ETV Bharat / state

ಶಾಕ್​​​, ಗಾಯಗಳ ಆಂತರಿಕ‌ ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವು: ಮರಣೋತ್ತರ ಪರೀಕ್ಷಾ ವರದಿಯಲ್ಲಿ ಸತ್ಯ ಬಹಿರಂಗ - Renuka Swamy Postmortem Report - RENUKA SWAMY POSTMORTEM REPORT

ದರ್ಶನ್​ ಮತ್ತು ಗ್ಯಾಂಗ್​ನಿಂದ ಹಲ್ಲೆಗೊಳಗಾಗಿ ಮೃತಪಟ್ಟಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದ ಮರಣೋತ್ತರ ಪರೀಕ್ಷಾ ವರದಿ ಬಯಲಾಗಿದ್ದು, ಈಟಿವಿ ಭಾರತಕ್ಕೆ ಲಭ್ಯವಾಗಿದೆ.

renukaswamy
ರೇಣುಕಾಸ್ವಾಮಿ (ETV Bharat)
author img

By ETV Bharat Karnataka Team

Published : Jun 19, 2024, 11:51 AM IST

ಬೆಂಗಳೂರು: ಭೀಕರ ಹಲ್ಲೆಯ ಪರಿಣಾಮ, ರೇಣುಕಾಸ್ವಾಮಿಯ ಸಾವು ಸಂಭವಿಸಿದೆ ಎಂಬ ಅಂಶ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಯಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಆರೋಪಿಗಳನ್ನ ಹಾಜರುಪಡಿಸುವಾಗ ನ್ಯಾಯಾಲಯಕ್ಕೆ ಸಲ್ಲಿಸಲು ಸಿದ್ಧಪಡಿಸಿರುವ ರಿಮ್ಯಾಂಡ್ ಅರ್ಜಿಯ ಪ್ರತಿ ಈಟಿವಿ ಭಾರತಕ್ಕೆ ಲಭ್ಯವಾಗಿದ್ದು, ಅದರಲ್ಲಿ ರೇಣುಕಾಸ್ವಾಮಿಯ ಸಾವಿಗೆ ವೈದ್ಯರು ನೀಡಿರುವ ಕಾರಣದ ಕುರಿತು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ರೇಣುಕಾಸ್ವಾಮಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದ ವೈದ್ಯರು ಸಲ್ಲಿಸಿರುವ ವರದಿಯಲ್ಲಿ ''Death is due to shock and Hemorrhage as a result to multiple blunt injuries sustained'' ಅಂದರೆ ಶಾಕ್ ಹಾಗೂ ಬಲವಾದ ಹೊಡೆತಗಳ ಕಾರಣದಿಂದ ರಕ್ತಸ್ರಾವವಾಗಿ ಸಾವು ಸಂಭವಿಸಿದೆ ಎಂಬ ವಿಚಾರವನ್ನು ವರದಿಯನ್ನ ವೈದ್ಯರು ನೀಡಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯ ವರದಿಯನ್ನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೂ ಕಳುಹಿಸಿರುವ ಪೊಲೀಸರು ವರದಿಗಾಗಿ ಕಾಯುತ್ತಿದ್ದಾರೆ.

ಪಟ್ಟಣಗೆರೆ ಶೆಡ್ ಸೆಕ್ಯುರಿಟಿ ಗಾರ್ಡ್ ಹೇಳಿಕೆ ದಾಖಲು‌: ರೇಣುಕಾಸ್ವಾಮಿಯ‌ ಹತ್ಯೆ ನಡೆದ ಪಟ್ಟಣಗೆರೆಯ ಶೆಡ್ ಕಾವಲು ಕಾಯುವ ಕೆಲಸ ಮಾಡಿಕೊಂಡಿದ್ದ ಸೆಕ್ಯುರಿಟಿ ಗಾರ್ಡ್ ವಿಚಾರಣೆ ನಡೆಸಿದ್ದ ಪೊಲೀಸರು CRPC - 164ರ ಅಡಿ ನ್ಯಾಯಾಲಯದಲ್ಲಿ ಆತನ ಹೇಳಿಕೆ ದಾಖಲಿಸಿದ್ದಾರೆ. ಹಿಂದಿ ಭಾಷೆ ಮಾತಾನಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್ ಹೇಳಿಕೆಯನ್ನ ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಸಹಾಯದಿಂದ ಭಾಷಾಂತರಿಸಲಾಗಿದ್ದು, ನ್ಯಾಯಾಧೀಶರ ಮುಂದೆ ದಾಖಲಿಸಲಾಗಿದೆ ಎಂಬ ಅಂಶವನ್ನ‌ ಪೊಲೀಸರು ಸಲ್ಲಿಸಿರುವ ರಿಮ್ಯಾಂಡ್ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ‌.

ಇದನ್ನೂ ಓದಿ: ರೇಣುಕಾಸ್ವಾಮಿ, ಆರೋಪಿ ರಾಘವೇಂದ್ರನ ಮೊಬೈಲ್ ಪತ್ತೆಗಾಗಿ ಅಗ್ನಿಶಾಮಕದಳಕ್ಕೆ ಪೊಲೀಸರ​ ಮೊರೆ - Police Searching For Mobiles

ETV Bharat Logo

Copyright © 2025 Ushodaya Enterprises Pvt. Ltd., All Rights Reserved.