ETV Bharat / state

ರಾಜ್ಯಾದ್ಯಂತ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ, ಆಕರ್ಷಕ ಪಥ ಸಂಚಲನ - REPUBLIC DAY CELEBRATION

ದೇಶಾದ್ಯಂತ ಇಂದು 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲಿಯೂ ಸಡಗರದಿಂದ ಗಣರಾಜ್ಯೋತ್ಸವ ದಿನ ಆಚರಿಸಲಾಯಿತು.

republic day celebration in karnataka
ಶಿವಮೊಗ್ಗದಲ್ಲಿ ಗಣರಾಜ್ಯೋತ್ಸವ (ETV Bharat)
author img

By ETV Bharat Karnataka Team

Published : Jan 26, 2025, 1:55 PM IST

ಬೆಳಗಾವಿ/ಶಿವಮೊಗ್ಗ: ರಾಜ್ಯಾದ್ಯಂತ 76ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು. ಆಯಾ ಜಿಲ್ಲಾ ಕೇಂದ್ರ, ತಾಲೂಕುಗಳಲ್ಲಿ ಸಚಿವರು, ಶಾಸಕರು ಸೇರಿದಂತೆ ಗಣ್ಯರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಬೆಳಗಾವಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ಸತೀಶ ಜಾರಕಿಹೊಳಿ: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ‌ ಮೊದಲು ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಮನ‌ ಸಲ್ಲಿಸಿದರು.‌ ನಂತರ ಪೊಲೀಸ್, ಸ್ಕೌಟ್ ಆಂಡ್ ಗೈಡ್, ಎನ್​ಸಿಸಿ ಸೇರಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ತೆರೆದ ವಾಹನದಲ್ಲಿ ಸತೀಶ ಜಾರಕಿಹೊಳಿ ಅವರು ಪೊಲೀಸ್ ಮತ್ತು ವಿವಿಧ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು.

republic day celebration in karnataka
ಗಣರಾಜ್ಯೋತ್ಸವದಲ್ಲಿ ಸಚಿವ ಸತೀಶ ಜಾರಕೊಹೊಳಿ (ETV Bharat)

ಈ ವೇಳೆ ಮಾತನಾಡಿದ ಅವರು, ಬೆಳಗಾವಿಯ ಈ ನೆಲವು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಮಹಾತ್ಮರು ನಡೆದಾಡಿದ ನೆಲವಾಗಿದೆ. ಭಾರತ ರಾಷ್ಟ್ರವು ಗಣರಾಜ್ಯವೆಂದು 1950ರ ಜನವರಿ 26ರಂದು ಘೋಷಿಸಿಕೊಂಡಿತು. ಈ ದಿನವು ದೇಶದ ನಾಗರಿಕರಿಗೆ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದೆ. ನಮ್ಮ ಸಂವಿಧಾನವನ್ನು ಒಪ್ಪಿಕೊಂಡ ದಿನವಿದು. ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ದಿನವಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಅವರಂಥಹ ಮಹಾನ್ ಮಾನವತಾವಾದಿಗಳು ರಾಷ್ಟ್ರದ ಅಭಿವೃದ್ಧಿಯ ಬಗೆಗೆ ಹಗಲಿರುಳೆನ್ನದೆ ಚಿಂತಿಸಿ ರಚಿಸಿದ ಸಂವಿಧಾನವು ಭವ್ಯಭಾರತಕ್ಕೆ ದಾರಿದೀಪವಾಗಿದೆ ಎಂದರು.

ಚಾಮರಾಜನಗರದಲ್ಲಿ ಗಣರಾಜ್ಯೋತ್ಸವ: ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ವಿವಿಧ ಪೊಲೀಸ್ ತುಕಡಿಗಳು, ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

republic day celebration in karnataka
ಚಾಮರಾಜನಗರದಲ್ಲಿ ಗಣರಾಜ್ಯೋತ್ಸವ (ETV Bharat)

ಬಳಿಕ ಭಾಷಣ ಮಾಡಿದ ಸಚಿವ ಕೆ.ವೆಂಕಟೇಶ್, ಎಲ್ಲರಿಗೂ 76ನೇ ಗಣರಾಜ್ಯೊತ್ಸವದ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಸ್ವಾತಂತ್ರ್ಯ ಹೋರಾಟಗಾರರ ಅವಿರತ ಪ್ರಯತ್ನದ ಫಲವಾಗಿ ನಮ್ಮ ದೇಶ ಬ್ರಿಟಿಷರ ಕಪಿಮುಷ್ಟಿಯಿಂದ 1947ರ ಆಗಸ್ಟ್ 15ರಂದು ಸ್ವತಂತ್ರಗೊಂಡಿದೆ. ಜನವರಿ 26 ,1950ರಲ್ಲಿ ಭಾರತವು ಗಣತಂತ್ರ ದೇಶ ಎಂದು ಘೋಷಿಸಿಕೊಂಡು ಇಂದಿಗೆ 75 ವರ್ಷಗಳು ಕಳೆದಿದೆ ಎಂದರು.

ಅಂಬೇಡ್ಕರ್ ಆಶಯದಂತೆ‌ ನಡೆದುಕೊಳ್ಳುವುದು ಅಗತ್ಯ- ಮಧು ಬಂಗಾರಪ್ಪ: ಅಂಬೇಡ್ಕರ ಅವರ ಆಶಯಗಳನ್ನು ಅರಿತು, ಅದರಂತೆ ನಡೆದುಕೊಳ್ಳುವುದು ಅಗತ್ಯವಾಗಿದೆ ಎಂದು ಶಿಕ್ಷಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜರೋಹಣ ನೇರವೇರಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಇತರರ ಹಕ್ಕುಗಳನ್ನು ಗೌರವಿಸುವ, ಶತಮಾನಗಳಿಂದ ನಾವು ಕಾಯ್ದುಕೊಂಡು ಬಂದಿರುವ ಬಹುಸಂಸ್ಕೃತಿಯನ್ನು ಉಳಿಸಲು ನಾವು ಪಣತೊಡಬೇಕಾಗಿದೆ. ವಿಶ್ವದ ಭೂಪಟದಲ್ಲಿ ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮ ಭಾರತ. ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಬಲಿಷ್ಠ ರಾಷ್ಟ್ರವಾಗಿ ನಮ್ಮ ದೇಶ ಬೆಳೆದು ನಿಂತಿದೆ ಎಂದರು.

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ರವರೇ ಹೇಳಿದಂತೆ ನ್ಯಾಯವೆಂದರೆ, ಸ್ವಾತಂತ್ರ್ಯ, ಸಮಾನತೆ ಮತ್ತು ಸೌಹಾರ್ದತೆ, ಅವರ ಈ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಧ್ಯೇಯ ನಮ್ಮದು. ಭಾರತವನ್ನು ಬಲಾಡ್ಯ ಗಣರಾಜ್ಯವನ್ನಾಗಿ ರೂಪಿಸುವಲ್ಲಿ ನಮ್ಮ ಅನೇಕ ನಾಯಕರನ್ನು, ಯೋಧರು ಹಾಗೂ ದೇಶಾಭಿಮಾನಿಗಳನ್ನು ನೆನೆಯುವುದು ಮತ್ತು ಅವರು ಆಶಿಸಿದಂತೆ ರಾಷ್ಟ್ರವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ತಿಳಿಸಿದರು.

republic day celebration in karnataka
ತುಮಕೂರಲ್ಲಿ ಗಣರಾಜ್ಯೋತ್ಸವ (ETV Bharat)

ತುಮಕೂರಲ್ಲಿ ಗಣರಾಜ್ಯೋತ್ಸವ: ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್, ರಕ್ಷಣಾಪಡೆ, ಮಾಜಿ ಸೈನಿಕರು ಮತ್ತು ಮಕ್ಕಳಿಂದ ಪಥಸಂಚಲನ ನಡೆಯಿತು.

ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಪರಮೇಶ್ವರ್, ಸಿದ್ಧಲಿಂಗೇಶ್ವರ ಸ್ವಾಮೀಜಿಯವರ ಆಶೀರ್ವಾದ ಪಡೆದು ಪ್ರಸಾದ ಸೇವಿಸಿದರು. ಮಠದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ, ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಬಲಿಷ್ಟವಾಗಿದ್ದು, ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಉತ್ತರ ನೀಡುತ್ತದೆ ಎಂದು ಹೇಳಿದರು.

republic day celebration in karnataka
ರಾಮನಗರದಲ್ಲಿ ಗಣರಾಜ್ಯೋತ್ಸವ (ETV Bharat)

ರಾಮನಗರ: ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಾರಿಗೆ, ಮುಜರಾಯಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

1947ರ ಆಗಸ್ಟ್ 15 ರಂದು ದೇಶವು ಸ್ವಾತಂತ್ರ್ಯ ಪಡೆದುಕೊಳ್ಳುವ ಮೂಲಕ ದಾಸ್ಯದ ಸಂಕೋಲೆಯನ್ನು ಕಳಚಿಕೊಂಡ ನಂತರ ಜನವರಿ 26, ಭಾರತೀಯರಿಗೆ ಮಹತ್ವದ ದಿನ. ಈ ಸಂದರ್ಭದಲ್ಲಿ ಸಂವಿಧಾನದ ಆಶಯದಂತೆ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಲಭ್ಯವಾಗುವ ಸಮ ಸಮಾಜ ನಿರ್ಮಾಣದ ದಾರಿಗಳನ್ನು ಬಲಪಡಿಸಲು ಚಿಂತಿಸಬೇಕು ಎಂದು ರಾಮಲಿಂಗಾರೆಡ್ಡಿ ಕರೆ ನೀಡಿದರು.

ಇದನ್ನೂ ಓದಿ: ಪದ್ಮ ಪ್ರಶಸ್ತಿಗಳ ಪಟ್ಟಿ ಪ್ರಕಟ: ಕರ್ನಾಟಕದ 9 ಸಾಧಕರಿಗೆ ಗೌರವ, ಇಬ್ಬರು ಮಹಿಳೆಯರಿಗೂ ಒಲಿದ ಪ್ರಶಸ್ತಿಯ ಗರಿ

ಉತ್ತರಕನ್ನಡದಲ್ಲಿ 76ನೇ ಗಣರಾಜ್ಯೋತ್ಸವ: ಕಾರವಾರ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಭಾನುವಾರ ಆಯೋಜಿಸಲಾಗಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣಕ್ಕೂ ಮುನ್ನ ಸಚಿವರು ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿಸಿದರು. ನಂತರ ತೆರೆದ ವಾಹನದಲ್ಲಿ ಪರೇಡ್ ತಂಡಗಳ ಪರಿವೀಕ್ಷಣೆ ನಡೆಸಿದರು. ಪೊಲೀಸ್, ಮಹಿಳಾ ಪೊಲೀಸ್, ಗೃಹರಕ್ಷಕದಳ, ಅರಣ್ಯ ಇಲಾಖೆ, ಎನ್‌ಸಿಸಿ, ಸ್ಕಾಟ್ ಮತ್ತು ಗೈಡ್ಸ್ ಸೇರಿದಂತೆ 16 ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

republic day celebration in karnataka
ಕಾರವಾರದಲ್ಲಿ ಗಣರಾಜ್ಯೋತ್ಸವ (ETV Bharat)

ಬಳಿಕ ಗಣರಾಜೋತ್ಸವದ ಸಂದೇಶ ಸಾರಿದ ಅವರು,‌ ನಮ್ಮ ಸಂವಿಧಾನ ಸಾಮಾನ್ಯ ಜನರಿಗೆ ಬೇಕಾಗುವ ಹಾಗೆ ಇದೆ. ಅದರಂತೆ ರಾಜ್ಯ ಸರ್ಕಾರ ಕಟ್ಟ ಕಡೆಯ ವ್ಯಕ್ತಿಯೂ ನೆಮ್ಮದಿಯಿಂದ ಬದುಕಲು ವಾತಾವರಣ ಸೃಷ್ಟಿ ಮಾಡಿದೆ. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರತಿಯೊಬ್ಬರಿಗೂ ಕುಡಿಯುವ ನೀರು ಒದಗಿಸಲು ಪ್ರಯತ್ನಿಸಲಾಗುತ್ತಿದೆ. ರಸ್ತೆ, ಸೇತುವೆಗಳಿಗೆ ಯಾವುದೇ ಅನುದಾನದ ಕೊರತೆ ಇಲ್ಲ. ಈಗಾಗಲೇ ಎಲ್ಲ ಕೆಲಸಗಳು ಪ್ರಾರಂಭಿಸಲಾಗಿದೆ. ಐದು ಗ್ಯಾರಂಟಿಗಳನ್ನು ಪ್ರಾರಂಭಿಸಿದಾಗಲೂ ಹಲವಾರು ಟೀಕೆಗಳು ವ್ಯಕ್ತವಾಗಿದ್ದವು. ಆದರೆ ಜನ ಇದರಿಂದ ನೆಮ್ಮದಿ ಜೀವನ ನಡೆಸುತ್ತಿದ್ದಾರೆ‌ ಎಂದರು.

republic day celebration in karnataka
ಬೆಳಗಾವಿಯಲ್ಲಿ ಪಥಸಂಚಲನ (ETV Bharat)

ಇದನ್ನೂ ಓದಿ: ಪಂಚ ಗ್ಯಾರಂಟಿ ಮಧ್ಯೆಯೂ ಆರ್ಥಿಕ ಪ್ರಗತಿ: ರಾಜ್ಯ ಸರ್ಕಾರದ ಸಾಧನೆ ಶ್ಲಾಘಿಸಿದ ರಾಜ್ಯಪಾಲ ಗೆಹ್ಲೋಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.