ETV Bharat / state

ಜಂಟಿ ಸರ್ವೆಯ ನಂತರ ಕಂದಾಯ, ಅರಣ್ಯ ಭೂಮಿ ಗಡಿಯನ್ನು ನಿಖರವಾಗಿ ಗುರುತಿಸಲು ಸಾಧ್ಯ: ಸಚಿವ ಕೃಷ್ಣಭೈರೇಗೌಡ - Krishna Byre Gowda

ಜಂಟಿ ಸರ್ವೆ ಕಾರ್ಯದ ನಂತರ ಕಂದಾಯ ಭೂಮಿ ಮತ್ತು ಅರಣ್ಯ ಭೂಮಿ ಗಡಿಯನ್ನು ನಿಖರವಾಗಿ ಗುರುತಿಸಲಾಗುವುದು ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

Krishna Byre Gowda Joint Survey Revenue and forest land boundary
ಜಂಟಿ ಸರ್ವೆ ನಂತರ ಕಂದಾಯ, ಅರಣ್ಯ ಭೂಮಿ ಗಡಿಯನ್ನು ನಿಖರವಾಗಿ ಗುರುತಿಸಲು ಸಾಧ್ಯ: ಸಚಿವ ಕೃಷ್ಣಭೈರೇಗೌಡ
author img

By ETV Bharat Karnataka Team

Published : Mar 8, 2024, 7:11 AM IST

ಬೆಂಗಳೂರು: ''ರಾಜ್ಯದಲ್ಲಿ ಒಂದು ವೇಳೆ ಕಂದಾಯ ಭೂಮಿಯನ್ನು ತಪ್ಪಾಗಿ ಅರಣ್ಯ ಇಲಾಖೆ ನೋಟಿಫೈ ಮಾಡಿರುವುದು ಜಂಟಿ ಸರ್ವೆ ಅಥವಾ ಡ್ರೋನ್ ಸರ್ವೆಯಿಂದ ಖಚಿತವಾದಲ್ಲಿ ಆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಲು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಲಾಗುವುದು'' ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ''ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರ ಜೊತೆ ಈ ಕುರಿತು ಚರ್ಚೆ ನಡೆಸಲಾಗಿದೆ. ಜಂಟಿ ಸರ್ವೆ ನಂತರ ಕಂದಾಯ ಭೂಮಿ ಮತ್ತು ಅರಣ್ಯ ಭೂಮಿ ಗಡಿಯನ್ನು ನಿಖರವಾಗಿ ಗುರುತಿಸಲಾಗುವುದು. ಗಡಿ ಗುರುತಿಸಿದ ನಂತರ ಅಂತಹ ಜಮೀನಿನಲ್ಲಿ ಒಂದು ವೇಳೆ ಕೃಷಿ ಚಟುವಟಿಕೆ ನಡೆಯುತ್ತಿದ್ದರೆ, ಅರ್ಹ ಹಿಡುವಳಿದಾರರಿಗೆ ಸಾಗುವಳಿ ಚೀಟಿ ನೀಡಲು ಕ್ರಮ ಜರುಗಿಸಲಾಗುತ್ತದೆ. ಫಾರಂ-57 ಅಡಿಯಲ್ಲಿ ಅರ್ಹ ರೈತರು ಅರ್ಜಿ ಸಲ್ಲಿಸಿದ್ದರೆ, ಬಗರ್‌ಹುಕುಂ ಆ್ಯಪ್‌ ಮೂಲಕ ಭೂ ಮಂಜೂರು ಮಾಡುವುದು ಸರ್ಕಾರದ ಕರ್ತವ್ಯ'' ಎಂದರು.

''ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ಗಡಿ ವಿಚಾರದಲ್ಲಿ ದಶಕಗಳಿಂದಲೂ ಸಮಸ್ಯೆಗಳಿವೆ. ಅರಣ್ಯಭೂಮಿಯ ಗಡಿ ಗುರುತಿಸದ ಕಾರಣ ಅರಣ್ಯ ಪ್ರದೇಶಗಳ ವ್ಯಾಪ್ತಿಯಲ್ಲಿರುವ ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆರ್‌ಟಿಸಿ, ಪೋಡಿ, ಫೌತಿ ಖಾತೆ ಸೇರಿದಂತೆ ಈ ಭಾಗದಲ್ಲಿರುವವರಿಗೆ ಕಂದಾಯ ಇಲಾಖೆ ಸೇವೆಗಳನ್ನು ತಲುಪಿಸುವುದು ನೀಡುವುದು ದುಸ್ಥರವಾಗಿದೆ. ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದೂ ಸಹ ಸವಾಲಿನ ಕೆಲಸವಾಗಿದೆ'' ಎಂದಿದ್ದಾರೆ.

''ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಕಂದಾಯ ಹಾಗೂ ಅರಣ್ಯ ಇಲಾಖೆ ವತಿಯಿಂದ ರಾಜ್ಯಾದ್ಯಂತ ಜಂಟಿ ಸರ್ವೆ ನಡೆಸಿ ಜನ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಳೆದ ಚಳಿಗಾಲದ ಅಧಿವೇಶನದಲ್ಲೇ ಭರವಸೆ ನೀಡಿತ್ತು. ಕಂದಾಯ ಹಾಗೂ ಅರಣ್ಯ ಇಲಾಖೆ ಜಂಟಿ ಸರ್ವೆ ಮೂಲಕ ಪರಿಭಾವಿತ ಅರಣ್ಯ, ಮೀಸಲು ಅರಣ್ಯದ ಮಾಹಿತಿಯನ್ನು ಸಾರ್ವಜನಿಕಗೊಳಿಸುವ ಹಾಗೂ ನಕ್ಷೆ ಇಲ್ಲದ ಜಮೀನುಗಳಲ್ಲಿ ರೈತರಿಗೆ ಸಾಗುವಳಿ ಚೀಟಿ ನೀಡಲು ಸರ್ಕಾರ ನಿಶ್ಚಯಿಸಿತ್ತು. ಅದರಂತೆ ಅನೇಕ ವರ್ಷಗಳ ನಂತರ ಅರಣ್ಯ ಭೂಮಿಯ ಜಂಟಿ ಸರ್ವೆಗೆ ಫೆಬ್ರವರಿ 16ರಂದೇ ಅಧಿಕೃತವಾಗಿ ಸರ್ಕಾರದ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯಾದ್ಯಂತ ಸರ್ವೆ ಕೆಲಸವೂ ಭರದಿಂದ ಸಾಗುತ್ತಿದೆ. ಅಧಿಸೂಚನೆಯಲ್ಲಿ ಸೂಚಿಸಿರುವಂತೆ ಜಿಲ್ಲಾಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಸರ್ವೆ ಕಾರ್ಯದಲ್ಲಿ ತೊಡಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ'' ಎಂದು ತಿಳಿಸಿದ್ದಾರೆ.

ಡೀನೋಟಿಫಿಕೇಷನ್ ಮಾಡಲು ಅರಣ್ಯ ಇಲಾಖೆಗೆ ಮನವಿ: ''ಕಳೆದ ಎರಡು ತಿಂಗಳುಗಳಿಂದ ಜಂಟಿ ಸರ್ವೆ ಕೆಲಸ ಪ್ರಗತಿಯಲ್ಲಿದೆ. ಈಗಾಗಲೇ ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸರ್ವೆ ಕೆಲಸ ಪ್ರಗತಿಯಲ್ಲಿದೆ. ಸರ್ಕಾರಿ ಭೂ ಮಾಪಕರು (ಸರ್ವೆಯರ್‌) ಹಾಗೂ ಪರವಾನಗಿ ಹೊಂದಿರುವ ಭೂ ಮಾಪಕರ ಸಹಾಯದಿಂದ ಸರ್ವೆ ಕೆಲಸ ಆರಂಭಿಸಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 28,45,964 ಎಕರೆ ಪರಿಭಾವಿತ ಅರಣ್ಯ ಪ್ರದೇಶವಿದ್ದು, ಈ ಪೈಕಿ 12,70,847 ಎಕರೆ ಭೂಮಿಯನ್ನು ಅಳತೆ ಮಾಡಲಾಗಿದೆ. 11,541 ಎಕರೆ ವಿಸ್ತೀರ್ಣದ ಭೂಮಿ ಅಳತೆಗೆ ಬಾಕಿ ಇದ್ದು ಕ್ರಮ ಜರುಗಿಸಲಾಗಿದೆ. ಈವರೆಗಿನ ಸರ್ವೆ ಪ್ರಕಾರ ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 7910 ಎಕರೆ ಕಂದಾಯ ಜಮೀನು ಇದ್ದು, ಇದನ್ನು ಅರಣ್ಯ ಇಲಾಖೆ ನೋಟಿಫಿಕೇಶನ್ ಮಾಡಿರುವುದು ಪತ್ತೆಯಾಗಿದೆ. ಹೀಗಾಗಿ ಈ ಜಮೀನನ್ನು ಡೀನೋಟಿಫಿಕೇಷನ್ ಮಾಡಲು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಲಾಗಿದೆ'' ಎಂದಿದ್ದಾರೆ.

''ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಧಿಸೂಚನೆಯಂತೆ ಪರಿಭಾವಿತ ಒಟ್ಟು ಅರಣ್ಯ ಪ್ರದೇಶದ ವಿಸ್ತೀರ್ಣ 47,809.31 ಎಕರೆ. ಈ ಪೈಕಿ 21,662 ಎಕರೆ ಪ್ರದೇಶದ ಅಳತೆ ಕಾರ್ಯ ಮುಗಿದಿದ್ದು, 26,147 ಎಕರೆ ವಿಸ್ತೀರ್ಣದ ಪ್ರದೇಶ ಅಳತೆಗೆ ಕ್ರಮ ಜರುಗಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಒಟ್ಟು ಪರಿಭಾವಿತ ಅರಣ್ಯ ಪ್ರದೇಶದ ಪೈಕಿ ಈವರೆಗೆ ಒಟ್ಟು 20,769 ಎಕರೆ ಭೂಮಿಯನ್ನು ಅಳತೆ ಮಾಡಲಾಗಿದೆ. ಉಳಿದ ಪ್ರದೇಶವನ್ನೂ ಶೀಘ್ರ ಅಳತೆಗೆ ಕ್ರಮವಹಿಸಲಾಗಿದೆ'' ಎಂದು ತಿಳಿಸಿದ್ದಾರೆ.

ಜಂಟಿ ಸರ್ವೆ ಕೆಲಸಕ್ಕೆ ವೇಗ: ''ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಭಾವಿತ ಅರಣ್ಯ ಪ್ರದೇಶದ ವಿಸ್ತೀರ್ಣ ಒಟ್ಟು 21983 ಎಕರೆ ಎಂದು ಗುರುತಿಸಲಾಗಿದ್ದು, ಸರ್ವೆ ಕಾರ್ಯ ಪ್ರಗತಿಯಲ್ಲಿದೆ. ಈವರೆಗೆ 800 ಎಕರೆ ಜಮೀನಿನಲ್ಲಿ ಅಳತೆ ಕಾರ್ಯ ನಡೆಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 130927 ಎಕರೆ ವಿಸ್ತೀರ್ಣದ ಜಮೀನನ್ನು ಪರಿಭಾವಿತ ಅರಣ್ಯ ಪ್ರದೇಶ ಎಂದು ಗುರುತಿಸಿದ್ದು, ಈಗಾಗಲೇ 17 ಜನ ಭೂ ಮಾಪಕರನ್ನು ಸರ್ವೆ ಕೆಲಸಕ್ಕೆ ನಿಯೋಜಿಸಲಾಗಿದೆ. ಪ್ರಾಥಮಿಕವಾಗಿ 300 ಎಕರೆ ಪ್ರದೇಶದ ಸರ್ವೆ ಕಾರ್ಯ ಪೂರ್ಣಗೊಳಿಸಲಾಗಿದೆ.''

''ಅರಣ್ಯ ಹಾಗೂ ಕಂದಾಯ ಭೂಮಿ ಗುರುತಿಸುವ ಸಂಬಂಧ ಹೆಚ್ಚು ಸಮಸ್ಯೆಗಳಿರುವ ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಬೇರೆ ಬೇರೆ ಜಿಲ್ಲೆಗಳಿಂದ ಆದ್ಯತೆ ಮೇಲೆ ಭೂ ಮಾಪಕರನ್ನು ತುರ್ತು ನಿಯೋಜನೆಗೊಳಿಸಿ ಜಂಟಿ ಸರ್ವೆ ಕೆಲಸಕ್ಕೆ ವೇಗ ನೀಡಲಾಗಿದೆ'' ಎಂದಿದ್ದಾರೆ.

ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ: ''ರಾಜ್ಯಾದ್ಯಂತ ಪೋಡಿ, ಹದ್ದುಬಸ್ತು, ನ್ಯಾಯಾಲಯದಲ್ಲಿರುವ ತಕರಾರು ಪ್ರಕರಣಗಳ ಇತ್ಯರ್ಥಕ್ಕೆ ಸಂಬಂಧಿಸಿದಂತೆಯೂ ಭೂ ಮಾಪಕರ ಜವಾಬ್ದಾರಿ ಪ್ರಮುಖವಾದದ್ದಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಮೇಲ್ಕಾಣಿಸಿದ ಜಿಲ್ಲೆಗಳ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲೂ ಸಹ ಆದ್ಯತೆ ಮೇಲೆ ಶೀಘ್ರದಲ್ಲೇ ಜಂಟಿ ಸರ್ವೆ ಕೆಲಸಕ್ಕೆ ಹಂತಹಂತವಾಗಿ ಮುಂದಾಗುವಂತೆ ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ'' ಎಂದು ಹೇಳಿದ್ದಾರೆ.

"ಸರ್ವೆ ಕೆಲಸಗಳಿಗೆ ಚುರುಕುಗೊಳಿಸಿ ಸರ್ವೆಗೆ ಸಂಬಂಧಿಸಿದ ಜನರ ಎಲ್ಲಾ ಸಮಸ್ಯೆಗಳನ್ನೂ ಬಗೆಹರಿಸುವ ಸಲುವಾಗಿಯೇ ಈಗಾಗಲೇ 991 ಪರವಾನಗಿ ಸರ್ವೆಯರ್​ಗಳನ್ನು ಎಲ್ಲಾ ಜಿಲ್ಲೆಗಳಿಗೂ ಆದ್ಯತೆ ಮೇಲೆ ಕಳುಹಿಸಿಕೊಡಲಾಗುತ್ತಿದೆ. ಅಲ್ಲದೆ, 364 ಸರ್ಕಾರಿ ಸರ್ವೆಯರ್ ಹಾಗೂ 27 ಎಡಿಎಲ್‌ಆರ್ ನೇಮಕಕ್ಕೂ ಅಧಿಸೂಚನೆ ಹೊರಡಿಸಲಾಗಿದೆ. ಅಲ್ಲದೆ, ಪ್ರತೀ ಜಿಲ್ಲೆಯ ವಿಸ್ತೀರ್ಣವನ್ನು ಅಳೆಯುವ ಸಲುವಾಗಿ ಡ್ರೋನ್‌ ಸರ್ವೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಡ್ರೋನ್ ಸರ್ವೆ ಮೂಲಕವೂ ಜಿಲ್ಲಾ ವ್ಯಾಪ್ತಿಯಲ್ಲಿ ಕಂದಾಯ ಭೂಮಿ ವಿಸ್ತೀರ್ಣದ ಪ್ರಮಾಣ ಹಾಗೂ ಅರಣ್ಯ ಪ್ರದೇಶ ವಿಸ್ತೀರ್ಣದ ನಿಖರ ಪ್ರಮಾಣ ಎಷ್ಟು? ಎಂಬ ಮಾಹಿತಿಯನ್ನು ಗುರುತಿಸುವ ಕೆಲಸ ಚಾಲ್ತಿಯಲ್ಲಿದೆ'' ವಿವರಿಸಿದ್ದಾರೆ.

ಇದನ್ನೂ ಓದಿ: ಕೇಂದ್ರ ಸರ್ಕಾರಿ ನೌಕರರಿಗೆ ಶಿವರಾತ್ರಿ ಬಂಪರ್ ಗಿಫ್ಟ್​​​: ಶೇ ನಾಲ್ಕರಷ್ಟು ಡಿಎ ಹೆಚ್ಚಿಸಿ ಕೇಂದ್ರದ ಆದೇಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.