ETV Bharat / state

ರೇಣುಕಾಸ್ವಾಮಿ ಪೋಷಕರಿಂದ ಸಿಎಂ ಭೇಟಿ: ಸೊಸೆಗೆ ಸರ್ಕಾರಿ ಉದ್ಯೋಕ್ಕಾಗಿ ಮನವಿ, ಸಿಎಂ ಸಕಾರಾತ್ಮಕ ಸ್ಪಂದನೆ - Renukaswamy Parents

ಚಿತ್ರದುರ್ಗದ ರೇಣುಕಾಸ್ವಾಮಿಯ ಪೋಷಕರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಅಳಲು ತೋಡಿಕೊಂಡರು.

ರೇಣುಕಾಸ್ವಾಮಿ ಪೋಷಕರಿಂದ ಸಿಎಂ ಭೇಟಿ
ರೇಣುಕಾಸ್ವಾಮಿ ಪೋಷಕರಿಂದ ಸಿಎಂ ಭೇಟಿ (ETV Bharat)
author img

By ETV Bharat Karnataka Team

Published : Jun 25, 2024, 4:05 PM IST

ಬೆಂಗಳೂರು: ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ತಂದೆ, ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ತಮ್ಮ ಅಳಲು ತೋಡಿಕೊಂಡರು. ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ರೇಣುಕಾಸ್ವಾಮಿ ಪೋಷಕರು, ತಮ್ಮ ಸೊಸೆಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು. ಮುಖ್ಯಮಂತ್ರಿಗಳು ಇವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು.

ರೇಣುಕಾಸ್ವಾಮಿ ಅವರ ತಂದೆ, ತಾಯಿ ಇಂದು ಕಾವೇರಿಯಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ, ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಪುತ್ರನ ಅಗಲಿಕೆಯಿಂದ ಎದುರಾಗಿರುವ ಸಂಕಷ್ಟವನ್ನು ವಿವರಿಸಿದರು. ರೇಣುಕಾಸ್ವಾಮಿಯ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು.

ನಮ್ಮ ಸರ್ಕಾರವು ರೇಣುಕಾಸ್ವಾಮಿಯ ಸಾವಿಗೆ ನ್ಯಾಯ ದೊರಕಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಗೆ ಸರ್ಕಾರದಿಂದ ಸಾಧ್ಯವಿರುವ ಅಗತ್ಯ ನೆರವು ನೀಡುವುದಾಗಿ ಮುಖ್ಯಮಂತ್ರಿ ಅವರು ಭರವಸೆ ನೀಡಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಸಿಎಂ, ''ಚಿತ್ರದುರ್ಗದ ರೇಣುಕಾಸ್ವಾಮಿ ಅವರ ತಂದೆ, ತಾಯಿ ಇಂದು ನನ್ನನ್ನು ಭೇಟಿಯಾಗಿ ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಪುತ್ರನ ಅಗಲಿಕೆಯಿಂದ ಎದುರಾಗಿರುವ ಸಂಕಷ್ಟವನ್ನು ವಿವರಿಸಿ, ರೇಣುಕಾಸ್ವಾಮಿಯ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದರು.

ನಮ್ಮ ಸರ್ಕಾರವು ರೇಣುಕಾಸ್ವಾಮಿಯ ಸಾವಿಗೆ ನ್ಯಾಯ ದೊರಕಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಗೆ ಸರ್ಕಾರದಿಂದ ಸಾಧ್ಯವಿರುವ ಅಗತ್ಯ ನೆರವು ನೀಡುವುದಾಗಿ'' ತಿಳಿಸಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ಈವರೆಗಿನ ಪ್ರಮುಖ ಬೆಳವಣಿಗೆಗಳು - Renukaswamy Murder Case

ಪವಿತ್ರಾ ಗೌಡ ಅವರಿಗೆ ಆಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಹಲ್ಲೆ ಮಾಡಲಾಗಿತ್ತು. ಈ ವೇಳೆ ರೇಣುಕಾಸ್ವಾಮಿ ಕೊಲೆಯಾಗಿದ್ದಾನೆ. ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಸಹಚರರು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಇದೆ. ಈ ಸಂಬಂಧ ಈಗಾಗಲೇ ಆರೋಪಿಗಳನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಎಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೂ ವಹಿಸಲಾಗಿದೆ.

ಇತ್ತ ರೇಣುಕಾಸ್ವಾಮಿಯನ್ನು ಕಳೆದುಕೊಂಡ ಪೋಷಕರು ಹಾಗೂ ಅವರ ಗರ್ಭಿಣಿ ಪತ್ನಿ ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಚಿತ್ರದುರ್ಗದಲ್ಲಿರುವ ರೇಣುಕಾಸ್ವಾಮಿ ಅವರ ಮನೆಗೆ ಈಗಾಗಲೇ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ, ಪೋಷಕರಿಗೆ ಸಾಂತ್ವನ ಹೇಳಿದ್ದರು. ಜೊತೆಗೆ ಪ್ರಾಮಾಣಿಕ ತನಿಖೆಯ ಭರವಸೆ ನೀಡಿದ್ದರು.

ಇದನ್ನೂ ಓದಿ: ದರ್ಶನ್​ ಭೇಟಿ ಬಳಿಕ ನಟ ವಿನೋದ್ ಪ್ರಭಾಕರ್ ಭಾವುಕ ಮಾತು - VINOD PRABHAKAR MEETS DARSHAN

ETV Bharat Logo

Copyright © 2024 Ushodaya Enterprises Pvt. Ltd., All Rights Reserved.