ETV Bharat / state

4 ಲಕ್ಷ ಹಣ ಲಂಚ ಸ್ವೀಕರಿಸುತ್ತಿದ್ದಾಗಲೇ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ - LOKAYUKTA

ಪಹಣಿಯಲ್ಲಿ ವಾರಸುದಾರರ ಹೆಸರನ್ನು ಸೇರ್ಪಡೆ ಮಾಡಲು ಅರ್ಜಿದಾರರಿಂದ 4 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಕಂದಾಯ ನಿರೀಕ್ಷಕರೊಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

REVENUE INSPECTOR IN LOKAYUKTA NET
ಸಾಂದರ್ಭಿಕ ಚಿತ್ರ (File)
author img

By ETV Bharat Karnataka Team

Published : 3 hours ago

ಮಂಗಳೂರು: ಆಸ್ತಿ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು 4 ಲಕ್ಷ ರೂ‌. ಲಂಚದ ಹಣ ಸ್ವೀಕರಿಸುತ್ತಿರುವಾಗಲೇ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

ಅರ್ಜಿದಾರರು ತಮ್ಮ ಮೃತಪಟ್ಟ ಅಜ್ಜಿಯ ಹೆಸರಿನಲ್ಲಿದ್ದ ಆಸ್ತಿಯ ಪಹಣಿಯಲ್ಲಿ ವಾರಸುದಾರರ ಹೆಸರನ್ನು ಸೇರ್ಪಡೆ ಮಾಡಲು ಕಳೆದ ವರ್ಷ ಮುಲ್ಕಿ ತಾಲೂಕು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮುಲ್ಕಿ ಕಂದಾಯ ನಿರೀಕ್ಷಕರ ಕಚೇರಿಗೆ ವಿಚಾರಣೆಗಾಗಿ ಕಳುಹಿಸಲಾಗಿತ್ತು. ಈ ಅರ್ಜಿಯನ್ನು ಮುಲ್ಕಿ ಕಂದಾಯ ನಿರೀಕ್ಷಕ ಜಿ. ಎಸ್ ದಿನೇಶ್ ಒಂದು ವರ್ಷಕ್ಕಿಂತ ಅಧಿಕ ಕಾಲ ಯಾವುದೇ ಕ್ರಮ ಕೈಗೊಳ್ಳದೇ ಬಾಕಿ ಇರಿಸಿಕೊಂಡಿದ್ದರು. ಅರ್ಜಿದಾರರು ಡಿಸೆಂಬರ್ 9ರಂದು ಕಂದಾಯ ನಿರೀಕ್ಷಕರ ಕಚೇರಿಗೆ ಹೋಗಿ ಈ ಬಗ್ಗೆ ವಿಚಾರಿಸಿದ್ದಾರು. ಆಗ ಕಂದಾಯ ನಿರೀಕ್ಷಕ ಜಿ. ಎಸ್ ದಿನೇಶ್ ಅವರು ಆಸ್ತಿಗೆ ಸಂಬಂಧಿಸಿದ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆಗೆ 4 ಲಕ್ಷ ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ಪಿರ್ಯಾದಿದಾರರು ದೂರು ನೀಡಿದ್ದರು.

REVENUE INSPECTOR IN LOKAYUKTA NET
ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ (ETV Bharat)

ಇಂದು (ಡಿಸೆಂಬರ್ 19) ಬೆಳಗ್ಗೆ ಮುಲ್ಕಿಯ ಕಂದಾಯ ನಿರೀಕ್ಷಕ ಜಿ. ಎಸ್ ದಿನೇಶ್, ಸುರತ್ಕಲ್ ಜಂಕ್ಷನ್ ಬಳಿ ಅರ್ಜಿದಾರರಿಂದ 4 ಲಕ್ಷ ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್​ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಸದರಿ ಅಧಿಕಾರಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿರುತ್ತದೆ ಎಂದು ಲೋಕಾಯುಕ್ತ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಉಪಲೋಕಾಯುಕ್ತರ ಸಂಬಂಧಿಕ ಎಂದು ತಹಶೀಲ್ದಾರ್​ಗೆ ವಂಚಿಸಲು ಯತ್ನ: ಆನೇಕಲ್​ನಲ್ಲಿ ಆರೋಪಿ ಸೆರೆ - MAN ARRESTED FOR ATTEMPT TO FRAUD

ETV Bharat Logo

Copyright © 2024 Ushodaya Enterprises Pvt. Ltd., All Rights Reserved.