ಹಾವೇರಿ: ಜಿಲ್ಲೆಯ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಪತ್ತೆಯಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬಾಲಕ ಕಳೆದೊಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ. ದಿನ ಬಿಟ್ಟು ದಿನ ಜ್ವರ ಕಾಣಿಸಿಕೊಳ್ಳುತ್ತಿತ್ತು. ಮೊದಲು ಈತನಿಗೆ ಜಾಂಡೀಸ್ ರೋಗ ಕಾಣಿಸಿಕೊಂಡಿದೆ. ಇದರಿಂದ ಗುಣಮುಖವಾಗಿ ಊರಿಗೆ ಹೋಗಿದ್ದನು. ಆದರೆ ಮತ್ತೆ ಜ್ವರ ಕಾಣಿಸಿಕೊಂಡಿದೆ. ಡೆಂಗ್ಯೂ ಇರಬಹುದೆಂದು ರಕ್ತ ಪರೀಕ್ಷೆ ನಡೆಸಿದಾಗ ಇಲಿ ಜ್ವರ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಸದ್ಯ ಆರೋಗ್ಯ ಸ್ಥಿರವಾಗಿದೆ.
ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಇಲಿ ಜ್ವರ ಕಾಣಿಸಿಕೊಂಡಿದೆ. ಆರೋಗ್ಯ ಇಲಾಖೆ ಜ್ವರದ ಮೂಲದ ಪತ್ತೆ ಹಚ್ಚಿ ಇತರೆಡೆ ಹರಡದಂತೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಹಾವೇರಿ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ ಹುದ್ದೆಗಳು: SSLC ಪಾಸ್ ಆಗಿದ್ರೆ ಮತ್ತೇಕೆ ತಡ? - Haveri District Court Jobs