ETV Bharat / state

ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ ಮಾಡಲು ಸಿಎಂಗೆ ಮನವಿ - Renaming Ramanagara

author img

By ETV Bharat Karnataka Team

Published : Jul 9, 2024, 1:21 PM IST

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ ಮಾಡಲು ಕೋರಿ ಡಿಸಿಎಂ ಡಿ.ಕೆ.ಶಿವಕುಮಾರ್ ನಿಯೋಗ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದೆ.

RAMANAGARA  Bengaluru  Matter of renaming of Ramanagara  DK Shivakumar
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣಕ್ಕಾಗಿ ಕೋರಿ ಡಿಕೆಶಿ ನಿಯೋಗದಿಂದ ಸಿಎಂಗೆ ಮನವಿ (ETV Bharat)
ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ (ETV Bharat)

ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡಿ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸುವಂತೆ ಕೋರಿ ಡಿಸಿಎಂ ಡಿಕೆಶಿ ನೇತೃತ್ವದ ನಿಯೋಗ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿತು. ಈ ಕುರಿತು ಸ್ಪಂದಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ವಿಧಾನಸೌಧದಲ್ಲಿಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಡಿ.ಕೆ.ಶಿವಕುಮಾರ್ ನೇತೃತ್ವದ ನಿಯೋಗದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ, ಮಾಜಿ ಸಂಸದ ಡಿ.ಕೆ.ಸುರೇಶ್, ಮಾಜಿ ಶಾಸಕ ಸಿ.ಎಂ.ಲಿಂಗಪ್ಪ, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಇದ್ದರು.

ಮನವಿ ಪತ್ರದಲ್ಲಿ ಮೊದಲು ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲ್ಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. 1986ರ ಸಾಲಿನಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಲಾಯಿತು ಎಂದು ತಿಳಿಸಿದ್ದಾರೆ.

2007ರ ಸಾಲಿನಲ್ಲಿ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು. ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕುಗಳನ್ನು ಸೇರಿಸಿಕೊಂಡು ಹೊಸದಾಗಿ ರಾಮನಗರ ಜಿಲ್ಲೆಯನ್ನಾಗಿ 2007ರಲ್ಲಿ ಘೋಷಿಸಿ, ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಲಾಯಿತು ಎಂದು ಉಲ್ಲೇಖಿಸಿದ್ದಾರೆ.

ಪ್ರಸ್ತುತ, ಬೆಂಗಳೂರು ನಗರದ ಅಂತಾರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲ್ಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನಮ್ಮ ಚಿಂತನೆಯೂ ಕೂಡ. ಆದ್ದರಿಂದ, ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡಲು ಕೋರುತ್ತೇವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಸಿಎಂ ಭೇಟಿಯ ಸಂದರ್ಭದಲ್ಲಿ ಮಾತನಾಡಿದ ಮಾಜಿ ಎಂಎಲ್​ಸಿ ಸಿ.ಎಂ.ಲಿಂಗಪ್ಪ, "ರಾಮನಗರ, ಕನಕಪುರ ಹಾಗೂ ಚನ್ನಪಟ್ಟಣ ಮಾಗಡಿ ಮತ್ತು ಬೆಂಗಳೂರಿಗೆ ಅವಿನಾಭಾವ ಸಂಬಂಧವಿದೆ. ಪುರಾತನ ಸಂಬಂಧದ ಹೆಸರು ಉಳಿಸಿಕೊಳ್ಳಬೇಕು ಅನ್ನೋದು ಅಷ್ಟೇ ಹೊರತಾಗಿ ನಮಗೆ ಇನ್ನೇನೂ ಇಲ್ಲ. ರಾಮನಗರವೇ ನಮಗೆ ಕೇಂದ್ರ. ರಾಮನಗರವನ್ನು ಬೆಂಗಳೂರಿಗೆ ಸೇರಿಸುವುದಿಲ್ಲ. ಅದು ಪ್ರತ್ಯೇಕವಾಗಿ ಇರುತ್ತೆ. ನಮಗೆ ಹೆಸರು ಬೇಕು‌. ಬೆಂಗಳೂರು ದಕ್ಷಿಣ ಜಿಲ್ಲೆ ಅಂತ ಹೆಸರು ಬೇಕು" ಎಂದು ಕೋರಿದರು.

ಸಚಿವ ಸಂಪುಟದಲ್ಲಿ ಚರ್ಚೆಯ ಬಳಿಕ ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, "ನನ್ನ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ್ದೆವು. ನಾವೆಲ್ಲಾ ಬೆಂಗಳೂರಿನವರೇ. ಮೊದಲು ಬೆಂಗಳೂರು ಜಿಲ್ಲೆಗೆ ರಾಮನಗರ ಸೇರಿತ್ತು. ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಯಿತು. ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಕೋರಲಾಗಿದೆ. ಇದಕ್ಕೆ ಸಿಎಂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಲಿದೆ. ಬಳಿಕ ಹೆಸರು ಬದಲಾವಣೆ ಆಗಲಿದೆ. ಈಗಿರುವ ರಾಮನಗರವೇ ಹೆಡ್ ಕ್ವಾಟ್ರಸ್ ಆಗಿರಲಿದೆ. ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ಬೆಂಗಳೂರು ದಕ್ಷಿಣ ವ್ಯಾಪ್ತಿಗೆ ಸೇರಲಿವೆ" ಎಂದು ತಿಳಿಸಿದರು.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಒಂದು ವಾರದಲ್ಲಿ ದಾಖಲೆಯ 96 ಇಂಚು ಮಳೆ: ಮಂಗಗಳಿಗೂ ಸಂಕಷ್ಟ - Chikkamagaluru Rain

ETV Bharat Logo

Copyright © 2024 Ushodaya Enterprises Pvt. Ltd., All Rights Reserved.