ETV Bharat / state

ತನಿಖೆಗೆ ಹೆದರಲ್ಲ, ತನಿಖೆಯನ್ನು ಎದುರಿಸಲು ಸಿದ್ಧನಿದ್ದೇನೆ : ಮುಖ್ಯಮಂತ್ರಿ ಸಿದ್ದರಾಮಯ್ಯ - MUDA Case

author img

By ETV Bharat Karnataka Team

Published : 3 hours ago

ಮುಡಾ ಹಗರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ ಆದೇಶದ ಬಗ್ಗೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

MUDA CASE
ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು : ''ನಾವು ತನಿಖೆಯನ್ನು ಎದುರಿಸಲು ತಯಾರಾಗಿದ್ದೇವೆ. ತನಿಖೆಗೆ ಹೆದುರುವುದಿಲ್ಲ ಹಾಗೂ ಕಾನೂನು ರೀತಿ ಹೋರಾಟ ಮಾಡಲು ತಯಾರಾಗಿದ್ದೇವೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ಜನಪ್ರತಿನಿಧಿಗಳ ನ್ಯಾಯಾಲಯ ನಿನ್ನೆ ಆದೇಶ ನೀಡಿದಂತೆ 17ಎ ಪ್ರಕಾರ ತನಿಖೆ ಮಾಡಲು ಅನುಮತಿ ನೀಡಲಾಗಿದೆ. ಆದೇಶದ ಪ್ರತಿ ನನಗೆ ದೊರೆತಿಲ್ಲ. ಆದೇಶವನ್ನು ಪೂರ್ಣವಾಗಿ ಓದಿದ ನಂತರ ಪ್ರತಿಕ್ರಿಯೆ ನೀಡುವೆ'' ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)

ಮೈಸೂರಿಗೆ ಲೋಕಾಯುಕ್ತಕ್ಕೆ ಶಿಫಾರಸು: ''ನಿನ್ನೆಯೂ ಕೂಡ ಮಾತುಗಳನ್ನು ಹೇಳಿದ್ದು ಈಗಲೂ ಅದನ್ನೇ ಪುನರುಚ್ಚರಿಸುತ್ತಿದ್ದೇನೆ. ನನಗೆ ತಿಳಿದಂತೆ ಮೈಸೂರು ಲೋಕಾಯುಕ್ತಕ್ಕೆ ಪ್ರಕರಣವನ್ನು ಶಿಫಾರಸು ಮಾಡಲಾಗಿದೆ. ಮೈಸೂರಿನಲ್ಲಿಯೇ ದೂರು ನೀಡಲಾಗಿದ್ದು, ದೂರುದಾರರು ಮೈಸೂರಿನವರು, ಮುಡಾ ಕೂಡ ಅಲ್ಲಿಯೇ ಇರುವುದರಿಂದ ಮೈಸೂರಿಗೆ ಶಿಫಾರಸು ಮಾಡಿರಬೇಕು ಎಂದು ಭಾವಿಸಿದ್ದೇನೆ'' ಎಂದು ಹೇಳಿದರು.

ಪಿ.ಎನ್.ದೇಸಾಯಿಯವರ ಆಯೋಗದ ತನಿಖೆ ಮುಂದುವರೆಯಲಿದೆ: ''ಇಂದಿನ ಪೂರ್ಣ ಆದೇಶ ಸಿಕ್ಕಿದ ಮೇಲೆ ವಕೀಲರೊಂದಿಗೆ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು''. ಮುಡಾ ಪ್ರಕರಣದ ತನಿಖೆಗೆ ಸರ್ಕಾರ ರಚಿಸಿದ್ದ ನಿವೃತ್ತ ನ್ಯಾ. ಪಿ.ಎನ್. ದೇಸಾಯಿ ಅವರ ಆಯೋಗ ಅದರ ತನಿಖೆ ಮುಂದುವರೆಯುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ''ನ್ಯಾಯಾಂಗ ತನಿಖೆ ಮುಂದುವರೆಯುತ್ತದೆ. ನಾನು ಪೂರ್ಣ ಆದೇಶ ಓದಿಲ್ಲ. ನಾಳೆ ಬೆಳಗ್ಗೆ ಈ ಬಗ್ಗೆ ಸಂಪೂರ್ಣ ಪ್ರತಿಕ್ರಿಯೆ ನೀಡುತ್ತೇನೆ'' ಎಂದು ಸಿಎಂ ತಿಳಿಸಿದರು.

ಮತ್ತೊಂದೆಡೆ ಮಂಡ್ಯದ ಚುಂಚನಗಿರಿಯಲ್ಲಿ ಮಾತನಾಡಿದ ಸಚಿವ ಎನ್. ಚಲುವರಾಯಸ್ವಾಮಿ, ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ ಎಂದರು.

ನಿನ್ನೆ ಹೈಕೋರ್ಟ್ ತೀರ್ಪು ಬಂದಿದೆ. 17ಎ ಪ್ರಕಾರ ತನಿಖೆಗೆ ಆದೇಶಿಸಿ, ಸೆ. 218ರಡಿ ಪ್ರಾಸಿಕ್ಯೂಷನ್ ಕೈಬಿಟ್ಟಿದ್ದಾರೆ. ತನಿಖೆ ಮಾಡಲು ಹೊರಟಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್ ಕೂಡ ತನಿಖೆಗೆ ಆದೇಶ ಮಾಡಿದೆ. ಲೀಗಲ್ ಆಗಿ ಏನು ತೀರ್ಮಾನ ಮಾಡಬೇಕೋ ಅದು ಆಗುತ್ತೆ. ಸುಪ್ರೀಂ ಕೋರ್ಟ್​ಗೆ ಹೋಗುವುದರ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಆದರೆ, ನಾವು ಕಾನೂನು ರೀತಿಯ ಹೋರಾಟ ಮುಂದುವರೆಸುತ್ತೇವೆ. ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ ನೈತಿಕ ಹಕ್ಕು ಬಿಜೆಪಿ-ಜೆಡಿಎಸ್​ಗೆ ಇಲ್ಲ. ಸದ್ಯ ಎರಡೂ ಪಕ್ಷಗಳು ಸೇರಿ ರೆಕ್ಕೆ ಪುಕ್ಕ ಬಂದಂಗೆ ಆಡುತ್ತಿವೆ, ಆಡಲಿ. ಒಂದು ದಿನ ಅವರಿಗೆ ಪಶ್ಚಾತ್ತಾಪ ಪಡುವ ಸಮಯ ಬರುತ್ತೆ. ಇದು ರಾಜಕೀಯ ವಿಷಯ. ನಮ್ಮ ಸರ್ಕಾರ ಇನ್ನೂ ನಾಲ್ಕು ವರ್ಷ ಇರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ - MUDA Scam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.