ಬೆಳಗಾವಿ: ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ್ದ ರಾಜಸ್ಥಾನದ ರಾಜ್ಯಸಭಾ ಸದಸ್ಯ ನೀರಜ್ ಡಾಂಗಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನಾರೋಗ್ಯ ಸಮಸ್ಯೆ ಕಾಣಿಸುತ್ತಿದ್ದಂತೆ ತಕ್ಷಣ ನೀರಜ್ ಡಾಂಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ನೀರಜ್ ಡಾಂಗಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದರು. ವೈದ್ಯರಿಂದ ಮಾಹಿತಿ ಪಡೆದು, ಬೇಗ ಗುಣಮುಖರಾಗುವಂತೆ ಹಾರೈಸಿದರು.
ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿ ಮತ್ತಿತರರು ಇದ್ದರು.
ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಎರಡು ದಿನಗಳ ಅದ್ಧೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಗುರುವಾರ ರಾತ್ರಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಗೊಳಿಸಲಾಗಿತ್ತು.
ಇದನ್ನೂ ಓದಿ: ಮೈಸೂರು: ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡ ದರ್ಶನ್