ETV Bharat / state

ರೇಣುಕಾಸ್ವಾಮಿ ಕೊಲೆ​​ ಪ್ರಕರಣ: ಆರೋಪಿ ತಂದೆ ಹೃದಯಾಘಾತದಿಂದ ಸಾವು - Darshan case Accused Father Death - DARSHAN CASE ACCUSED FATHER DEATH

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಅನುಕುಮಾರ್ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Darshan case Accused Father Death
ಆರೋಪಿ ಅನುಕುಮಾರ್ ತಂದೆ ಸಾವು (ETV Bharat)
author img

By ETV Bharat Karnataka Team

Published : Jun 15, 2024, 6:44 AM IST

ಚಿತ್ರದುರ್ಗ: ರೇಣುಕಾಸ್ವಾಮಿ ಮೇಲಿನ ಹಲ್ಲೆ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 18 ಆರೋಪಿಗಳು ಅರೆಸ್ಟ್ ಆಗಿದ್ದು, ತನಿಖೆ ಚುರುಕುಗೊಂಡಿದೆ. ಈ ಮಧ್ಯೆ, ಪುತ್ರ ಪೊಲೀಸರಿಗೆ ಶರಣಾಗಿದ್ದಾನೆ ಎಂಬ ಸುದ್ದಿ ಕೇಳಿದ ಆರೋಪಿಯೊಬ್ಬರ ತಂದೆ ಸಾವನ್ನಪ್ಪಿದ್ದಾರೆ.

ಅನುಕುಮಾರ್ ಎಂಬಾತ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂಬ ಆರೋಪವಿದೆ. ಪುತ್ರ ಪೊಲೀಸರಿಗೆ ಶರಣಾಗಿದ್ದಾನೆ ಎಂಬ ವಿಷಯ ತಿಳಿದ ಅನುಕುಮಾರ್ ತಂದೆ ಚಂದ್ರಪ್ಪ (60) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ಸಿಹಿ ನೀರಿನ ಹೊಂಡದ ಬಳಿ ಕುಸಿದು ಬಿದ್ದ ಚಂದ್ರಪ್ಪ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತು. ಆದ್ರೆ ಕಡಿಮೆ ರಕ್ತದೊತ್ತಡದಿಂದ ಅವರು ಕೊನೆಯುಸಿರೆಳೆದಿದ್ದಾರೆ.

ಆಟೋ ಚಾಲಕನಾಗಿದ್ದ ಅನುಕುಮಾರ್ ಕುಟುಂಬದಲ್ಲಿ ದುಡಿಯುವ ಏಕೈಕ ವ್ಯಕ್ತಿಯಾಗಿದ್ದ. ಆದ್ರೀಗ ಪುತ್ರನ ಬಂಧನ, ಪತಿ ಚಂದ್ರಪ್ಪ ಸಾವು ಹಿನ್ನೆಲೆ ಅನುಕುಮಾರ್ ತಾಯಿ ನಟ ದರ್ಶನ್​ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ಇದನ್ನೂ ಓದಿ: ನಿರ್ಮಾಪಕರು ಸಿನಿಮಾಗಳಿಗೆ ಬಂಡವಾಳ ಹಾಕಿದ್ದಾರೆ, ತನಿಖೆಯಾಗುವವರೆಗೆ ದರ್ಶನ್ ಮೇಲೆ ಕ್ರಮ ಇಲ್ಲ: ಎಂ.ಎನ್.ಸುರೇಶ್ - Karnakata Film Chamber

ETV Bharat Logo

Copyright © 2024 Ushodaya Enterprises Pvt. Ltd., All Rights Reserved.