ETV Bharat / state

ನಮ್ಮ ಕಂಡಕ್ಟರ್ ಮೇಲೆ ಬೇಕು ಅಂತಾನೆ ಪೋಕ್ಸೋ ಕೇಸ್​​ ಕೊಟ್ಟಿದ್ದಾರೆ: ಸಚಿವ ರಾಮಲಿಂಗಾರೆಡ್ಡಿ - KSRTC BUS CONDUCTOR ATTACK CASE

KSRTC ಬಸ್​​​ ಕಂಡಕ್ಟರ್​ ಮೇಲಿನ ಹಲ್ಲೆ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ. ನಮ್ಮ ಕಂಡಕ್ಟರ್​ ಮೇಲೆ ಬೇಕು ಅಂತಾನೇ ಪೋಕ್ಸೋ ಕೇಸ್​ ಕೊಟ್ಟಿದ್ದಾರೆ ಎಂದು ಸಾರಿಗೆ ಸಚಿವರು ಮಾಧ್ಯಮ ಹೇಳಿಕೆ ನೀಡಿದ್ದಾರೆ.

MINISTER RAMALINGA REDDY  POCSO CASE ON CONDUCTOR  BELAGAVI  ಕಂಡಕ್ಟರ್​ ಮಹಾದೇವ ಹುಕ್ಕೇರಿ
ನಮ್ಮ ಕಂಡಕ್ಟರ್ ಮೇಲೆ ಬೇಕು ಅಂತಾನೆ ಪೋಕ್ಸೋ ಕೇಸ್​​ ಕೊಟ್ಟಿದ್ದಾರೆ: ಸಚಿವ ರಾಮಲಿಂಗಾರೆಡ್ಡಿ (ETV Bharat)
author img

By ETV Bharat Karnataka Team

Published : Feb 24, 2025, 11:03 AM IST

Updated : Feb 24, 2025, 12:22 PM IST

ಬೆಳಗಾವಿ: "ನಮ್ಮ ಕಂಡಕ್ಟರ್​ ಮಹಾದೇವ ಹುಕ್ಕೇರಿ ಮೇಲೆ ಬೇಕು ಅಂತಾನೇ ಪೋಕ್ಸೋ ಕೇಸ್​ ಕೊಟ್ಟಿದ್ದಾರೆ. ಅವತ್ತು ಬಸ್​​ನಲ್ಲಿ ಒಬ್ಬರು - ಇಬ್ಬರು ಇರಲಿಲ್ಲ. 90 ಜನ ಪ್ರಯಾಣಿಸುತ್ತಿದ್ದರು. ನೋಡೋಣ ಆ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ" ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, "ಮಹಾದೇವ ಎನ್ನುವ ಕಂಡಕ್ಟರ್ ಕಳೆದ ಐದು ವರ್ಷಗಳಿಂದ ಅದೇ ರೂಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವತ್ತು ಇಬ್ಬರು ಹುಡುಗ - ಹುಡುಗಿ ಬಸ್​ನಲ್ಲಿ ಹತ್ತಿದ್ದರು. ಇಬ್ಬರೂ ಅಪ್ರಾಪ್ತರು. ಹುಡುಗ ಕೂಡ ಜಿರೋ ಟಿಕೆಟ್ ತೆಗೆದುಕೊಂಡು ಪ್ರಯಾಣಿಸಿದ್ದಾರೆ. ಆಗ ಕಂಡಕ್ಟರ್ ಕನ್ನಡದಲ್ಲಿ ಕೇಳಿದ್ದಾರೆ. ಅವರು ಮರಾಠಿಯಲ್ಲಿ ಮಾತನಾಡಿದ್ದಾರೆ‌. ಕಂಡಕ್ಟರ್​ಗೆ ಮರಾಠಿ ಬರುವುದಿಲ್ಲ. ಅವರಿಗೆ ಕನ್ನಡ ಬರುವುದಿಲ್ಲವಂತೆ. ಹೀಗೆ ಮಾತಿಗೆ ಮಾತು ಬೆಳೆದಿದೆ. ಫೋನ್ ಮಾಡಿ ಮುಂದಿನ ನಿಲ್ದಾಣದಲ್ಲಿ ಅವರ ಕಡೆಯವರನ್ನು ಕರೆಸಿ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದಾರೆ" ಎಂದು ವಿವರಿಸಿದರು.

ಸಚಿವ ರಾಮಲಿಂಗಾರೆಡ್ಡಿ ಮಾಧ್ಯಮ ಹೇಳಿಕೆ (ETV Bharat)

ಬೇಕು ಅಂತಾನೇ ಪೋಕ್ಸೋ ಕೇಸ್:"ಬಾಳೇಕುಂದ್ರಿ ಬಳಿ ಮಧ್ಯಾಹ್ನ 1 ಗಂಟೆಗೆ ಘಟನೆ ನಡೆದಿದೆ. ಆಮೇಲೆ ನಮ್ಮ ಇಲಾಖೆಯವರು ದೂರು ಕೊಟ್ಟ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೂ ಅವರನ್ನು ಒಪ್ಪಿಸಿದ್ದಾರೆ. ಮಾರನೇ ದಿನ ಕಂಡಕ್ಟರ್ ಮೇಲೆ ಬೇಕು ಅಂತಾನೇ ಪೋಕ್ಸೋ ಕೇಸ್ ಕೊಟ್ಟಿದ್ದಾರೆ" ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಅಗತ್ಯವಾಗಿ ಎಲ್ಲರೂ ಕನ್ನಡ ಕಲಿಯಬೇಕು‌: ಟಿ.ಎ. ನಾರಾಯಣಗೌಡರು ಮಂಗಳವಾರ ಬೆಳಗಾವಿಗೆ ಬಂದು ಪ್ರತಿಭಟನೆ ನಡೆಸುವ ಎಚ್ಚರಿಕೆಗೆ ಪ್ರತಿಕ್ರಿಯಿಸಿದ ಸಚಿವರು "ಬಸ್​ನಲ್ಲಿ ಸಣ್ಣಪುಟ್ಟ ಗಲಾಟೆಗಳು ನಡೆಯುತ್ತವೆ. ಆದರೆ, ಇದು ಭಾಷೆ ವಿಚಾರದಲ್ಲಿ ಗಲಾಟೆ ಮಾಡಿದ್ದಾರೆ. ಆದ್ದರಿಂದ ರಕ್ಷಣಾ ವೇದಿಕೆ ಸೇರಿ ವಿವಿಧ ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಅವರು ಬೇಕಾದಷ್ಟು ಮಾತೃ ಭಾಷೆ ಮಾತನಾಡಲಿ. ಆದರೆ, ನಮ್ಮ ಆಡಳಿತ ಭಾಷೆ ಕನ್ನಡ‌. ಹಾಗಾಗಿ, ಅಗತ್ಯವಾಗಿ ಎಲ್ಲರೂ ಕನ್ನಡ ಕಲಿಯಬೇಕು‌".

ಮಹಾರಾಷ್ಟ್ರಕ್ಕೆ ಬಸ್​ ಬಿಡುವ ಬಗ್ಗೆ ಮಾತನಾಡುತ್ತೇನೆ:"ಗಡಿ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ಇಲ್ಲ. ನಮ್ಮ ಗಡಿ ನಮ್ಮದು, ಅವರ ಗಡಿ ಅವರದಷ್ಟೇ. ನಾನು ಘಟನೆ ಬಗ್ಗೆ ಮಾತನಾಡಿದ್ದೇನೆ. ಇಲ್ಲಿಯ ರಾಜಕಾರಣಿಗಳನ್ನು ನೀವು ಕೇಳಿಲ್ಲ. ಹಾಗಾಗಿ, ಅವರು ಮಾತನಾಡಿಲ್ಲ" ಎಂದು ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡರು. "ಸಾರಿಗೆ ಇಲಾಖೆ ಕಾರ್ಯದರ್ಶಿ ಪ್ರಸಾದ ಅವರಿಗೆ ಮಹಾರಾಷ್ಟ್ರ ಅಧಿಕಾರಿಗಳ ಜೊತೆಗೆ ಮಾತನಾಡುವಂತೆ ತಿಳಿಸಿದ್ದೇನೆ. ಅದೇ ರೀತಿ ಮೊನ್ನೆ ಮಹಾರಾಷ್ಟ್ರ ಸಚಿವರು ಬೆಂಗಳೂರಿಗೆ ಬಂದಿದ್ದರು. ನೋಡೋಣ ಇವತ್ತು ಮಹಾರಾಷ್ಟ್ರಕ್ಕೆ ಬಸ್​ ಬಿಡುವ ಬಗ್ಗೆ ಮಾತನಾಡುತ್ತೇನೆ" ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಕೊಲೆಗಡುಕರು ಮತ್ತೊಬ್ಬರು ಎಲ್ಲಾ ಬಿಜೆಪಿ ಪಕ್ಷದಲ್ಲಿ: ಕಾಂಗ್ರೆಸ್​​ನಲ್ಲಿ ಭ್ರಷ್ಟರು, ಕೊಲೆಗಡುಕರಿಗೆ ರಕ್ಷಣೆ ಇದೆ ಎಂಬ ಸಿ.ಟಿ.ರವಿ ಆರೋಪಕ್ಕೆ "ಅಂತವರೆಲ್ಲಾ ಅವರ ಪಕ್ಷದಲ್ಲೆ ಇದ್ದಾರಲ್ಲ. ಭ್ರಷ್ಟರು, ಕೊಲೆಗಡುಕರು ಮತ್ತೊಬ್ಬರು ಎಲ್ಲಾ ಬಿಜೆಪಿ ಪಕ್ಷದಲ್ಲೆ ಇದ್ದಾರೆ. ಅವರಿಗೆ ಬೆಂಬಲಿಸುವುದು ಬಿಜೆಪಿಯವರು. ನಮ್ಮ ಪಕ್ಷದಲ್ಲಿ ಯಾರೂ ಅಂತವರಿಲ್ಲ. ನಮ್ಮಲ್ಲಿ ಸಚ್ಚಾರಿತ್ರ್ಯವುಳ್ಳವರಿದ್ದಾರೆ" ಎಂದು ರಾಮಲಿಂಗಾರೆಡ್ಡಿ ತಿರುಗೇಟು ಕೊಟ್ಟರು.

7 ಜನ ಹಿರಿಯ ಸಚಿವರನ್ನು ಕೈ ಬಿಡುವ ವಿಚಾರಕ್ಕೆ, "ಗೊತ್ತಿಲ್ಲ, ಅದು ನಿಮಗೆ ಗೊತ್ತಿರಬಹುದು" ಎಂದು ಮಾಧ್ಯಮಗಳಿಗೆ ಮರು ಪ್ರಶ್ನಿಸಿದ ರಾಮಲಿಂಗಾರೆಡ್ಡಿ, ಗೃಹ ಸಚಿವ ಪರಮೇಶ್ವರ ರಾಜೀನಾಮೆ ಹೇಳಿಕೆ ಬಗ್ಗೆಯೂ "ಗೊತ್ತಿಲ್ಲ. ಗೃಹ ಜ್ಯೋತಿ ಹಣವನ್ನು ಮೊನ್ನೆ ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆ" ಎಂದರು.

ಇದನ್ನೂ ಓದಿ: 'ಮಂಗಳವಾರ ಬೆಳಗಾವಿಗೆ ಬರುತ್ತೇನೆ, ಅಷ್ಟರೊಳಗೆ ಕಂಡಕ್ಟರ್ ಮೇಲಿನ ಪೋಕ್ಸೋ ಕೇಸ್​ ವಾಪಸ್​ ಪಡೆಯಿರಿ'

ಇದನ್ನೂ ಓದಿ: ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ : ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಸ್ಥಗಿತ

ಇದನ್ನೂ ಓದಿ: ಬಿಜೆಪಿ ಮೈಸೂರು ಚಲೋಗೆ ಪೊಲೀಸ್ ಇಲಾಖೆಯಿಂದ ಅನುಮತಿ ನಿರಾಕರಣೆ

Last Updated : Feb 24, 2025, 12:22 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.