ETV Bharat / state

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್​ಗೆ ಪೆಟ್ಟು: ಶೆಟ್ಟರ್ ಘರ್ ವಾಪಸಿಗೆ ಬೊಮ್ಮಾಯಿ ಸೇರಿ ಹಲವರ ಸ್ವಾಗತ - BJP leaders Reaction

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಯಾಗಿದ್ದು ಅನೇಕ ಬಿಜೆಪಿ ಮುಖಂಡರು ಸ್ವಾಗತಿಸಿದ್ದಾರೆ.

ಶೆಟ್ಟರ್ ಘರ್ ವಾಪಸಿ
ಶೆಟ್ಟರ್ ಘರ್ ವಾಪಸಿ
author img

By ETV Bharat Karnataka Team

Published : Jan 25, 2024, 8:16 PM IST

Updated : Jan 25, 2024, 8:55 PM IST

ಬೆಂಗಳೂರು: ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರಿದ್ದರಿಂದಾಗಿ ಲೋಕಸಭೆ ಚುನಾವಣೆ ಮುಂಚೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಪ್ರಮಾಣದ ರಾಜಕೀಯ ಬೆಳವಣಿಗೆ ಆಗಲಿದೆ. ಕಾಂಗ್ರೆಸ್ ಇಬ್ಭಾಗ ಆಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರು ಕಾಂಗ್ರೆಸ್ ಮೇಲಿನ ಪ್ರೀತಿಯಿಂದ ಹೋಗಿರಲಿಲ್ಲ. ಬಿಜೆಪಿಯಲ್ಲಿ ಆಗಿರುವ ಬೇಸರದಿಂದ ಕಾಂಗ್ರೆಸ್​ಗೆ ಹೋಗಿದ್ದರು. ಅವರನ್ನು ನಾನು ಜನಸಂಘದಿಂದ ಬಹಳ ಹತ್ತಿರದಿಂದ ನೋಡಿದ್ದೇನೆ. ಅವರಿಗೆ ಕಾಂಗ್ರೆಸ್ ಡಿಎನ್​​ಎ ಒಗ್ಗುವುದಿಲ್ಲ. ಶೆಟ್ಟರ್ ಅವರ ದೇಹ ಮಾತ್ರ ಕಾಂಗ್ರೆಸ್​ಗೆ ಹೋಗಿತ್ತು. ಅವರ ಮನಸ್ಸು ಬಿಜೆಪಿಯಲ್ಲಿಯೇ ಇತ್ತು. ಅವರಿಗೆ ಕಾಂಗ್ರೆಸ್ ಸೇರಿದ ಮೇಲೆ ಅಲ್ಲಿನ ಮನಸ್ಥಿತಿ ಅರ್ಥವಾಗಿದೆ‌. ಇದು ಬಿಜೆಪಿ ಮತ್ತು ಜಗದೀಶ್ ಶೆಟ್ಟರ್ ಅವರಿಗೂ ಅನಕೂಲವಾಗಲಿದೆ ಎಂದು ಹೇಳಿದರು.

ಇದು ಕೇವಲ ಆರಂಭ. ಮುಂದಿನ ದಿನಗಳಲ್ಲಿ ಕೇವಲ ಬಿಜೆಪಿ ನಾಯಕರಷ್ಟೇ ಘರ್ ವಾಪಸಿ ಆಗುವುದಿಲ್ಲ. ಕಾಂಗ್ರೆಸ್​​ನ ಪ್ರಮುಖ ನಾಯಕರೂ ಕೂಡ ಪಕ್ಷಕ್ಕೆ ಬರಲಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಭಾಗವಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಜಗದೀಶ್ ಶೆಟ್ಟರ್​ ಅವರನ್ನು ಯಾರೂ ಬ್ಲ್ಯಾಕ್ ಮೇಲ್ ಮಾಡಲು ಸಾಧ್ಯವಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಯಾವಾಗಲೂ ಬ್ಲ್ಯಾಕ್ ಮೇಲ್ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದರು. ಇಡೀ ದೇಶದಲ್ಲಿ ದೇಶವೇ ಮೊದಲು ಎನ್ನುವುದು ಪ್ರಧಾನಿ ನರೇಂದ್ರ ಮೋದಿಯವರ ಸಿದ್ಧಾಂತವಾಗಿದೆ. ಈಗ ಎಡ, ಬಲ ಸಿದ್ಧಾಂತ ಇಲ್ಲ. ದೇಶದ ಅಭಿವೃದ್ಧಿ ಮೊದಲ ಆದ್ಯತೆ, ಈಗ ಅದೇ ರಾಜಕೀಯದ ಸಿದ್ಧಾಂತವಾಗಿದೆ ಎಂದು ಹೇಳಿದರು.

ಬಿಜೆಪಿ ಯಾವುದೇ ಸಮುದಾಯಕ್ಕೆ ಸೀಮಿತವಾದ ಪಕ್ಷವಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಇದೆ. ಅದಕ್ಕೆ ಜಗದೀಶ್ ಶೆಟ್ಟರ್ ಬಲ ಸೇರ್ಪಡೆಯಾಗಲಿದೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷ ಯಾರಿಗೆ ಯಾವುದೇ ಕ್ಷೇತ್ರದ ಟಿಕೆಟ್ ನೀಡಿದರೂ ಅವರ ಪರವಾಗಿ ನಾನು ರಾಜ್ಯಾದ್ಯಂತ ಕೆಲಸ ಮಾಡುತ್ತೇನೆ. ನಾವೆಲ್ಲರೂ ಸೇರಿ ಮತ್ತೆ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಮಂತ್ರಿ ಮಾಡಲು ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಮಾಜಿ ಶಾಸಕ ಪಿ ರಾಜೀವ್

ಕೊಪ್ಪಳದಲ್ಲಿ ಮಾತನಾಡಿದ ಮಾಜಿ ಶಾಸಕ ಪಿ ರಾಜೀವ್, ಭಾರತೀಯ ಜನತಾ ಪಕ್ಷ ವಿಚಾರಧಾರೆಗಳ ಮೇಲೆ ಕಟ್ಟಿದ ಪಕ್ಷ. ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳಿಗೆ ಒಗ್ಗಿಕೊಂಡವರು ಕಾಂಗ್ರೆಸ್‌ ಪಕ್ಷದ ವಂಶ ಪಾರಂಪರ್ಯ, ಗುಲಾಮಿತನ ರಾಜಕಾರಣಕ್ಕೆ ಹೊಂದಿಕೊಳ್ಳಲು ಸಾಧ್ಯವೇ ಇಲ್ಲ. ಜಗದೀಶ ಶೆಟ್ಟರ್‌ ಮರಳಿ ಬಿಜೆಪಿ ಸೇರ್ಪಡೆ ನಿರ್ಧಾರ ಸರಿಯಾಗಿದೆ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಆರಾಧನೆ ಮಾಡುವ ಸಂಸ್ಕೃತಿ ಇರೋರು ಮಾತ್ರ ಅಲ್ಲಿರೋದಕ್ಕೆ ಸಾಧ್ಯ. ದೇಶ, ರಾಷ್ಟ್ರೀಯತೆ, ಹಿಂದುತ್ವ ಈ ವಿಚಾರಗಳಿಂದ ಬೆಳೆದು ಬಂದವರು ಕಾಂಗ್ರೆಸ್​​ನಲ್ಲಿ ಹೊಂದಿಕೊಳ್ಳುವುದಿಲ್ಲ ಎಂಬ ವಿಶ್ವಾಸವಿತ್ತು. ಆ ಹಿನ್ನೆಲೆ ಶೆಟ್ಟರ್‌ ಅವರು ತೆಗೆದುಕೊಂಡ ನಿರ್ಧಾರ ಸರಿಯಾಗಿದೆ ಎಂದರು.

ಮಾಜಿ ಸಚಿವ ಕೆಎಸ್ ಈಶ್ವರಪ್ಪ

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಮೋದಿ ಅವರ ಕೈ ಬಲಪಡಿಸಲು ಎಲ್ಲರೂ ಕೆಲಸ ಮಾಡುತ್ತಿದ್ದಾರೆ. ಜಗದೀಶ್ ಶೆಟ್ಟರ್ ಅವರು ಇಂದು ಮತ್ತೆ ಬಿಜೆಪಿಗೆ ವಾಪಸ್ ಬಂದಿದ್ದು, ಲೋಕಸಭಾ ಚುನಾವಣೆಯಲ್ಲಿ 28 ಸೀಟು ಗೆಲ್ಲಲು ಸಹಕಾರಿಯಾಗಲಿದೆ. ಈ ಹಿಂದೆ ನಾವು 25 ಸ್ಥಾನ ಗೆದಿದ್ದೆವು. ಆದರೆ, ಸಣ್ಣಪುಟ್ಟ ಸಮಸ್ಯೆಗಳಿಂದ ಶೆಟ್ಟರ್ ಪಕ್ಷ ಬಿಟ್ಟಿದ್ದರು. ಅವರು ಬಿಜೆಪಿಗೆ ವಾಪಸ್ ಆಗುತ್ತಾರೆ ಎಂದು ಬಿಜೆಪಿ ಬಿಟ್ಟ ದಿನವೇ ನಾನು ಹೇಳಿದ್ದೆ, ಅದು ಇಂದು ಸತ್ಯವಾಗಿದೆ. ಶೆಟ್ಟರ್ ದೇಹದಲ್ಲಿ ಹಿಂದುತ್ವದ ರಕ್ತ ಹರಿಯುತ್ತಿದೆ. ಇದರಿಂದ ಅವರು ಬಿಜೆಪಿಗೆ ಬಂದಿದ್ದಾರೆ. ಪಕ್ಷದ ನಾಯಕತ್ವ ವಹಿಸಿದ ಅನೇಕ ನಾಯಕರಲ್ಲಿ ಅವರು ಸಹ ಒಬ್ಬರು. 28 ಸೀಟು ಗೆಲ್ಲಲು ನಾವೆಲ್ಲ ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದರು.

ಮಾಜಿ ಸಚಿವ ಸಿಎಸ್ ಪುಟ್ಟರಾಜು

ರಾಮ ಮಂದಿರ ಲೋಕಾರ್ಪಣೆ ರಾಷ್ಟ್ರದಲ್ಲಿ ದೊಡ್ಡ ಕ್ರಾಂತಿಯಾಗಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಬೇಕು ಎಂದು ಎಲ್ಲರೂ ಸಂಕಲ್ಪ ಮಾಡಿದ್ದಾರೆ. ಇಂತಹ ಸಂದರ್ಭಗದಲ್ಲಿ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಬಂದಿದ್ದಾರೆ. ಇದು ಪ್ರಾರಂಭ ಅಷ್ಟೇ. ಶೆಟ್ಟರ್ ಬಿಜೆಪಿಗೆ ಬಂದಿರೋದು 100ಕ್ಕೆ 1000 ಭಾಗ ಮೈತ್ರಿಗೆ ಅನುಕೂಲ ಆಗುತ್ತೆ. ಲೋಕಸಭಾ ಚುನಾವಣೆಗೆ ಶೆಟ್ಟರ್ ತೆಗೆದುಕೊಂಡಿರುವ ನಿರ್ಧಾರ ಕೈ ಹಿಡಿಯಲಿದೆ ಎಂದು ಶ್ರೀರಂಗಪಟ್ಟಣದಲ್ಲಿ ಮಾಜಿ ಸಚಿವ ಸಿಎಸ್ ಪುಟ್ಟರಾಜು ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರಿನಲ್ಲಿ ಮಾತನಾಡಿರುವ ಸಂಸದ ನಳಿನ್ ಕುಮಾರ್ ಕಟೀಲ್, ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ‌ ಬಂದಿರುವುದನ್ನು ಸ್ವಾಗತಿಸುತ್ತೇನೆ. ಬಿಜೆಪಿ ಬಿಟ್ಟು ಹೋದವರು ಯಾರೂ ಕಾಂಗ್ರೆಸ್​ನಲ್ಲಿ ಶಾಶ್ವತವಾಗಿ ಉಳಿಯುವುದಿಲ್ಲ. ಅವರೆಲ್ಲರೂ ಅಲ್ಲಿನ ವಿಚಾರಧಾರೆ ತ್ಯಜಿಸಿ ಒಂದು ದಿನ ಬಿಜೆಪಿ ಸೇರುತ್ತಾರೆ. ಸದ್ಯ ಶೆಟ್ಟರ್ ಮೋದಿ ಆಡಳಿತ ನೋಡಿಯೇ ಮತ್ತೆ ಬಿಜೆಪಿಗೆ ಬಂದಿದಾರೆ.‌ ಅವರಿಗೆ ತಪ್ಪಿನ ಮನನ ಆಗಿರಬಹುದು, ಅದಕ್ಕೆ ಬಂದಿದ್ದಾರೆ. ಪಕ್ಷ ಬಿಟ್ಟ ಎಲ್ಲರೊಂದಿಗೆ ಮಾತುಕತೆ ಆಗುತ್ತಿದೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್​​ಗೆ ಗುಡ್​ಬೈ: ಬಿಜೆಪಿಗೆ ಮರಳಿದ ಜಗದೀಶ್ ಶೆಟ್ಟರ್

Last Updated : Jan 25, 2024, 8:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.