ETV Bharat / state

ಖಾಸಗಿ ಉದ್ಯಮಗಳಲ್ಲೂ ಕನ್ನಡಿಗರಿಗೆ ಉದ್ಯೋಗ ಖಾತ್ರಿ, ಸಿಎಂ ಜತೆ ಚರ್ಚಿಸಿ ಗೊಂದಲಗಳಿಗೆ ತೆರೆ: ಸಚಿವ ಎಂ.ಬಿ.ಪಾಟೀಲ್ - MB Patil

ಖಾಸಗಿ ಉದ್ಯಮಗಳಲ್ಲೂ ಕನ್ನಡಿಗರಿಗೆ ಹುದ್ದೆಗಳನ್ನು ಮೀಸಲಿಡಲಾಗುವುದು ಎಂಬ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು ಎಂದು ಸಚಿವ ಎಂ.ಬಿ ಪಾಟೀಲ್​ ಹೇಳಿದ್ದಾರೆ.

author img

By ETV Bharat Karnataka Team

Published : Jul 17, 2024, 3:12 PM IST

ಎಂ.ಬಿ ಪಾಟೀಲ್​
ಎಂ.ಬಿ ಪಾಟೀಲ್​ (ETV Bharat)

ಬೆಂಗಳೂರು: ಖಾಸಗಿ ಉದ್ಯಮಗಳಲ್ಲಿ ಕೂಡ ಕನ್ನಡಿಗರಿಗೆ ಕೆಲವು ಶ್ರೇಣಿಯ ಹುದ್ದೆಗಳನ್ನು ನೂರಕ್ಕೆ ನೂರರಷ್ಟು ಮೀಸಲಿಡಲಾಗುವುದು. ಇದೇ ಸಂದರ್ಭದಲ್ಲಿ ಉದ್ಯಮಗಳ ಹಿತಾಸಕ್ತಿಗಳನ್ನು ಸಹ ಕಾಪಾಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಸಂಬಂಧ ಸರಕಾರವು ವಿಧೇಯಕಕ್ಕೆ ಅನುಮೋದನೆ ನೀಡಿದೆ. ಈ ವಿಚಾರವಾಗಿ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿ-ಬಿಟಿ, ಕಾನೂನು ಮತ್ತು ಕಾರ್ಮಿಕ ಸಚಿವರುಗಳ ಜೊತೆ ಚರ್ಚಿಸಿ, ಗೊಂದಲಗಳಿಗೆ ತೆರೆ ಎಳೆಯಲಾಗುವುದು ಎಂದರು. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಲೇಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ಕೌಶಲಗಳಿಲ್ಲದ ಕನ್ನಡಿಗರಿಗೆ ಕೌಶಲ್ಯ ನೀಡಿ ಸಜ್ಜುಗೊಳಿಸುವ ಕೆಲಸವನ್ನೂ ಸರಕಾರವೇ ಮಾಡಲಿದೆ. ತಯಾರಿಕಾ ವಲಯ ಮತ್ತು ಕೈಗಾರಿಕಾ ಕ್ರಾಂತಿಯ ಉಜ್ವಲ ಅವಕಾಶಗಳನ್ನು ನಾವು ಕಳೆದುಕೊಳ್ಳುವಂತಿಲ್ಲ ಎಂದು ಅವರು ಪ್ರತಿಪಾದಿಸಿದರು.

ಸ್ಥಳೀಯರ ಹಿತಾಸಕ್ತಿಗಳನ್ನು ಕಾಪಾಡಲು ಸರಕಾರ ಬದ್ಧವಾಗಿದೆ. ಹಾಗೆಯೇ ಉದ್ಯಮ ವಲಯದವರ ಹಿತಾಸಕ್ತಿಗೂ ಧಕ್ಕೆಯಾಗದಂತೆ ನಿಗಾ ವಹಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಎಲ್ಲರ ಜೊತೆಗೂ ಮಾತುಕತೆ ನಡೆಸಲಾಗುವುದು. ಈ ವಿಷಯದಲ್ಲಿ ಯಾವುದೇ ಆತಂಕ ಬೇಕಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಕರ್ನಾಟಕವು ಪುರೋಗಾಮಿ (ಪ್ರಗತಿಶೀಲ) ರಾಜ್ಯವಾಗಿದೆ. 'ಗ್ಲೋಬಲ್ ಚೈನಾ ಒನ್' ನೀತಿಯಿಂದ ಒದಗಿ ಬಂದಿರುವ ಸದವಕಾಶವನ್ನು ನಾವು ಕಳೆದುಕೊಳ್ಳುವಂತಿಲ್ಲ. ಇದು ಶತಮಾನಕ್ಕೊಮ್ಮೆ ಒದಗಿ ಬರುವ ಅವಕಾಶ ಎಂದು ಪಾಟೀಲ ಬಣ್ಣಿಸಿದರು.

ಇದನ್ನೂ ಓದಿ: ಬೆಂಗಳೂರು: ದಕ್ಷಿಣ ಭಾರತದ ಮೊದಲ ಡಬ್ಬಲ್ ಡೆಕ್ಕರ್ ರಸ್ತೆ ಇಂದಿನಿಂದ ಸಂಚಾರಕ್ಕೆ ಮುಕ್ತ - Double Decker Road

ETV Bharat Logo

Copyright © 2024 Ushodaya Enterprises Pvt. Ltd., All Rights Reserved.