ETV Bharat / state

ಮತದಾನ ಜಾಗೃತಿ: ವಿಶೇಷ ಚೇತನರ ಬೈಕ್​ ಜಾಥಾಕ್ಕೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಚಾಲನೆ - Voter Awareness Jatha

ಮತದಾನದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಬೆಂಗಳೂರಿನಲ್ಲಿ ಇಂದು ವಿಶೇಷಚೇತನರ ಬೈಕ್​ ಜಾಥಾ ಹಮ್ಮಿಕೊಳ್ಳಲಾಯಿತು.

RAJNEESH GOYAL INAUGURATED BIKE JATHA OF PHYSICALLY CHALLENGED
ವಿಶೇಷ ಚೇತನರ ಬೈಕ್​ ಜಾಥಾಕ್ಕೆ ಚಾಲನೆ ನೀಡಿದ ರಜನೀಶ್ ಗೋಯಲ್
author img

By ETV Bharat Karnataka Team

Published : Mar 27, 2024, 12:40 PM IST

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಚೇತನರ ದ್ವಿಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಇಂದು ಚಾಲನೆ ಕೊಟ್ಟರು. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶೇಷ ಚೇತನರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು.

ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಅಪರ ಮುಖ್ಯ ಚುನಾವಣಾಧಿಕಾರಿ ಕೂರ್ಮ ರಾವ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಧಾನಸೌಧದ ಮುಂಭಾಗದಿಂದ ಕಂಠೀರವ ಕ್ರೀಡಾಂಗಣದವರೆಗೆ ವಿಶೇಷಚೇತನರ ದ್ವಿಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಪಂಜಿನ ಮೆರವಣಿಗೆ, ಪಾರಂಪರಿಕ ನಡಿಗೆಗೆ ಒಲಿದು ಬಂದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.