ETV Bharat / state

ರಾಮನಗರ: ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್​ ಇಟ್ಟು ವಿಡಿಯೋ ಮಾಡುತ್ತಿದ್ದ ಯುವಕ ವಶಕ್ಕೆ - CAMERA IN GIRLS TOILET

ರಾಮನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ ಆರೋಪಿ ಮತ್ತು ಆತನ ಮೊಬೈಲ್​ಅನ್ನು ಪೊಲೀಸರು ವಶಕ್ಕೆ ಪಡೆದು, ತನಿಖೆ ಕೈಗೊಂಡಿದ್ದಾರೆ.

ಘಟನೆ ಖಂಡಿಸಿ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಜೊತೆ ಎಸ್​ಪಿ ಮಾತುಕತೆ
ಘಟನೆ ಖಂಡಿಸಿ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಜೊತೆ ಎಸ್​ಪಿ ಮಾತುಕತೆ (ETV Bharat)
author img

By ETV Bharat Karnataka Team

Published : Sep 21, 2024, 8:59 AM IST

ರಾಮನಗರ: ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಕುಂಬಳಗೂಡು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ರಸ್ತೆಯಲ್ಲಿರುವ ಖಾಸಗಿ ಕಾಲೇಜಿನಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.

ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಶುಕ್ರವಾರ ಬೆಳಗ್ಗೆ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಇದನ್ನು ವಿದ್ಯಾರ್ಥಿನಿಯೋರ್ವಳು ಗಮನಿಸಿ, ಗಾಬರಿಯಿಂದ ಕಿರುಚಾಡಿ ಶೌಚಾಲಯದಿಂದ ಹೊರಗಡೆ ಬಂದು ಇತರೆ ಸಹಪಾಠಿಗಳಿಗೆ ಮಾಹಿತಿ ನೀಡಿದ್ದಳು. ಆಗ ವಿದ್ಯಾರ್ಥಿಗಳೆಲ್ಲ ಸೇರಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ವಿದ್ಯಾರ್ಥಿಯನ್ನು ರೆಡ್​ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಅದೇ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿಯೇ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ಕಾಲೇಜಿನ ಸಿಬ್ಬಂದಿಯ ಮಾಹಿತಿ ಮೇರೆಗೆ ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು, ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ. ವಿಡಿಯೋ ಚಿತ್ರೀಕರಣ ಮಾಡಿದ್ದ ಮೊಬೈಲ್​ ಅನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಿಂದ ಕಾಲೇಜು ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆ ಬೆನ್ನಲ್ಲೇ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದು, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ರಾಮನಗರ ಜಿಲ್ಲೆಯ ಎಸ್​ಪಿ ಕಾರ್ತಿಕ್ ರೆಡ್ಡಿ ಅವರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದರು.

ಇದನ್ನೂ ಓದಿ: ಮಧ್ಯರಾತ್ರಿ ರಸ್ತೆ ದಾಟುವಾಗ ಗಾಯಗೊಂಡ ಮಣ್ಣುಮುಕ್ಕ ಹಾವು: ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಕಿರಣ್ - SAND BOA SNAKE

ETV Bharat Logo

Copyright © 2024 Ushodaya Enterprises Pvt. Ltd., All Rights Reserved.