ETV Bharat / state

ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು, 1 ಲಕ್ಷ ದಂಡ ವಿಧಿಸಿದ ಕಾರವಾರ ಕೋರ್ಟ್ - COURT SENTENCED RAPE ACCUSED

ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಕಾರವಾರ ಕೋರ್ಟ್ ತೀರ್ಪು ನೀಡಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (IANS)
author img

By ETV Bharat Karnataka Team

Published : Jan 26, 2025, 12:18 PM IST

Updated : Jan 26, 2025, 1:11 PM IST

ಕಾರವಾರ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕಾರವಾರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹವಾಸ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

2022ರಲ್ಲಿ ಅಂಕೋಲಾ ತಾಲೂಕಿನ 29 ವರ್ಷದ ವಿವಾಹಿತ ವ್ಯಕ್ತಿ 17 ವರ್ಷದ ಬಾಲಕಿಯೊಂದಿಗೆ ಸ್ನೇಹ ಬೆಳೆಸಿ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. ತನ್ನ ತಾಯಿ ಕರೆದಿರುವುದಾಗಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದನು. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಂದು ಹಾಕುವುದಾಗಿ ಜೀವ ಬೆದರಿಕೆ ಹಾಕಿದ್ದ ಎಂದು ಆರೋಪಿಸಿ ಬಾಲಕಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಅಂದಿನ ಪೊಲೀಸ್ ನಿರೀಕ್ಷಕ ಸಂತೋಷ್​ ಶೆಟ್ಟಿ ಅವರು ಆರೋಪಿಯನ್ನು ಬಂಧಿಸಿ, ಪೋಕ್ಸೋ ಪ್ರಕರಣ ದಾಖಲಿಸಿದ್ದರು. ಬಳಿಕ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪೀಠದ ನ್ಯಾಯಾಧೀಶೆ ಪ್ರತಿಭಾ ಕುಲಕರ್ಣಿ ಅವರು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿಯಾಗಿ 1 ವರ್ಷ ಜೈಲು ಶಿಕ್ಷೆಯ ತೀರ್ಪು ನೀಡಿದ್ದಾರೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕಿ ತನುಜಾ ಹೊಸಪಟ್ಟಣ ವಾದಿಸಿದ್ದರು.

ಅಂದಿನ ತನಿಖಾಧಿಕಾರಿ ಪೊಲೀಸ್ ನಿರೀಕ್ಷಕ ಸಂತೋಷ್​ ಶೆಟ್ಟಿ, ಪ್ರಕರಣದ ಮೇಲುಸ್ತುವಾರಿ ಅಧಿಕಾರಿ ಈಗಿನ ಅಂಕೋಲಾ ಪೊಲೀಸ್ ನಿರೀಕ್ಷಕ ಚಂದ್ರಶೇಖರ್​ ಮಠಪತಿ, ಎಎಸ್​​ಐ ಮಹಾಬಲೇಶ್ವರ ಗಡೇರ, ಸಹಾಯಕ ಗುರುರಾಜ ನಾಯ್ಕ ಪ್ರಕರಣದ ಸಾಕ್ಷಿಯಾಗಿ ಸಹಕರಿಸಿದ್ದರು.

ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಮಲತಂದೆಗೆ ತ್ರಿವಳಿ ಜೀವಾವಧಿ ವಿಧಿಸಿದ ನ್ಯಾಯಾಲಯ

Last Updated : Jan 26, 2025, 1:11 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.