ETV Bharat / state

ಒಂದು ರಾಷ್ಟ್ರ ಒಂದು ಚುನಾವಣೆ ವಿರೋಧಿಸುವ ನಿರ್ಣಯ ವಿಧಾನಸಭೆಯಲ್ಲಿ ಅಂಗೀಕಾರ: ನಿರ್ಣಯ ವಿರೋಧಿಸಿದ ಬಿಜೆಪಿ - Resolution Against One Election - RESOLUTION AGAINST ONE ELECTION

ಒಂದು ರಾಷ್ಟ್ರ ಒಂದು ಚುನಾವಣೆ ವ್ಯವಸ್ಥೆ ವಿರೋಧಿಸುವ ನಿರ್ಣಯವು ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ.

assembly
ವಿಧಾನಸಭೆ (ETV Bharat)
author img

By ETV Bharat Karnataka Team

Published : Jul 25, 2024, 3:05 PM IST

Updated : Jul 25, 2024, 3:12 PM IST

ಬೆಂಗಳೂರು: ಒಂದು ರಾಷ್ಟ್ರ ಒಂದು ಚುನಾವಣೆ ವ್ಯವಸ್ಥೆ ವಿರೋಧಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಇಂದು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ವಿರೋಧದ ನಡುವೆಯೂ ಅಂಗೀಕರಿಸಲಾಯಿತು.

ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು, ಮೈಸೂರಿನ ಮುಡಾದಲ್ಲಿನ ನಿವೇಶನ ಹಂಚಿಕೆ ಹಗರಣ ವಿರೋಧಿಸಿ ಧರಣಿ ನಡೆಸುತ್ತಿರುವ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ಈ ನಿರ್ಣಯ ಮಂಡಿಸಿದರು.

ಭಾರತವು ವಿಶ್ವದ ಅತಿದೊಡ್ಡ ಒಕ್ಕೂಟ ಪ್ರಜಾಪ್ರಭುತ್ವವಾಗಿದೆ. ಭಾರತ ಸಂವಿಧಾನದ ಭಾಗ 7ರಲ್ಲಿ ಪ್ರತಿಪಾದಿಸಿರುವ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯ ತತ್ವವು ಈ ಪ್ರಜಾಪ್ರಭುತ್ವದ ಆತ್ಮವಾಗಿದೆ. ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾಪವು ಭಾರತದ ಪ್ರಜಾಸತ್ತಾತ್ಮಕ ಮತ್ತು ಒಕ್ಕೂಟ ವ್ಯವಸ್ಥೆಗೆ ಅಪಾಯವನ್ನುಂಟು ಮಾಡುತ್ತದೆ. ಬೇರೆ ರಾಜ್ಯಗಳ ವಿಧಾನಸಭೆಗಳು ಅವುಗಳದೇ ಆದ ಅಧಿಕಾರ ಅವಧಿಯನ್ನು ಹೊಂದಿರುತ್ತವೆ ಮತ್ತು ಏಕರೂಪ ಚುನಾವಣಾ ವೇಳಾಪಟ್ಟಿಯು ರಾಷ್ಟ್ರೀಯ ವಿಷಯಗಳ ಮೇಲೆ ಹೆಚ್ಚಾಗಿ ಗಮನಹರಿಸುವ ಮತ್ತು ಸ್ಥಳೀಯ ಕಾಳಜಿಗಳನ್ನು ನಿರ್ಲಕ್ಷಿಸುವ ಮೂಲಕ ರಾಜ್ಯಗಳ ಸ್ವಾಯತ್ತತೆ ದುರ್ಬಲಗೊಳಿಸಬಹುದು ಎಂದರು.

ಸಾಕಷ್ಟು ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು, ಚುನಾವಣಾ ಸಿಬ್ಬಂದಿಯನ್ನು ನಿರ್ವಹಿಸುವುದು, ಮತದಾರರ ಬೇಸರ ಕಡಿಮೆಗೊಂಡ ಸರ್ಕಾರದ ಉತ್ತರದಾಯಿತ್ವ ಹಾಗೂ ಆರ್ಥಿಕ ಮತ್ತು ಸಾಮಾಜಿಕ ಅಡೆತಡೆಗಳು ಏಕಕಾಲಿಕ ಚುನಾವಣೆಗಳಿಗೆ ಸಂಬಂಧಿಸಿದ ಗುರುತರ ಗಂಡಾಂತರಗಳಾಗಿವೆ. ಹಾಗಾಗಿ, ಭಾರತದ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳು ಮತ್ತು ಒಕ್ಕೂಟ ಸಮಗ್ರತೆಯನ್ನು ರಕ್ಷಿಸಲು ಈ ಕಠೋರ ನೀತಿಯನ್ನು ಅನುಷ್ಠಾನಗೊಳಿಸಬಾರದು ಎಂದು ಕೇಂದ್ರ ಸರ್ಕಾರವನ್ನು ಈ ಸದನ ಆಗ್ರಹಿಸುತ್ತದೆ ಎಂದು ಹೇಳಿದರು.

ಇದಕ್ಕೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಮಿತಿ ರಚಿಸಿ, ವರದಿ ಪಡೆದು ನಂತರ ಒಂದು ರಾಷ್ಟ್ರ ಒಂದು ಚುನಾವಣೆ ವ್ಯವಸ್ಥೆ ರೂಪಿಸಲು ಮುಂದಾಗಿದೆ. ಬೇರೆ ಬೇರೆ ಸಮಯಗಳಲ್ಲಿ ಚುನಾವಣೆಗಳು ನಡೆಯುವುದರಿಂದ ನೀತಿ ಸಂಹಿತೆ ಎರಡು - ಮೂರು ತಿಂಗಳ ಕಾಲ ಜಾರಿಯಲ್ಲಿರಲಿದೆ. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ಕುಂಠಿತವಾಗಲಿದೆ ಎಂದು ತಿಳಿಸಿದರು.

ಏಕಕಾಲಿಕ ಚುನಾವಣೆ ವ್ಯವಸ್ಥೆಯಿಂದ ಸಮಯ, ಜನರ ತೆರಿಗೆಯ ಹಣ, ಮಾನವ ಸಂಪನ್ಮೂಲ ಉಳಿತಾಯವಾಗಲಿದೆ. ಜೊತೆಗೆ, ಅಭಿವೃದ್ಧಿ ಕಾರ್ಯಗಳಿಗೂ ಪೂರಕ ವಾತಾವರಣ ನಿರ್ಮಾಣವಾಗಲಿದೆ. ಸರ್ಕಾರದ ಈ ನಿರ್ಣಯವನ್ನು ನಾವು ವಿರೋಧಿಸುತ್ತೇವೆ, ಸರ್ವಾನುಮತದ ನಿರ್ಣಯ ಎಂಬುದಕ್ಕೆ ನಮ್ಮ ಸಹಮತ ಇಲ್ಲ ಎಂದು ಹೇಳಿದರು.

ಇದರ ನಡುವೆಯೂ ಸ್ಪೀಕರ್ ಯು.ಟಿ.ಖಾದರ್, ನಿರ್ಣಯವು ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಸದನದಲ್ಲಿ ಘೋಷಿಸಿದರು.

ಇದನ್ನೂ ಓದಿ: ಶಾಸಕರ ಗದ್ದಲದ ನಡುವೆ ವಿಧಾನಸಭೆಯಲ್ಲಿ 6 ವಿಧೇಯಕಗಳು ಅಂಗೀಕಾರ - Karnataka Assembly Session

Last Updated : Jul 25, 2024, 3:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.