆಯು ದಕ್ಷಿಣ ಒಳನಾಡಿನಲ್ಲಿ ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮುಂದಿನ 24 ಗಂಟೆಗಳ ಕಾಲ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಕರ್ನಾಟಕದ ವಿಜಯಪುರ, ಯಾದಗಿರಿ, ಬೀದರ್, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ಆಕಾಶ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕರ ಮಾಹಿತಿ: ''ವಾಯು ಚಂಡಮಾರುತದ ಪರಿಚಲನೆ ಈಗ ಉತ್ತರ ತಮಿಳುನಾಡಿನ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿದೆ. ಹೀಗಾಗಿ ಮತ್ತೆ ಹಿಂಗಾರು ಚುರುಕಾಗಿದ್ದು, ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಳೆ ಬೀಳುತ್ತಿದೆ. ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಒಣ ಹವೆ ಮುಂದುವರೆದಿದೆ. ನಿನ್ನೆಯಿಂದ ಅತಿ ಹೆಚ್ಚು 1 ಸೆಂ.ಮೀ ಮಳೆ ಹಾಸನ ಜಿಲ್ಲೆಯಲ್ಲಿ ಸುರಿದಿದೆ'' ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ವಾಯುವ್ಯ ಸಾರಿಗೆ ಸಂಸ್ಥೆಗೆ ಹೈಟೆಕ್ ಬಸ್​ಗಳ ಬಲ: ಈ ವಾಹನಗಳ ವಿಶೇಷತೆ ಏನ್​ ಗೊತ್ತಾ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.