ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮತ್ತು ಸಹಚರರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯ, ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್ 28ರವರೆಗೂ ವಿಸ್ತರಿಸಿ ಆದೇಶಿಸಿತು.
ಇಂದು ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ತುಮಕೂರು ಜೈಲಿನಲ್ಲಿರುವ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದೆದುರು ಹಾಜರುಪಡಿಸಲಾಗಿತ್ತು.
ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಹಾಸ್ಯ ನಟ ಚಿಕ್ಕಣ್ಣ - Renuka Swamy Murder Case