ETV Bharat / state

ಸತೀಶ್ ಜಾರಕಿಹೊಳಿಗೆ ನೋಟಿಸ್ ವದಂತಿ: ಸಚಿವರಿಗೆ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದ ಸುರ್ಜೇವಾಲ - SATISH JARAKIHOLI

ಬೆಳಗಾವಿಯ ಜೈ ಬಾಪು, ಜೈ ಭೀಮ, ಜೈ ಸಂವಿಧಾನ ರ‌್ಯಾಲಿ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ‌ ರಣದೀಪ್ ಸಿಂಗ್ ಸುರ್ಜೇವಾಲ ಅವರು ಬೆಳಗಾವಿಗೆ ಆಗಮಿಸಿದ್ದಾರೆ.

ರಣದೀಪ್ ಸಿಂಗ್ ಸುರ್ಜೇವಾಲ
ರಣದೀಪ್ ಸಿಂಗ್ ಸುರ್ಜೇವಾಲ (ETV Bharat)
author img

By ETV Bharat Karnataka Team

Published : Jan 17, 2025, 10:30 AM IST

ಬೆಳಗಾವಿ: ಕಾಂಗ್ರೆಸ್ ನೋಟಿಸ್ ನೀಡಿದೆ ಎಂಬ ವದಂತಿಗಳನ್ನೆಲ್ಲ ಯಾರೂ ಹಬ್ಬಿಸುತ್ತಿದ್ದಾರೆ ನನಗೆ ಗೊತ್ತಿಲ್ಲ. ಯಾವ ಸಚಿವರಿಗೂ, ಯಾವ ವ್ಯಕ್ತಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ. ಬಿಜೆಪಿ ಪ್ರಾಯೋಜಿತ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸ ಇಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ‌ ರಣದೀಪ್ ಸಿಂಗ್ ಸುರ್ಜೇವಾಲ ಅವರು ಸ್ಪಷ್ಟಪಡಿಸಿದರು.

ಬೆಳಗಾವಿ ಸಾಂಬ್ರಾ ವಿಮಾನ‌ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಸುರ್ಜೇವಾಲ ಅವರು ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಪಕ್ಷದಿಂದ ನೋಟಿಸ್ ವದಂತಿ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಯಾವ ಸಚಿವರಿಗೂ ನೋಟಿಸ್ ನೀಡಲು ಕಾರಣವಿಲ್ಲ. ಇವೆಲ್ಲ ಕೇವಲ ವದಂತಿ ಎಂದು ಸಷ್ಪಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಚರ್ಚೆ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗುತ್ತಿದ್ದರೆ, ಅವರು ಇಲ್ಲಿ ಯಾಕೆ ಬರುತ್ತಿದ್ದರು ಎಂದು ಮರುಪ್ರಶ್ನಿಸುವ ಮೂಲಕ ಅದಕ್ಕೂ ಸುರ್ಜೇವಾಲ ತೆರೆ ಎಳೆದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ‌ ರಣದೀಪ್ ಸಿಂಗ್ ಸುರ್ಜೇವಾಲ (ETV Bharat)

ಬೆಳಗಾವಿಯ ಜೈ ಬಾಪು, ಜೈ ಭೀಮ, ಜೈ ಸಂವಿಧಾನ ರ‌್ಯಾಲಿ ಹೊಸ ಕ್ರಾಂತಿಗೆ ಸೂತ್ರ: 100 ವರ್ಷಗಳ ಮೊದಲು ಮಹಾತ್ಮ ಗಾಂಧಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧ್ಯಕ್ಷರಾದಾಗ ಆಂಗ್ಲರ ವಿರುದ್ಧ ಸ್ವಾತಂತ್ರ್ಯ ಸಿಕ್ಕಿತ್ತು. ಈಗ 100 ವರ್ಷಗಳ ಮೇಲೆ ಭೇದಭಾವ, ಸಂವಿಧಾನ ಮೇಲಿನ ದಾಳಿಯ ವಿರುದ್ಧ ಹೊಸ ಕ್ರಾಂತಿಗೆ ಬೆಳಗಾವಿಯಲ್ಲಿ ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮ ಸೂತ್ರವಾಗಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ‌ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು.

ಬೆಳಗಾವಿಯ ಐತಿಹಾಸಿಕ ಭೂಮಿಯ ಜೊತೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಬಂಧ ದಶಕಗಳಿಂದ ಇದೆ. ಈಗ ಮತ್ತೊಮ್ಮೆ ಜನವರಿ 21ರಂದು ಜೈ ಬಾಪು, ಜೈ ಭೀಮ, ಜೈ ಸಂವಿಧಾನ ರ‌್ಯಾಲಿ ಆಯೋಜನೆ ಮಾಡಿದ್ದೇವೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿ ದೇಶದ ಎಲ್ಲಾ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ ಎಂದರು.

ಸಂಸತ್‌ನಲ್ಲಿ ದೇಶದ ಗೃಹ ಸಚಿವ ಅಮಿತ್ ಶಾ ಕೇವಲ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಮಾತ್ರ ಅಪಮಾನ ಮಾಡಿಲ್ಲ. ಅಂಬೇಡ್ಕರ್ ಅವರ ತತ್ವಗಳನ್ನು ನಂಬುವವರ ಬಗ್ಗೆ ಅಪಹಾಸ್ಯ ಮಾಡಿದ್ದಾರೆ. ಸಂವಿಧಾನಿಕ ಅಧಿಕಾರವನ್ನು ಬಿಜೆಪಿಯಿಂದ ಬುಲ್ಡೋಜರ್ ಕೆಳಗೆ ಹಿಸುಕಲಾಗುತ್ತಿದೆ. ಹೀಗಾಗಿ ಜನವರಿ 21ರಂದು ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ, ಜೈ ಸಂವಿಧಾನ ರ‌್ಯಾಲಿ ಹಮ್ಮಿಕೊಂಡಿದ್ದೇವೆ ಎಂದು ಸುರ್ಜೇವಾಲ ತಿಳಿಸಿದರು.

ಜನವರಿ 27ರಂದು ಅಂಬೇಡ್ಕರ್ ಜನ್ಮಸ್ಥಳ ಮಧ್ಯಪ್ರದೇಶದಲ್ಲಿ ರ‌್ಯಾಲಿ ನಡೆಯಲಿದೆ. ಒಂದೆಡೆ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಅಪಮಾನ ಮಾಡುತ್ತಾರೆ. ಮತ್ತೊಂದೆಡೆ ದಲಿತರು, ಹಿಂದುಳಿದವರು, ಮಹಿಳೆಯರು, ಯುವಕರ ಅಧಿಕಾರ ಕಿತ್ತುಕೊಳ್ಳುತ್ತಾರೆ. ಹೀಗಾಗಿ ದೇಶಾದ್ಯಂತ ಇಂದು ಹೊಸ ಕ್ರಾಂತಿ ಮಾಡುವ ಅವಶ್ಯಕತೆ ಇದೆ. ಆ ನಿಟ್ಟಿನಲ್ಲಿ ಬೆಳಗಾವಿಯಿಂದ ಹೊರಹೊಮ್ಮುವ ಧ್ವನಿ ದೇಶದ ರಾಜಕಾರಣಕ್ಕೆ ಹೊಸ ದಿಕ್ಕು ನೀಡಲಿದೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಬೆಳಗಾವಿಗೆ ಬಂದು ಸಭೆ ಮಾಡಲಿದ್ದಾರೆ. ಬೆಳಗಾವಿಯ ಸಮಾವೇಶ ಐತಿಹಾಸಿಕವಾಗಲಿದೆ ರಣದೀಪ್ ಸಿಂಗ್ ಸುರ್ಜೇವಾಲ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ನಮಗೆ ಯಾರೂ ಮಾತಾಡಬೇಡಿ ಅಂದಿಲ್ಲ, ಪಕ್ಷಕ್ಕೆ ಮುಜುಗರ ಆಗಬಾರದೆಂಬ ಅರಿವು ಇದೆ: ಸತೀಶ್ ಜಾರಕಿಹೊಳಿ

ಇದನ್ನೂ ಓದಿ: ಯಾವ ರೇಸೂ ಇಲ್ಲ, ಸಿಎಂ ಕುರ್ಚಿ ಮೇಲೆ ಸಿದ್ದರಾಮಯ್ಯ ಗಟ್ಟಿಯಾಗಿ ಕುಳಿತಿದ್ದಾರೆ: ಸಚಿವ ಮಹದೇವಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.