ETV Bharat / state

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್​​ನಿಂದ ಮೂವರು ನಾಮಪತ್ರ ಸಲ್ಲಿಕೆ - ನಾಮಪತ್ರ ಸಲ್ಲಿಕೆ

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್​​ನಿಂದ ಅಜಯ್ ಮಾಕೆನ್, ಜೆ.ಸಿ.ಚಂದ್ರಶೇಖರ್ ಹಾಗೂ ಡಾ.ಸೈಯದ್ ನಾಸಿರ್ ಹುಸೇನ್ ಅವರು ಇಂದು ನಾಮಪತ್ರ ಸಲ್ಲಿಸಿದರು.

Etv Bharat
Etv Bharat
author img

By ETV Bharat Karnataka Team

Published : Feb 15, 2024, 1:48 PM IST

Updated : Feb 15, 2024, 3:35 PM IST

ಡಿಸಿಎಂ ಡಿ.ಕೆ. ಶಿವಕುಮಾರ್​

ಬೆಂಗಳೂರು: ಎಐಸಿಸಿ ಖಜಾಂಚಿಯಾಗಿರುವ ದೆಹಲಿ ಮೂಲದ ಅಜಯ್ ಮಾಕೆನ್, ಹಾಲಿ ಸದಸ್ಯರಾದ ಜೆ.ಸಿ.ಚಂದ್ರಶೇಖರ್ ಹಾಗೂ ಡಾ.ಸೈಯದ್ ನಾಸಿರ್ ಹುಸೇನ್ ಅವರು ರಾಜ್ಯಸಭಾ ಚುನಾವಣೆ ಅಭ್ಯರ್ಥಿಗಳಾಗಿ ಕಾಂಗ್ರೆಸ್​​ನಿಂದ ಚುನಾವಣಾ ಅಧಿಕಾರಿಗಳಿಗೆ ಇಂದು ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ‌ ಡಿ.ಕೆ.ಶಿವಕುಮಾರ್, ಆಹಾರ ಇಲಾಖೆ ಸಚಿವ ಮುನಿಯಪ್ಪ ಅವರು ಉಮೇದುದಾರರಾಗಿ ಜೊತೆಗಿದ್ದರು.

rajya sabha election
ಕಾಂಗ್ರೆಸ್​​ನಿಂದ ಮೂವರು ನಾಮಪತ್ರ ಸಲ್ಲಿಕೆ

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮೂವರನ್ನ ಆಭ್ಯರ್ಥಿಗಳಾಗಿ ಆಯ್ಕೆ ಮಾಡಿ ಇಂದು ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ರಾಜ್ಯದ ಜನತೆ ಕಾಂಗ್ರೆಸ್​​ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಮೂವರು ಆಭ್ಯರ್ಥಿಗಳು‌ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿ ರಾಜ್ಯಕ್ಕೆ ನ್ಯಾಯ ಸಲ್ಲಿಸುವ ವಿಶ್ವಾಸವಿದೆ ಎಂದು ಭರವಸೆ ವ್ಯಕ್ತಪಡಿಸುತ್ತಾರೆ.

rajya sabha election
ಕಾಂಗ್ರೆಸ್​​ನಿಂದ ಮೂವರು ನಾಮಪತ್ರ ಸಲ್ಲಿಕೆ

ಐದನೇ ಆಭ್ಯರ್ಥಿ ಕುಪೇಂದ್ರ ರೆಡ್ಡಿ ಅಖಾಡ ವಿಚಾರ ಸಂಬಂಧ ಅವರ (ಬಿಜೆಪಿ-ಜೆಡಿಎಸ್ ಮೈತ್ರಿಕೂಟ)ಪ್ರಯತ್ನ ಅವರು ಮಾಡಲಿ ನಮ್ಮ‌ ಒಗ್ಗಟ್ಟಿನ ಪ್ರದರ್ಶನವನ್ನು ಮತದಾನದ ದಿನ ತೋರಿಸುತ್ತೇವೆ. ಕಾಂಗ್ರೆಸ್​​ನಿಂದ ಅಡ್ಡಮತದಾನ ಸಂಸ್ಕೃತಿ ಬಗ್ಗೆ ಜೆಡಿಎಸ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಆ ಪಕ್ಷ ವಿಫಲವಾಗಿದೆ. ಈ ಹಿನ್ನೆಲೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಒಟ್ಟಿಗೆ ನೆಂಟಸ್ತನ ಮಾಡಿದೆ. ಆ ಪಕ್ಷದಲ್ಲಿ ಇರುವವರು ಅವರ ಆತ್ಮಸಾಕ್ಷಿ ಮತಗಳನ್ನು ನಮಗೆ ಕೊಡಲಿದ್ದಾರೆ ಎಂಬ ನಂಬಿಕೆಯಿದೆ. ಎಷ್ಟು ಮತಗಳು ಬರಲಿವೆ ಎಂಬುದು ಮತದಾನದ ದಿನ ತಿಳಿಯಲಿದೆ ಎಂದರು.

ಅಜಯ್ ಮಾಕೆನ್ ಸ್ಪರ್ಧೆಗೆ ಆಕ್ಷೇಪ ವಿಚಾರ ಸಂಬಂಧ ಮಾತನಾಡಿದ ಡಿಕೆಶಿ, ಈ ಪ್ರಶ್ನೆಯನ್ನು ‌ನೀವು ಬಿಜೆಪಿಗೆ ಕೇಳಬೇಕು. ಈ ಹಿಂದೆ ಬಿಜೆಪಿಯಿಂದ‌ ಹೊರಗಿನವರನ್ನ ಕಣಕ್ಕೆ ಇಳಿಸಲಿರಲಿಲ್ಲವೇ? ಅಜಯ್ ಮಾಕೆನ್ ಕುಟುಂಬ ದೇಶಕ್ಕಾಗಿ ತ್ಯಾಗ ಮಾಡಿದೆ. ದೇಶದ ಐಕ್ಯತೆ, ಸಮಗ್ರತೆ ಹಾಗೂ ಶಾಂತಿಗಾಗಿ ಪ್ರಾಣ ತ್ಯಾಗ ಮಾಡಿದೆ. ಮಾಕೆನ್ ಅವರು ವಿದ್ಯಾರ್ಥಿ ನಾಯಕನಿಂದ ಹಿಡಿದು ಜೈಲಿನವರಿಗೆ ಹೋರಾಟ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಆಧಾರಸ್ತಂಭವಾಗಿದ್ದು, ಅದಕ್ಕಾಗಿ ಅವರನ್ನ ಆಯ್ಕೆ ಮಾಡಿದ್ದೇವೆ. ಬಹಳ ಸಂತೋಷದಿಂದ ಅವಕಾಶ ಕಲ್ಪಿಸಿದ್ದೇವೆ ಎಂದು ತಿಳಿಸಿದರು.

rajya sabha election
ಕಾಂಗ್ರೆಸ್​​ನಿಂದ ಮೂವರು ನಾಮಪತ್ರ ಸಲ್ಲಿಕೆ

ಇದನ್ನೂ ಓದಿ: ಎನ್​ಡಿಎ ಮೈತ್ರಿಕೂಟದಿಂದ ಇಬ್ಬರು ಅಭ್ಯರ್ಥಿಗಳು ರಾಜ್ಯಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ

ಇನ್ನು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಇಬ್ಬರು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಮೊದಲಿಗೆ ಮೈತ್ರಿಕೂಟದ ಚುನಾವಣಾ ಅಭ್ಯರ್ಥಿಯಾಗಿ ಬಿಜೆಪಿಯ ನಾರಾಯಣ ಭಾಂಡಗೆ ಹಾಗೂ ಜೆಡಿಎಸ್​​ನಿಂದ ಕುಪೇಂದ್ರ ರೆಡ್ಡಿ ಅವರು ನಾಮ ಪತ್ರ ಸಲ್ಲಿಸಿದರು. ಈ ವೇಳೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್ ವಿಜಯೇಂದ್ರ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಜೊತೆಗಿದ್ದರು.

ಇದನ್ನೂ ಓದಿ: ಮಾಜಿ ಪಿಎಂ ಮನಮೋಹನ್​ ಸಿಂಗ್​ ಬದಲಿಗೆ ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ನಾಮಪತ್ರ

Last Updated : Feb 15, 2024, 3:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.