ETV Bharat / state

ವಿಚಾರಣೆ ವೇಳೆ ಪವಿತ್ರಾ ಗೌಡ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದ ಪೊಲೀಸರು - Pavitra Gowda unwell

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ವಿಚಾರಣೆ ವೇಳೆ ಅಸ್ವಸ್ಥರಾಗಿದ್ದು, ಪೊಲೀಸರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

Pavitra Gowda
ಪವಿತ್ರಾ ಗೌಡ (ETV Bharat)
author img

By ETV Bharat Karnataka Team

Published : Jun 18, 2024, 5:58 PM IST

ಬೆಂಗಳೂರು: ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್​, ಸ್ನೇಹಿತೆ ಪವಿತ್ರಾ ಗೌಡ ಸೇರಿ ಈವರೆಗೆ 18 ಮಂದಿ ಬಂಧನವಾಗಿದ್ದಾರೆ. ತನಿಖೆ ಮುಂದುವರಿದಿದ್ದು, ಕೊಲೆ ಪ್ರಕರಣ ಮೊದಲ ಆರೋಪಿ ಪವಿತ್ರಾ ಗೌಡ ವಿಚಾರಣೆ ವೇಳೆ ಅಸ್ವಸ್ಥರಾಗಿದ್ದು, ಪೊಲೀಸರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಒಳಗಾಗಿದ್ದ ಪವಿತ್ರಾರ ಆರೋಗ್ಯ ಹದಗೆಟ್ಟ ಹಿನ್ನೆಲೆ, ವೈದ್ಯರನ್ನು ಠಾಣೆಗೆ ಕರೆಸಿಕೊಂಡು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ಚೇತರಿಕೆ ಕಾಣದ ಕಾಣದ ಹಾಗೂ ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅವರನ್ನು ಮಲ್ಲತ್ತಹಳ್ಳಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪೊಲೀಸರು ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಪ್ರತಿದಿನ ಸಂಜೆ ಪವಿತ್ರಾರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದೊಯ್ದು, ಬೆಳಗ್ಗೆ ಪೊಲೀಸರು ವಿಚಾರಣೆಗೆ ಕರೆತರುತ್ತಾರೆ. ಜೂ.20ರಂದು ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು, ಎಲ್ಲಾ ಆರೋಪಿಗಳನ್ನು ಬಹುತೇಕ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: 'ಇಂತಹ ಪ್ರಕರಣದಲ್ಲಿ ದರ್ಶನ್​ ಭಾಗಿಯಾಗಿದ್ದಾರೆಂಬುದನ್ನು ನಂಬಲು ಕಷ್ಟ': ರಚಿತಾ ರಾಮ್ - Rachita Ram on Darshan case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.