ETV Bharat / state

ಮೊದಲ ಬಾರಿ 4 ಬೆಳೆಗೆ ಬೆಂಬಲ ಬೆಲೆ, ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲ: ಸಚಿವ ಶಿವಾನಂದ ಪಾಟೀಲ್ - Minister Shivananda Patil - MINISTER SHIVANANDA PATIL

ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಎಪಿಎಂಸಿ ಕಾಯ್ದೆ ಮರುಸ್ಥಾಪನೆಯ ಕುರಿತು ಮಾತನಾಡಿದ್ದಾರೆ. ಹೆಸರು ಕಾಳು, ಸೂರ್ಯಕಾಂತಿ, ಸೋಯಾಬಿನ್​​ ಮತ್ತು ಉದ್ದಿನಕಾಳನ್ನ ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಮಾಡಲಾಗುತ್ತಿದೆ ಎಂದಿದ್ದಾರೆ.

minister-shivananda-patil
ಸಚಿವ ಶಿವಾನಂದ ಪಾಟೀಲ್ (ETV Bharat)
author img

By ETV Bharat Karnataka Team

Published : Sep 6, 2024, 5:32 PM IST

ಬೆಂಗಳೂರು : ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲದಲ್ಲಿ ನಾಲ್ಕು ಬೆಳೆಗಳನ್ನು ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಮಾಡಲಾಗುತ್ತಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದರು.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಸರುಕಾಳು, ಸೂರ್ಯಕಾಂತಿ, ಸೋಯಾಬಿನ್ ಮತ್ತು ಉದ್ದಿನಕಾಳನ್ನು ಬೆಂಬಲ ಬೆಲೆ ಯೋಜನೆ ಅಡಿ ಖರೀದಿ ಮಾಡಲಾಗುತ್ತಿದೆ. ಸೋಯಾಬಿನ್ ಮತ್ತು ಉದ್ದಿನಕಾಳು ಖರೀದಿ ಪ್ರಕ್ರಿಯೆ ಆರಂಭಿಸಲು ನಿನ್ನೆ (ಗುರುವಾರ) ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

ಈಗಾಗಲೇ ಹೆಸರುಕಾಳು ಮತ್ತು ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ರಾಜ್ಯ ಸರ್ಕಾರ ಖರೀದಿ ಏಜೆನ್ಸಿಗಳನ್ನು ನೇಮಕ ಮಾಡಿದೆ. ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಸೂರ್ಯಕಾಂತಿ ಮತ್ತು 10 ಕ್ವಿಂಟಾಲ್ ಹೆಸರುಕಾಳು ಖರೀದಿ ಮಾಡಲಿದೆ. ಎಫ್.ಎ.ಕ್ಯೂ ಗುಣಮಟ್ಟದ ಸೋಯಾಬಿನ್​ಗೆ ಕ್ವಿಂಟಾಲ್​ಗೆ ರೂ 4,892 ಹಾಗೂ ಉದ್ದಿನ ಕಾಳಿಗೆ ಕ್ವಿಂಟಾಲ್​ಗೆ 7,400 ರೂ. ಬೆಲೆ ನಿಗದಿಪಡಿಸಲಾಗಿದೆ ಎಂದರು.

ಬೆಂಬಲ ಬೆಲೆಯಲ್ಲಿ ಇಷ್ಟೊಂದು ಖರೀದಿ: ಬೆಂಬಲ ಬೆಲೆಯಲ್ಲಿ ಸುಮಾರು 10 ಲಕ್ಷ ಕ್ವಿಂಟಾಲ್ ಸೋಯಾಬಿನ್ ಮತ್ತು 2 ಲಕ್ಷ ಕ್ವಿಂಟಾಲ್ ಉದ್ದಿನಕಾಳು ಖರೀದಿ ಮಾಡಲಾಗುವುದು. 2024-25ನೇ ಸಾಲಿನಲ್ಲಿ 4.10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 4.72 ಲಕ್ಷ ಮೆಟ್ರಿಕ್ ಟನ್ ಸೋಯಾಬಿನ್ ಹಾಗೂ 0.77 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 0.40 ಲಕ್ಷ ಮೆಟ್ರಿಕ್ ಟನ್ ಉದ್ದಿನಕಾಳು ಇಳುವರಿ ನಿರೀಕ್ಷೆ ಮಾಡಲಾಗಿತ್ತು. ಎಫ್.ಎ.ಕ್ಯೂ ಗುಣಮಟ್ಟದ ಹೆಸರುಕಾಳಿಗೆ ಪ್ರತಿ ಕ್ವಿಂಟಾಲ್​ಗೆ 8,682 ರೂ ಹಾಗೂ ಸೂರ್ಯಕಾಂತಿಗೆ 7,280 ರೂ. ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹೆಸರುಕಾಳು ಖರೀದಿಗೆ 172 ಖರೀದಿ ಕೇಂದ್ರ ಗುರುತಿಸಲಾಗಿದ್ದು, 1982 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಸೂರ್ಯಕಾಂತಿ ಖರೀದಿಗೆ 19 ಖರೀದಿ ಕೇಂದ್ರ ಗುರುತಿಸಲಾಗಿದ್ದು, 461 ರೈತರು ನೋಂದಣಿ ಮಾಡಿಕೊಂಡಿದ್ದಾರೆ‌. ಕೊಬ್ಬರಿ ಖರೀದಿಯಲ್ಲೂ ಈ ಬಾರಿ ಪ್ರಮುಖ ಪಾತ್ರ ವಹಿಸಲಾಗಿದ್ದು, ಇದೇ ಮೊದಲ ಬಾರಿಗೆ ಮಿಲ್ಲಿಂಗ್ ಕೊಬ್ಬರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲಾಗಿದೆ ಎಂದು ತಿಳಿಸಿದರು.

ಎಪಿಎಂಸಿ ಯಾರ್ಡ್​ಗಳಲ್ಲಿ 150 ಕೋಟಿ ರೂ. ವೆಚ್ಚದಲ್ಲಿ 14 ರಿಂದ 15 ಶೀಥಲ ಗೃಹಗಳನ್ನು ನಿರ್ಮಾಣ ಮಾಡಲಾಗುವುದು. ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ವಿಭಾಗವಾರು ವಿಜಿಲೆನ್ಸ್ ಸೆಲ್​​ಗಳನ್ನು ರಚಿಸಲಾಗಿದೆ. ವಿಜಿಲೆನ್ಸ್ ರಚನೆ ಪರಿಣಾಮ ಎಪಿಎಂಸಿ ಆದಾಯ ಕೂಡ ಹೆಚ್ಚಾಗಿದೆ. ಈ ವರ್ಷ ರೂ. 380 ರಿಂದ ರೂ. 400 ಕೋಟಿ ಆದಾಯ ನಿರೀಕ್ಷೆ ಮಾಡಲಾಗಿದ್ದು, ಆರ್ಥಿಕ ವರ್ಷದ 5 ತಿಂಗಳಲ್ಲಿ 133.15 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 77.42 ರೂ. ಕೋಟಿ ಆದಾಯ ಸಂಗ್ರಹವಾಗಿತ್ತು ಎಂದು ಹೇಳಿದರು.

ಪವರ್ ಲೂಮ್ ವಿದ್ಯುತ್ ಸಬ್ಸಿಡಿ ಮಿತಿ ರದ್ದು: ರಾಜ್ಯ ಸರ್ಕಾರ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳ ವಿದ್ಯುತ್ ಸಬ್ಸಿಡಿ ಮಿತಿ ರದ್ದುಪಡಿಸಿದೆ. ಇದರಿಂದ ಪ್ರತಿ ನೇಕಾರರಿಗೆ ವಾರ್ಷಿಕ ಕನಿಷ್ಠ 40,000 ರೂ. ಉಳಿತಾಯವಾಗಲಿದೆ ಎಂದು ಹೇಳಿದರು.

10.1 HPಯಿಂದ 20 HPವರೆಗಿನ ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳು ಬಳಕೆ ಮಾಡುವ ಪೂರ್ಣ ವಿದ್ಯುತ್​ಗೆ ಸಬ್ಸಿಡಿ ನೀಡಲಿದ್ದು, ನೇಕಾರರು ಪ್ರತಿ ಯೂನಿಟ್​​ಗೆ ರೂ. 1.25 ಮಾತ್ರ ಪಾವತಿ ಮಾಡಬೇಕು. ಸರ್ಕಾರದ ಈ ಕ್ರಮದಿಂದ 4000 ಘಟಕಗಳಿಗೆ ಅನುಕೂಲವಾಗಲಿದೆ.‌ ಇದುವರೆಗೆ ಮಾಸಿಕ 500 ಯೂನಿಟ್​ಗೆ ಮಾತ್ರ ಸಬ್ಸಿಡಿ ನೀಡಲಾಗುತ್ತಿತ್ತು. ಹೆಚ್ಚುವರಿ ಬಳಕೆಯ ವಿದ್ಯುತ್​ಗೆ ನೇಕಾರರು ವಿದ್ಯುತ್ ಕಂಪನಿಗಳು ನಿಗದಿಪಡಿಸಿರುವ ದರದಲ್ಲಿ ವಿದ್ಯುತ್ ಶುಲ್ಕ ಪಾವತಿಸಬೇಕಿತ್ತು. ಸರ್ಕಾರ ಸಬ್ಸಿಡಿ ಮಿತಿ ರದ್ದುಪಡಿಸಿರುವುದರಿಂದ ಮಾಸಿಕ ಎಷ್ಟೇ ಯೂನಿಟ್ ವಿದ್ಯುತ್ ಬಳಕೆ ಮಾಡಿದರೂ ರೂ 1.25 ದರ ವಿಧಿಸಲಾಗುವುದು ಎಂದು ವಿವರಿಸಿದರು.

ನಮ್ಮ ಸರ್ಕಾರ ಅಧಿಕಾರ ವಹಿಸಿಕೊಂಡ ಕೂಡಲೇ ಚುನಾವಣೆ ಸಮಯದಲ್ಲಿ ಕೊಟ್ಟ ಮಾತಿನಂತೆ 10 HPವರೆಗಿನ ಎಲ್ಲ ವಿದ್ಯುತ್​​ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ ಶೂನ್ಯದರದಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. 10.1 ರಿಂದ 20 HPವರೆಗೆ ಸಬ್ಸಿಡಿ ದರದಲ್ಲಿ 500 ಯೂನಿಟ್ ಪೂರೈಕೆ ಮಾಡಲಾಗುತ್ತಿತ್ತು. ನೇಕಾರರು 500 ಯೂನಿಟ್ ಮಿತಿ ರದ್ದುಪಡಿಸಿ ಪೂರ್ಣ ಪ್ರಮಾಣದಲ್ಲಿ ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ ಮಾಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ಸರ್ಕಾರ ನೇಕಾರರ ಬೇಡಿಕೆಗೆ ಸ್ಪಂದಿಸಿ 500 ಯೂನಿಟ್ ಮಿತಿ ರದ್ದುಪಡಿಸಿದೆ. ಈ ಕ್ರಮದಿಂದ ಸರ್ಕಾರಕ್ಕೆ ವಾರ್ಷಿಕ 17 ಕೋಟಿ ರೂ. ಹೊರೆಯಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಬಿಜೆಪಿ ಸರ್ಕಾರದ ಅವಧಿಯ ಎಪಿಎಂಸಿ ಕಾಯ್ದೆ ಹಿಂಪಡೆಯುವ ತಿದ್ದುಪಡಿ ವಿಧೇಯಕ ಅಂಗೀಕಾರ: ಬಿಜೆಪಿ, ಜೆಡಿಎಸ್​ ವಿರೋಧ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.