ETV Bharat / state

ರೇಣುಕಾಸ್ವಾಮಿ ಕೊಲೆ ಪ್ರಕರಣ: ತುಮಕೂರು ಕಾರಾಗೃಹಕ್ಕೆ ನಾಲ್ವರು ಆರೋಪಿಗಳ ಸ್ಥಳಾಂತರಕ್ಕೆ ಕೋರ್ಟ್ ಆದೇಶ - Renukaswamy murder case - RENUKASWAMY MURDER CASE

ವಿಚಾರಣಾಧೀನ ಕೈದಿಗಳಿಂದ ಹಲ್ಲೆ ನಡೆಯುವ ಸಾಧ್ಯತೆ ಇರುವುದರಿಂದ ಸೆಂಟ್ರಲ್ ಜೈಲಿನಿಂದ ತುಮಕೂರು ಕಾರಾಗೃಹಕ್ಕೆ ನಾಲ್ವರು ಅರೋಪಿಗಳ ಸ್ಥಳಾಂತರಕ್ಕೆ ಕೋರ್ಟ್ ಆದೇಶ ನೀಡಿದೆ. ಇಂದು ರಾತ್ರಿ ಆರೋಪಿಗಳ ಸ್ಥಳಾಂತರ ಪ್ರಕ್ರಿಯೆ ನಡೆಯಲಿದೆ.

RENUKASWAMY MURDER CASE
ಸೆಂಟ್ರಲ್ ಜೈಲ್​ (ETV Bharat)
author img

By ETV Bharat Karnataka Team

Published : Jun 24, 2024, 5:34 PM IST

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರ ಮುಂದೆ ಶರಣಾಗತಿಯಾಗಿದ್ದ ನಾಲ್ವರು ಆರೋಪಿಗಳು ತುಮಕೂರು ಕಾರಾಗೃಹಕ್ಕೆ ವರ್ಗಾವಣೆ ಮಾಡಿ ನಗರದ 24ನೇ ಎಸಿಎಂಎಂ ನ್ಯಾಯಾಲಯವು ಆದೇಶಿಸಿದೆ.

ನ್ಯಾಯಾಲಯ ಆದೇಶ ಅನುಸಾರ ಆರೋಪಿಗಳಾದ ಕಾರ್ತಿಕ್, ನಿಖಿಲ್ ನಾಯಕ್, ಕೇಶವಮೂರ್ತಿ ಹಾಗೂ ರವಿಶಂಕರ್ ಅವರನ್ನ ತುಮಕೂರು ಕಾರಾಗೃಹಕ್ಕೆ ಸ್ಥಳಾಂತರವಾಗಲಿದ್ದಾರೆ. ಇಂದು ರಾತ್ರಿ ಪರಪ್ಪನ ಅಗ್ರಹಾರ ಜೈಲಿನಿಂದ ಆರೋಪಿಗಳನ್ನ ತುಮಕೂರು ಕಾರಾಗೃಹಕ್ಕೆ ಕರೆದೊಯ್ಯಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತುಮಕೂರು ಜಿಲ್ಲಾ ಕಾರಾಗೃಹ ವರ್ಗಾವಣೆ ಸಂಬಂಧ ವಿಚಾರಣೆ ಕೈಗೊಂಡ ನ್ಯಾಯಾಲಯದ ಮುಂದೆ ಸರ್ಕಾರಿ ಪರ ಅಭಿಯೋಜಕ (ಎಸ್​​ಪಿಪಿ) ಪ್ರಸನ್ನ ಕುಮಾರ್ ವಾದ ಮಂಡಿಸಿರು. ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಶರಣಾಗಿದ್ದ ನಾಲ್ವರನ್ನ ವಿಚಾರಣೆ ನಡೆಸಿದಾಗ ನಟ ದರ್ಶನ್ ಹಾಗೂ ಅವರ ಸಹಚರರು ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ಬಾಯ್ಬಿಟ್ಟಿದ್ದರು. ಈ ಮಾಹಿತಿ ಆಧರಿಸಿ ಉಳಿದ 13 ಮಂದಿಯನ್ನ ಬಂಧಿಸಲಾಗಿತ್ತು. ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ನಾಲ್ವರು ಆರೋಪಿಗಳ ಮೇಲೆ ವಿಚಾರಣಾಧೀನ ಕೈದಿಗಳು ಹಲ್ಲೆ ಮಾಡುವ ಸಾಧ್ಯತೆಯಿದೆ. ಹೀಗಾಗಿ ತುಮಕೂರು ಕಾರಾಗೃಹಕ್ಕೆ ವರ್ಗಾಯಿಸಬೇಕೆಂದು ವಿವರಿಸಿದರು. ಆರೋಪಿಗಳ ಪರ ವಕೀಲರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಪ್ರಸನ್ನ ಕುಮಾರ್ ಅವರ ವಾದವನ್ನ ಪುರಸ್ಕರಿಸಿ ಆರೋಪಿಗಳ ಸ್ಥಳಾಂತರಕ್ಕೆ ಆದೇಶಿಸಿತು.

ಇದನ್ನೂ ಓದಿ: ದರ್ಶನ್​ ಭೇಟಿ ಬಳಿಕ ನಟ ವಿನೋದ್ ಪ್ರಭಾಕರ್ ಭಾವುಕ ಮಾತು - VINOD PRABHAKAR MEETS DARSHAN

ETV Bharat Logo

Copyright © 2024 Ushodaya Enterprises Pvt. Ltd., All Rights Reserved.