ETV Bharat / state

ಸರ್ಕಾರ ನೀಡಿದ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ, ಬದ್ಧತೆ ಮೆರೆದಿದೆ: ರಾಜ್ಯಪಾಲ ಗೆಹ್ಲೋಟ್

ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದರು.

Republic Day in Bengaluru  Governor Thawar Chand Gehlot  Republic Day  flag hoisting by Governor  75ನೇ ಗಣರಾಜ್ಯೋತ್ಸವ  ಗಣರಾಜ್ಯೋತ್ಸವ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
75ನೇ ಗಣರಾಜ್ಯೋತ್ಸವ: ಸರ್ಕಾರ ನೀಡಿದ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ, ಬದ್ಧತೆ ಮೆರೆದಿದೆ: ರಾಜ್ಯಪಾಲ ಗೆಹ್ಲೋಟ್
author img

By ETV Bharat Karnataka Team

Published : Jan 26, 2024, 12:22 PM IST

ಬೆಂಗಳೂರು: 75ನೇ ಗಣರಾಜ್ಯೋತ್ಸವ ಅಂಗವಾಗಿ ಮಾಣಿಕ್ ಷಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ ನಮನ ಸಲ್ಲಿಸಿದರು. ವಿವಿಧ ತುಕಡಿಗಳಿಂದ ಗೌರವ ರಕ್ಷೆ ಸ್ವೀಕರಿಸಿ, ತೆರೆದ ವಾಹನದಲ್ಲಿ ಕವಾಯತು ವೀಕ್ಷಿಸಿದರು.

ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಎಲ್ಲರಿಗೂ ನಮಸ್ಕಾರ ಎನ್ನುತ್ತಾ ಕನ್ನಡದಲ್ಲೇ ಭಾಷಣ ಆರಂಭಿಸಿದರು. ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿದ ಅವರು ರಾಜ್ಯ ಸರ್ಕಾರದ ಸಾಧನೆಗಳು ಹಾಗೂ ಪಂಚ ಗ್ಯಾರಂಟಿಗಳ ಅನುಷ್ಠಾನದ ಪ್ರಗತಿ ಬಗ್ಗೆ ವಿವರಿಸಿದರು. ಈ ಐತಿಹಾಸಿಕ ದಿನದಂದು ಭಾರತದ ಸಂವಿಧಾನ ಜಾರಿಗೆ ಬಂದಿತು. ಸಂವಿಧಾನವು ಭಾರತದ ನಾಗರಿಕರಿಗೆ ನ್ಯಾಯ, ಸ್ವಾತಂತ್ರ ಹಾಗೂ ಸಮಾನತೆಯ ಅವಕಾಶವನ್ನು ಒದಗಿಸುವುದರೊಂದಿಗೆ, ದೇಶದ ಸಮಗ್ರತೆ, ಏಕತೆಯನ್ನು ಕಾಪಾಡುವ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧೈಯವನ್ನು ಹೊಂದಿದೆ. ಆ ಮೂಲಕ ನಾಗರೀಕರು ತಮ್ಮ ಏಳಿಗೆಯೊಂದಿಗೆ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವಕಾಶ ಕಲ್ಪಿಸಿದೆ. ಸಂವಿಧಾನದ ಈ ಆಶಯಗಳನ್ನು ಸಾಕಾರಗೊಳಿಸಲು ಸರ್ಕಾರ ಶ್ರಮಿಸುತ್ತಿದೆ ಎಂದು ತಿಳಿಸಿದರು.

ಶಕ್ತಿ ಯೋಜನೆ: ನನ್ನ ಸರ್ಕಾರವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಅದರಂತೆ, ಎಲ್ಲಾ ಐದು ಗ್ಯಾರಂಟಿಗಳಾದ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳನ್ನು ನಾವು ರಾಜ್ಯದಲ್ಲಿ ಅನುಷ್ಠಾನಗೊಳಿಸಿರುತ್ತೇವೆ ಎಂದು ತಿಳಿಸಲು ಹರ್ಷಿಸುತ್ತೇನೆ. ಜೂನ್ 11, 2023ರಂದು ಮಹತ್ವಾಕಾಂಕ್ಷಿ ಯೋಜನೆಯಾದ "ಶಕ್ತಿ ಯೋಜನೆ ಜಾರಿಗೊಳಿಸಿ ಮಹಿಳಾ ಸಬಲೀಕರಣದತ್ತ ಹೊಸ ಹೆಜ್ಜೆಯಿಟ್ಟಿದೆ. ಲಿಂಗತ್ವ ಅಲ್ಪಸಂಖ್ಯಾತರು, ವಿದ್ಯಾರ್ಥಿನಿಯರು ಸೇರಿದಂತೆ, ರಾಜ್ಯದ 3.5 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಈ ಯೋಜನೆ ಪ್ರಾರಂಭವಾದಂದಿನಿಂದ ಇಲ್ಲಿಯವರೆಗೆ 134.34 ಕೋಟಿ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಪ್ರಯಾಣ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಅನ್ನಭಾಗ್ಯ: ರಾಜ್ಯ ಸರ್ಕಾರದ ಮಹತ್ಮಾಕಾಂಕ್ಷೆಯ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 5 ಕೆ.ಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ 5 ಕೆ.ಜಿ ಆಹಾರ ಧಾನ್ಯವನ್ನು ಸೇರಿಸಿ ಪ್ರತಿ ಫಲಾನುಭವಿಗೆ 10 ಕೆ.ಜಿ ಆಹಾರಧಾನ್ಯವನ್ನು ವಿತರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಪ್ರಸ್ತುತ ಈ ಯೋಜನೆಗೆ ಅಗತ್ಯವಿರುವ ಆಹಾರ ಧಾನ್ಯ ಲಭ್ಯವಾಗುವವರೆಗೆ ರಾಜ್ಯದ ಅರ್ಹ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಹೆಚ್ಚುವರಿ 5 ಕೆ.ಜಿ ಆಹಾರ ಧಾನ್ಯದ ಬದಲಾಗಿ ಪ್ರತಿ ಕೆ.ಜಿಗೆ 34 ರೂಪಾಯಿಯಂತೆ ಕುಟುಂಬದ ಸದಸ್ಯರುಗಳ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾಯಿಸಲಾಗುತ್ತಿದೆ. ಜುಲೈ- 2023 ಮಾಹೆಯಿಂದ ನವೆಂಬರ್- 2023ರ ಅಂತ್ಯಕ್ಕೆ ಒಟ್ಟು 2,900.12 ಕೋಟಿ ಮೊತ್ತದ ಹಣವನ್ನು ಅರ್ಹ ಫಲಾನುಭವಿಗಳಿಗೆ ವರ್ಗಾಯಿಸಲಾಗಿದೆ ಎಂದರು.

1.50 ಕೋಟಿ ಜನರಿಗೆ ಉಚಿತ ವಿದ್ಯುತ್: 1.07.2023ರಿಂದ ಜಾರಿಗೆ ಬರುವಂತೆ "ಗೃಹಜ್ಯೋತಿ" ಯೋಜನೆಯನ್ನು ಜಾರಿಗೊಳಿಸಿ, ರಾಜ್ಯದ ಪ್ರತಿ ಮನೆಗೆ ಪ್ರತಿ ತಿಂಗಳಿಗೆ 200 ಯೂನಿಟ್‌ಗಳ ಗರಿಷ್ಠ ಬಳಕೆಯ ಮಿತಿಗೆ ಒಳಪಟ್ಟು ಉಚಿತ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ನಾಡಿನ 1.50 ಕೋಟಿ ಗ್ರಾಹಕರು ಈ ಯೋಜನೆಯ ಸದುಪಯೋಗ ಪಡೆಯುತ್ತಿದ್ದು ಸರ್ಕಾರವು ಪತಿ ತಿಂಗಳೂ ಮುಂಗಡವಾಗಿ ಎಲ್ಲಾ ಎಸ್ಕಾಂಗಳಿಗೆ ರೂ.700 ಕೋಟಿಗಳ ಸಹಾಯಧನ ಬಿಡುಗಡೆ ಮಾಡುತ್ತಿದೆ ಎಂದು ತಿಳಿಸಿದರು.

1.17 ಕೋಟಿ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ: ರಾಜ್ಯದಲ್ಲಿರುವ ಪ್ರತಿ ಕುಟುಂಬದಲ್ಲಿನ ಯಜಮಾನಿಗೆ ಪ್ರತಿ ತಿಂಗಳು ರೂ.2,000 ಗಳನ್ನು ನೀಡುವ "ಗೃಹಲಕ್ಷ್ಮಿ" ಯೋಜನೆಯಡಿ ರೂ.17,500ಕೋಟಿ ಅನುದಾನವನ್ನು ನಿಗದಿಪಡಿಸಲಾಗಿದೆ. ಈ ಯೋಜನೆಯಡಿ ನೋಂದಾಯಿಸಿಕೊಂಡಿರುವ 1.17 ಕೋಟಿ ಮಹಿಳಾ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಈವರೆಗೆ ರೂ.8181.00 ಕೋಟಿ ನೆರವು ವರ್ಗಾಯಿಸಲಾಗಿದೆ ಎಂದರು.

ಯುವನಿಧಿ ಯೋಜನೆ: ಯುವನಿಧಿ ಯೋಜನೆಯಡಿ 2022-23 ನೇ ಸಾಲಿನಲ್ಲಿ ಉತ್ತೀರ್ಣರಾದ ಪದವೀಧರರು ಮತ್ತು ಡಿಪ್ಲೋಮಾ ಹೊಂದಿದವರು 180 ದಿನಗಳು ಪೂರ್ಣಗೊಂಡರೂ ಉದ್ಯೋಗವನ್ನು ಪಡೆಯದೆ ಇದ್ದರೆ ಕ್ರಮವಾಗಿ ಮಾಸಿಕ ರೂ.3000 ಮತ್ತು ರೂ.1500 ಗಳ ನಿರುದ್ಯೋಗ ಭತ್ಯೆಯನ್ನು ಎರಡು ವರ್ಷದ ಅವಧಿಗೆ ಅಥವಾ ಎರಡು ವರ್ಷದೊಳಗೆ ಉದ್ಯೋಗ ಪಡೆಯುವವರೆಗೆ ಪಾವತಿಸಲು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಈ ಯೋಜನೆಯನ್ನು ಸ್ವಾಮಿ ವಿವೇಕಾನಂದ ಜಯಂತಿಯಂದು ರಾಷ್ಟ್ರೀಯ ಯುವ ದಿನಾಚರಣೆ ಸಂದರ್ಭದಲ್ಲಿ ಅನುಷ್ಠಾನಗೊಳಿಸಲಾಗಿದೆ ಎಂದಿದ್ದಾರೆ. ನನ್ನ ಸರ್ಕಾರವು ನೀಡಿದ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಬದ್ಧತೆಯನ್ನು ಮೆರೆದಿದೆ ಎಂದಿದ್ದಾರೆ.

223- ಬರ ಪೀಡಿತ ತಾಲ್ಲೂಕುಗಳು: ರಾಜ್ಯದ 236 ತಾಲ್ಲೂಕುಗಳ ಪೈಕಿ, 223 ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದ್ದು, ಅದರಲ್ಲಿ 196 ತಾಲ್ಲೂಕುಗಳನ್ನು ತೀವ್ರ ಬರ ಪೀಡಿತ ಎಂದು ವರ್ಗೀಕರಿಸಲಾಗಿದೆ. 195 ಬರ ಪೀಡಿತ ತಾಲ್ಲೂಕುಗಳಲ್ಲಿ ಬರ ಪರಿಹಾರ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ NDRF ನಿಂದ ಅನುದಾನವನ್ನು ಕೋರಿದೆ. ರೈತರ ಸಂಕಷ್ಟವನ್ನು ನಿವಾರಿಸಲು ಬರಗಾಲ ಘೋಷಿತ ತಾಲ್ಲೂಕುಗಳಲ್ಲಿ ಪ್ರತಿ ರೈತನಿಗೆ ರೂ.2000 ವರೆಗಿನ ಇನ್‌ಪುಟ್ ಸಬ್ಸಿಡಿಯನ್ನು ಮಧ್ಯಂತರ ಪರಿಹಾರವಾಗಿ ಆಧಾರ್ ಲಿಂಕ್ ಮಾಡಲಾದ ರೈತರ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರದಿಂದ ನೇರವಾಗಿ ಬಿಡುಗಡೆ ಮಾಡಲಾಗುತ್ತಿದೆ. ಸುಮಾರು 30 ಲಕ್ಷ ರೈತರಿಗೆ ರೂ.580 ಕೋಟಿ ಬಿಡುಗಡೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವಿವರಿಸಿದರು.

ರೈತರಿಗೆ ಕೃಷಿ ಸಾಲ: ತಾಲ್ಲೂಕು ಮಟ್ಟದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವು ನಿರ್ವಹಣೆಗೆ ಹಾಗೂ ಬರ ಪರಿಹಾರ ಕ್ರಮಗಳ ಮೇಲ್ವಿಚಾರಣೆಗಾಗಿ ಶಾಸಕರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಕಾರ್ಯಪಡೆಗಳನ್ನು ರಚಿಸಲಾಗಿದೆ. ಬರ ಪರಿಸ್ಥಿತಿಯ ಪರಿಣಾಮಗಳನ್ನು ತಗ್ಗಿಸಲು ಹಾಗೂ ಜನ, ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಲು ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. 2023-24 ನೇ ಸಾಲಿನಲ್ಲಿ 35 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ ರೂ.25,000 ಕೋಟಿಗಳಷ್ಟು ಸಾಲ ವಿತರಣೆ ಮಾಡುವ ಗುರಿ ಹೊಂದಲಾಗಿದ್ದು, 17.24 ಲಕ್ಷ ರೈತರಿಗೆ ರೂ. 13,672.74 ಕೋಟಿಗಳ ಬೆಳೆ ಸಾಲ ವಿತರಿಸಲಾಗಿದೆ. 15,775 ರೈತರಿಗೆ ರೂ.461 ಕೋಟಿಗಳ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲ ವಿತರಿಸಲಾಗಿದೆ ಎಂದು ವಿವರಿಸಿದ್ದಾರೆ.

ಹೊಸದಾಗಿ 262 ಹೊಸ ಆಂಬ್ಯುಲೆನ್ಸ್: ಡಾ.ಪುನೀತ್ ರಾಜ್‌ ಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ಸಾರ್ವಜನಿಕ ಸ್ಥಳಗಳಲ್ಲಿ ಹಠಾತ್ ಹೃದಯಾಘಾತದಿಂದ ಸಂಭವಿಸುವ ಮರಣಗಳನ್ನು ತಡೆಗಟ್ಟಲು ಸಾರ್ವಜನಿಕ ದಟ್ಟಣೆಯ ಸ್ಥಳ, ಬಸ್ಸು ನಿಲ್ದಾಣ, ರೈಲು ನಿಲ್ದಾಣ ಮತ್ತು ಸರ್ಕಾರಿ ಕಚೇರಿಗಳಲ್ಲಿ AED (Automated External Defibrillator) ಅಳವಡಿಸಲು ಯೋಜನೆ ರೂಪಿಸಲಾಗುತ್ತಿದೆ. 108 ಆರೋಗ್ಯ ಕವಚ ಯೋಜನೆಯಡಿ ತುರ್ತು ಆಂಬುಲೆನ್ಸ್ ಸೇವೆಗಳಿಗೆ ಹೊಸದಾಗಿ 262 ಹೊಸ ಆಂಬುಲೆನ್ಸ್​ಗಳನ್ನು (105 Advanced Life Support Ambulance, 157 Basic Life Support Ambulance) ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಬ್ಯಾಂಡ್ ಬೆಂಗಳೂರು: ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿ ಮತ್ತು ಬೆಂಗಳೂರನ್ನು ಜಾಗತಿಕ ಕೇಂದ್ರವನ್ನಾಗಿ ಮಾಡುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ "ಬ್ಯಾಂಡ್ ಬೆಂಗಳೂರು" "ಸಾರ್ವಜನಿಕರ ಧ್ವನಿ" ಸರ್ಕಾರದ ಧ್ವನಿ ಎಂಬ ಮನೋಭಾವದಿಂದ ರೂಪಿಸಲಾಗಿರುತ್ತದೆ. ಈ ಪರಿಕಲ್ಪನೆಯಡಿ 8 ಪ್ರಮುಖ ವಿಷಯಗಳ ಕುರಿತು ತಜ್ಞರಿಂದ ಹಾಗೂ ಸಾರ್ವಜನಿಕರಿಂದ ಸಲಹೆ ಪಡೆಯಲಾಗಿದೆ. ಸಾರ್ವಜನಿಕ ಸಂಘಗಳು, ನಾಗರಿಕ ಹಿತರಕ್ಷಣಾ ವೇದಿಕೆಗಳು, ಕೈಗಾರಿಕಾ ವಲಯದ ತಜ್ಞರೊಂದಿಗೆ ಸಂವಾದ ನಡೆಸಲಾಗಿದೆ. ಅದರಂತೆ, 70,000 ಕ್ಕೂ ಹೆಚ್ಚುಸಲಹೆಗಳನ್ನು ಸಂಗ್ರಹಿಸಿ, ಸದರಿ ಸಲಹೆಗಳನ್ನು ಸಮಿತಿಯು ಪರಿಶೀಲಿಸಿ ಶಿಫಾರಸು ಮಾಡುತ್ತದೆ ಎಂದಿದ್ದಾರೆ.

ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ: 2023-24ನೇ ಸಾಲಿನ ಆಯವ್ಯಯದಲ್ಲಿ ಜಲ ಸಂಪನ್ಮೂಲ ಇಲಾಖೆಗೆ (ಭಾರಿ ಮತ್ತು ಮಧ್ಯಮ ನೀರಾವರಿ) ಒಟ್ಟು ರೂ.16,735.49 ಕೋಟಿ ಅನುದಾನ ಒದಗಿಸಲಾಗಿದೆ. ನವೆಂಬರ್-2023ರ ಅಂತ್ಯಕ್ಕೆ ರೂ.9223.24 ಕೋಟಿಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದೆ ಮತ್ತು 31,117.98 ಎಕರೆ (12,593 ಹೆಕ್ಟೇರ್) ನೀರಾವರಿ ಸಾಮರ್ಥ್ಯವನ್ನು ಕಲ್ಪಿಸಲಾಗಿದೆ. ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲನೇ ಹಂತದ ಏತ ಕಾಮಗಾರಿಗಳು ಮತ್ತು ವಿದ್ಯುತ್ ಪೂರೈಕೆ ಕಾಮಗಾರಿಗಳು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಪ್ರಾಯೋಗಿಕವಾಗಿ ಗುರುತ್ವ ಕಾಲುವೆಯ 42 ಕಿ.ಮೀ.ವರೆಗೆ ಹರಿಸಿ ಚಾಲನೆಗೊಳಿಸಲು ಯೋಜಿಸಲಾಗಿದೆ. ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ ಪರಿಹಾರಕ ಅರಣ್ಯವೃದ್ಧಿ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಬಗ್ಗೆ ಹಾಗೂ ಯೋಜನಾ ಕಾಮಗಾರಿಗಳನ್ನು ಮತ್ತು ಭೂ ಸ್ವಾಧೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸುವ ಬಗ್ಗೆ, ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ: ಉತ್ತರ ಕರ್ನಾಟಕದ ಪ್ರತಿಷ್ಠಿತ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿಯ ಯೋಜನಾ ಕಾಮಗಾರಿಗಳನ್ನು ತ್ವರಿತಗೊಳಿಸುವ ಸಲುವಾಗಿ ಭೂಸ್ವಾಧೀನ ಮತ್ತು ಪುನ‌ರ್ ವಸತಿ ಮತ್ತು ಪುನರ್ ನಿರ್ಮಾಣ ಪ್ರಕ್ರಿಯೆಗೆ ಆದ್ಯತೆ ನೀಡಲಾಗಿದೆ. ಸಂವಿಧಾನ ಅನುಷ್ಠಾನಗೊಂಡ 75ನೇ ವರ್ಷದಲ್ಲಿ ಕರ್ನಾಟಕ ಹಾಗೂ ಭಾರತ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿವೆ. ಇದು ನಾವು 1950 ರಲ್ಲಿ ನಮ್ಮ ಅದ್ಭುತ ಲಿಖಿತ ಸಂವಿಧಾನವನ್ನು ಅಳವಡಿಸಿಕೊಂಡ ಕಾರಣದಿಂದಾಗಿ ಸಾಧ್ಯವಾಗಿದೆ. ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಅವರ ತಂಡದ ಸದಸ್ಯರ ದೂರದೃಷ್ಟಿಗೆ ನಾವು ಅಭಾರಿಯಾಗಿದ್ದೇವೆ. ಅವರು ನಮಗೆ ಪ್ರಗತಿಯ ದಾರಿಯಲ್ಲಿ ನಡೆಯುವುದಕ್ಕೆ ದಾರಿದೀಪವಾಗಿದ್ದಾರೆ ಎಂದು ಮಾಹಿತಿ ನೀಡಿದರು.

ರಾಜ್ಯಪಾಲರು ಸಲಹೆ: ಯುಗಯುಗಳಿಂದ ಮಾನವೀಯತೆ ನೆಲೆಸಿರುವ ರಾಷ್ಟ್ರ ನಮ್ಮ ಭಾರತ. ಇದು ವಿಭಿನ್ನ ಧರ್ಮ, ಸಮಾಜ, ಸಂಸ್ಕೃತಿ ಮತ್ತು ಭಾಷೆಗಳಿಂದ ಆಶೀರ್ವದಿಸಲ್ಪಟ್ಟಿರುವ ದೇಶವಾಗಿದೆ, ಎಲ್ಲವೂ ಪರಸ್ಪರ ಸೌಹಾರ್ದತೆಯಿಂದ ಪರಸ್ಪರ ಸಂಬಂಧ ಹೊಂದಿದೆ. ಇಡೀ ಜಗತ್ತಿಗೆ “ವಿವಿಧತೆಯಲ್ಲಿ ಏಕತೆ" ಎಂಬ ಸಂದೇಶವನ್ನು ನೀಡುವ ಎಲ್ಲರ ನಡುವೆ ನಾವು ಶಾಂತಿ ಮತ್ತು ಸಾಮರಸ್ಯವನ್ನು ಸ್ಥಾಪಿಸಬೇಕು. ನಮ್ಮ ರಾಷ್ಟ್ರೀಯ ಏಕತೆಯ ಬಲವರ್ಧನೆ ಮತ್ತು ಐಕ್ಯತೆಗಾಗಿ ನಾವು ಶ್ರಮಿಸಬೇಕು. ಕರ್ನಾಟಕದ ಎಲ್ಲಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು ಒಳಗೊಳ್ಳುವಿಕೆಗಾಗಿ ನಾವೆಲ್ಲ ಒಟ್ಟಾಗಿ ಕೆಲಸ ಮಾಡೋಣ'' ಎಂದು ರಾಜ್ಯಪಾಲರು ಸಲಹೆ ನೀಡಿದರು.

ಇದನ್ನೂ ಓದಿ: ಗಣರಾಜ್ಯೋತ್ಸವ: ಮಾಣಿಕ್ ಶಾ ಪರೇಡ್ ಮೈದಾನದ ಸುತ್ತ ಪೊಲೀಸ್ ಭದ್ರತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.