ETV Bharat / state

'ವಾಲ್ಮೀಕಿ ನಿಗಮಕ್ಕೆ ಹಣ ಮರಳಿಸಲು ಕ್ರಮ ವಹಿಸಿ': ಸಿಎಂಗೆ ಮನವಿ ಸಲ್ಲಿಸಿದ ವಾಲ್ಮೀಕಿ ಶ್ರೀಗಳ ನಿಯೋಗ

ವಾಲ್ಮೀಕಿ ನಾಯಕ ಸಮಾಜದ ನಿಯೋಗ ವಾಲ್ಮೀಕಿ ನಿಗಮಕ್ಕೆ ಹಣ ಮರಳಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದೆ.

author img

By ETV Bharat Karnataka Team

Published : 2 hours ago

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ. (ETV Bharat)

ಬೆಂಗಳೂರು: ಹರಿಹರ ಸಮೀಪದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಪ್ರಸನ್ನಾನಂದಪುರಿ ಮಹಾ ಸ್ವಾಮೀಜಿಗಳ ನೇತೃತ್ವದಲ್ಲಿ ಸಮುದಾಯದ ಶಾಸಕರುಗಳ ಮತ್ತು ಮುಖಂಡರುಗಳ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ನೆರವೇರಿತು.

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದ ಸ್ವಾಮೀಜಿ, ಶಾಸಕರಾದ ಬಿ.ಎಂ. ನಾಗರಾಜ, .ಟಿ. ರಘುಮೂರ್ತಿ, ಬಸನಗೌಡ ತುರ್ವಿಹಾಳ, ರಾಜಾ ವೇಣುಗೋಪಾಲ ನಾಯಕ, .ಡಾ.ಶ್ರೀನಿವಾಸ, ಲೋಕಸೇವಾ ಆಯೋಗದ ಮಾಜಿ ಸದಸ್ಯ ಜಿ.ಟಿ. ಚಂದ್ರಶೇಖರಪ್ಪ ಮತ್ತಿತರ ಮುಖಂಡರನ್ನೊಳಗೊಂಡ ವಾಲ್ಮೀಕಿ ನಾಯಕ ಸಮಾಜದ ನಿಯೋಗವು ಸಿಎಂ ಅವರನ್ನು ಭೇಟಿ ಮಾಡಿತು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರವಾಗಿದೆ ಎನ್ನಲಾದ ಹಣವನ್ನು ತಕ್ಷಣವೇ ನಿಗಮಕ್ಕೆ ಬಿಡುಗಡೆ ಮಾಡಿ ಜನಾಂಗದ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸಬೇಕು, ತಳವಾರ ಹೆಸರಿನಲ್ಲಿ ನಕಲಿ ಪರಿಶಿಷ್ಟ ಪಂಗಡ ಪಡೆಯುತ್ತಿರುವುದನ್ನು ತಡೆಯಲು ಅಗತ್ಯ ಕ್ರಮವಹಿಸಲು ಮನವಿ ಮಾಡಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಜನಾಂಗದ ಅಹವಾಲುಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿ, ತಕ್ಷಣ ಸಭೆ ಕರೆದು ಚರ್ಚಿಸಿ ಪರಿಹರಿಸುವುದಾಗಿ ತಿಳಿಸಿದರು.

ಇದನ್ನೂ ಓದಿ: ಜನವಸತಿ ಪ್ರದೇಶದಲ್ಲಿ ಆಟೋ ಎಲ್‌ಪಿಜಿ ಘಟಕ: ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.