ಗಂಗಾವತಿ: ಕೊಪ್ಪಳ ಜಿಲ್ಲೆಯಿಂದ ಆಂಧ್ರಪ್ರದೇಶಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಅರಿತ ಗಂಗಾವತಿ ಗ್ರಾಮೀಣ ಪೊಲೀಸರು ದಾಳಿ ಮಾಡಿ 16 ಎತ್ತುಗಳನ್ನು ಸಂರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ರಮ ಸಾಗಣೆಯಲ್ಲಿ ತೊಡಗಿದ್ದ 9 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಆಲೂರು ಮಂಡಲದ ಸೀನಹೊತೂರಿನ ಚಾಲಕ ರಘುವೀರ್, ತುಮಿಳು ಬೀಡು ಗ್ರಾಮದ ಶೇಖಣ್ಣ ತಹಸೀಲ್ದಾರ್, ಚಂದ್ರಣ್ಣ ತಹಸೀಲ್ದಾರ್, ರಾಮಾಂಜನೇಯ, ಹಂಪಾ ಗ್ರಾಮದ ಆಂಜನೇಯ, ಪೆದ್ದ ಹೂತೂರಿನ ಹುಚ್ಚೀರಪ್ಪ, ಮೈನಾಪುರದ ವೈಕುಂಠ, ಟಿ. ಹುಚೀರಪ್ಪ ಹಾಗೂ ರಾಯಪ್ಪ ಕೊಡೇಕಲ್ ಎಂದು ಆರೋಪಿಗಳೆಂದು ಗುರುತಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಗಿಣಿಗೇರಾದಿಂದ 16 ಎತ್ತುಗಳನ್ನು ಖರೀದಿಸಿ ಆರೋಪಿಗಳು, ಒಂದೇ ವಾಹನದಲ್ಲಿ ಸಾಗಣೆ ಮಾಡುತ್ತಿದ್ದರು. ಗಂಗಾವತಿ ತಾಲೂಕಿನ ಕಡೇಬಾಗಿಲು ಗ್ರಾಮದ ಬಳಿ ದಾಳಿ ಮಾಡಿ ಪೊಲೀಸರು ಎಂಟು ಲಕ್ಷ ಮೌಲ್ಯದ 16 ಜಾನುವಾರುಗಳನ್ನು ಸಂರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಜಾನುವಾರುಗಳನ್ನು ಸಾಗಣೆ ಮಾಡುತ್ತಿದ್ದವರ ಬಳಿ ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ಅನುಮಾನಗೊಂಡ ಪೊಲೀಸರು ಗೋವುಗಳನ್ನು ರಕ್ಷಣೆ ಮಾಡಿ, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತಲಾ 50 ಸಾವಿರ ಬೆಲೆ ಬಾಳುವ ಎಂಟು ಲಕ್ಷ ಮೌಲ್ಯದ ಜಾನುವಾರುಗಳನ್ನು ರಕ್ಷಣೆ ಮಾಡಿರುವ ಪೊಲೀಸರು, ಇದೀಗ ವಾಹನ ಸಮೇತ ಚಾಲಕನನ್ನು ವಶಕ್ಕೆ ಪಡೆದು ಜಾನುವಾರುಗಳ ಅಕ್ರಮ ಸಾಗಣೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂಓದಿ:ದೊಡ್ಡಬಳ್ಳಾಪುರ: ಹಾವು ಕಡಿತದಿಂದ 7 ವರ್ಷದ ಬಾಲಕಿ ಸಾವು - snake bite