ETV Bharat / state

ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಸಕ್ರಿಯ: 3 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ - Mansoon Rain - MANSOON RAIN

ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ತನ್ನ ಆರ್ಭಟವನ್ನು ಮುಂದುವರೆಸಿದ್ದು ಕರಾವಳಿ ಜಿಲ್ಲೆಗಳಲ್ಲಂತೂ ಭಾರಿ ವರ್ಷಧಾರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಮೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಸಕ್ರಿಯ
ಮುಂಗಾರು ಸಕ್ರಿಯ (ETV Bharat)
author img

By ETV Bharat Karnataka Team

Published : Jun 26, 2024, 10:52 PM IST

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ತನ್ನ ಆರ್ಭಟವನ್ನು ಮುಂದುವರೆಸಿದ್ದು ಕರಾವಳಿ ಜಿಲ್ಲೆಗಳಲ್ಲಂತೂ ಭಾರೀ ವರ್ಷಧಾರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಮೂರು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ಅನ್ವಯವಾಗುವಂತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಕೊಡಲಾಗಿದೆ. ಇನ್ನು ಮಲೆನಾಡು ಭಾಗದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಉಳಿದಂತೆ ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ ಭಾರೀ ಮಳೆಯಾಗಲಿದೆ. ಅಲ್ಲಿನ ಪ್ರದೇಶಗಳಲ್ಲಿ ಗಾಳಿಯ ವೇಗವು 40 ರಿಂದ 50 ಕಿ.ಮೀ ಪ್ರತಿ ಘಂಟೆಗೆ ಬೀಸಲಿದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮತ್ತು ಅತಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಧಾರವಾಡ, ಹಾವೇರಿ, ಬೆಳಗಾವಿ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ 45 ರಿಂದ 55 ಕಿ.ಮೀ ಪ್ರತಿ ಘಂಟೆಗೆ ಗಾಳಿ ಬೀಸಲಿದ್ದು ಅಲ್ಲೂ ಹೆಚ್ಚು ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೀದ‌ರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.

ಮೀನುಗಾರರಿಗೆ ಎಚ್ಚರಿಕೆ: ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವಿರಲಿದ್ದು, 55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ರಾಜ್ಯಕ್ಕೆ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಆದ್ದರಿಂದ ಮೀನುಗಾರರು ಎಚ್ಚರಿಕೆಯಿಂದ ಇರಲು ಸೂಚಿಸಿದೆ.

ಬೆಂಗಳೂರು ನಗರದಲ್ಲಿ ಸಾಧಾರಣ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ ಪ್ರತಿ ಘಂಟೆಗೆ 30 ರಿಂದ 40 ಕಿ.ಮೀ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಡಿಗ್ರಿ ಮತ್ತು 21 ಡಿಗ್ರಿ ಇರಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ: ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ಅತಿ ಹೆಚ್ಚು 18 ಸೆ ಮೀ ಮಳೆಯಾಗಿದೆ 17, ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ 15, ದಕ್ಷಿಣ ಕನ್ನಡ ಜಿಲ್ಲೆಯ ಮಣಿ ಮತ್ತು ಮಂಗಳೂರು ವಿಮಾನ ನಿಲ್ದಾಣದಲ್ಲಿ ಜಿಲ್ಲೆಯಲ್ಲಿ ಕ್ರಾಮವಾಗಿ 13 ಮತ್ತು 14, ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 13 ಸೆ. ಮೀ ಮಳೆಯಾಗಿದೆ.

ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್.ಪುವಿಯರಸನ್, "ನೈಋತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿದ್ದು, ಕರಾವಳಿಯಲ್ಲಿ ಸಕ್ರಿಯವಾಗಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುತ್ತಿದೆ" ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ, ರೆಡ್​​​ ಅಲರ್ಟ್​ ಘೋಷಣೆ: ನಾಳೆ ಶಾಲೆಗಳಿಗೆ ರಜೆ - Heavy Rain In Dakshina Kannada

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.