ETV Bharat / state

ಬಿಬಿಎಂಪಿ ಪೂರ್ವ ವಲಯದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ಚುರುಕು - Bengaluru Road Pothole - BENGALURU ROAD POTHOLE

- ಬಿಬಿಎಂಪಿ ಪೂರ್ವ ವಲಯದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ - ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಬೆನ್ನಲ್ಲೇ ಎಚ್ಚೆತ್ತ ಪಾಲಿಕೆ ಅಧಿಕಾರಿಗಳು

ROAD POTHOLE FILLING
ರಸ್ತೆ ಗುಂಡಿ ಮುಚ್ಚವ ಕಾರ್ಯ (ETV Bharat)
author img

By ETV Bharat Karnataka Team

Published : Sep 9, 2024, 10:15 PM IST

ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಪಾಲಿಕೆಯ ಪೂರ್ವ ವಲಯ ಆಯುಕ್ತ ಸ್ನೇಹಲ್ ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶ ಹಾಗೂ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಿರ್ದೇಶನದಂತೆ ನಗರದಾದ್ಯಂತ ರಸ್ತೆ ಗುಂಡಿಗಳನ್ನು ಯುದ್ದೋಪಾದಿಯಲ್ಲಿ ಮುಚ್ಚಲಾಗುತ್ತಿದೆ. ಈ ಸಂಬಂಧ ಪೂರ್ವ ವಲಯ ಶಿವಾಜಿನಗರ ವ್ಯಾಪ್ತಿಯಲ್ಲಿ ಬರುವ ತಿಮ್ಮಯ್ಯ ರಸ್ತೆಯಲ್ಲಿ ಸೋಮವಾರ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಲ್, ಪಾಲಿಕೆ ವತಿಯಿಂದ ನಿರಂತರವಾಗಿ ರಸ್ತೆಗುಂಡಿಗಳನ್ನು ಮುಚ್ಚಲಾಗುತ್ತಿದೆ. ಆದರೆ, ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ ಎಂದು ನಾಗರಿಕರಿಂದ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಅಧಿಕಾರಿಗಳು ರಸ್ತೆಗಳು ರಸ್ತೆಗಿಳಿದು ಪರಿಶೀಲಿಸಿ, ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

Road pothole filling
ರಸ್ತೆ ಗುಂಡಿ ಮುಚ್ಚವ ಕಾರ್ಯ (ETV Bharat)

ಕಾಲಮಿತಿಯೊಳಗೆ ಗುಂಡಿ ಮುಚ್ಚುವ ಕೆಲಸ: ಪೂರ್ವ ವಲಯ ವ್ಯಾಪ್ತಿಯಲ್ಲಿ 258.59 ಕಿ.ಮೀ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಿದ್ದು, ⁠1394 ಕಿ.ಮೀ ಉದ್ದದ ವಾರ್ಡ್ ರಸ್ತೆಗಳು ಸೇರಿದಂತೆ ಒಟ್ಟು 1652.59 ಉದ್ದದ ರಸ್ತೆಗಳಿವೆ. ಕಳೆದ 1 ವರ್ಷದಲ್ಲಿ 2,390 ರಸ್ತೆ ಗುಂಡಿಗಳು ಮುಚ್ಚಲಾಗಿದೆ. ರಸ್ತೆ ಗುಂಡಿ ಗಮನ ತಂತ್ರಾಂಶದಲ್ಲಿ ಬರುತ್ತಿರುವ ದೂರುಗಳನ್ನು ಕಾಲಮಿತಿಯೊಳಗಾಗಿ ಮುಚ್ಚುವ ಕೆಲಸ ಮಾಡಲಾಗುತ್ತಿದೆ ಎಂದರು.

ಪೂರ್ವ ವಲಯಕ್ಕೆ ಸಂಬಂಧಿಸಿದಂತೆ ರಸ್ತೆ ಗುಂಡಿ ಗಮನ ತಂತ್ರಾಂಶದಲ್ಲಿ ಕಳೆದ ಏಪ್ರಿಲ್ 2024ರಿಂದ ಇದುವರೆಗೆ ವಾರ್ಡ್ ರಸ್ತೆಗಳಲ್ಲಿ 494 ದೂರುಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ 537 ದೂರುಗಳು ದಾಖಲಾಗಿದೆ. ಒಟ್ಟಾರೆ, 1,031 ದೂರುಗಳ ಪೈಕಿ ವಾರ್ಡ್ ರಸ್ತೆಗಳಲ್ಲಿನ 133 ಹಾಗೂ ಪ್ರಮುಖ ರಸ್ತೆಗಳಲ್ಲಿನ 132 ಗುಂಡಿಗಳು ಸೇರಿ 265 ಗುಂಡಿಗಳನ್ನು ಮುಚ್ಚಲಾಗಿದೆ. ಬಾಕಿಯಿರುವ 766 ಗುಂಡಿಗಳನ್ನು ಕಾಲಮಿತಿಯೊಳಗಾಗಿ ಮುಚ್ಚಲಾಗುವುದು ಎಂದು ತಿಳಿಸಿದರು.

Road pothole filling
ರಸ್ತೆ ಗುಂಡಿ ಮುಚ್ಚವ ಕಾರ್ಯ (ETV Bharat)

ಸಂಬಂಧಪಟ್ಟ ಇಂಜಿನಿಯರ್​​ಗಳ ಜೊತೆ ಕೂಡ ಸಭೆ ನಡೆಸಿ, ಪ್ರಮುಖ ಹಾಗೂ ವಾರ್ಡ್ ರಸ್ತೆಗಳಲ್ಲಿನ ಗುಂಡಿಗಳನ್ನು ಗುರುತಿಸಿ ಒಂದು ವಾರದೊಳಗಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ವಿಭಾಗವಾರು ಬರುವ ಕಾರ್ಯಪಾಲಕ ಅಭಿಯಂತರರು ರಸ್ತೆ ಗುಂಡಿಗಳನ್ನು ಮುಚ್ಚಿದ ನಂತರ ಪ್ರಮಾಣೀಕರಣ ಪತ್ರ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

ಪಾದಚಾರಿ ಒತ್ತುವರಿ ತೆರವು ಕಾರ್ಯಾಚರಣೆ: ರಸ್ತೆ ಗುಂಡಿ ಮುಚ್ಚು ಕಾರ್ಯ ಪರಿಶೀಲನೆಯ ನಂತರ ತಿಮ್ಮಯ್ಯ ರಸ್ತೆ, ನ್ಯೂ ಮಾರ್ಕೆಟ್ ರಸ್ತೆ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ಭೇಟಿ ನೀಡಿ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿರುವವರಿಗೆ ಕೂಡಲೆ ತೆರವುಗೊಳಿಸಿ ಮತ್ತೆ ಒತ್ತುವರಿ ಮಾಡದಂತೆ ಸಹ ವಲಯ ಆಯುಕ್ತರು ಕಟ್ಟೆಚ್ಚರಿಕೆ ನೀಡಿದರು. ಈ ವೇಳೆ, ಮುಖ್ಯ ಅಭಿಯಂತರರಾದ ಸುಗುಣಾ, ಕಾರ್ಯಪಾಲಕ ಅಭಿಯಂತರ ಸೈಫುದ್ದೀನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Road pothole filling
ರಸ್ತೆ ಗುಂಡಿ ಮುಚ್ಚವ ಕಾರ್ಯ (ETV Bharat)

ಬಿಬಿಎಂಪಿ ವ್ಯಾಪ್ತಿಯಲ್ಲಿ 2,000 ಗುಂಡಿಗಳು: ಗುಂಡಿಗಳ ಕುರಿತು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಕೂಡ ಮಾತನಾಡಿ, ''ಬಿಬಿಎಂಪಿಯ ಎಲ್ಲಾ ಪ್ರದೇಶಗಳಲ್ಲಿ ಒಟ್ಟು 2,000 ಗುಂಡಿಗಳು ಇರಬಹುದು. ವಾರ್ಡ್ ರಸ್ತೆಗಳಲ್ಲಿ 1,663 ಗುಂಡಿಗಳು, ಮುಖ್ಯ ರಸ್ತೆಯಲ್ಲಿ 280 ಗುಂಡಿಗಳಿವೆ. ಇವುಗಳನ್ನು ಒಂದು ವಾರದಲ್ಲಿ ಮುಚ್ಚಬಹುದು. ಇವೆಲ್ಲವೂ ಆ್ಯಪ್‌ ಮೂಲಕ ಸಾರ್ವಜನಿಕರು ರಿಪೋರ್ಟ್ ಮಾಡಿರುವ ರಸ್ತೆ ಗುಂಡಿಗಳಾಗಿವೆ. ಇದಲ್ಲದೆ, ಬೇರೆ ಕಡೆಯೂ ಗುಂಡಿಗಳೂ ಇರಬಹುದು. ಎಲ್ಲಾ ಕಡೆಯೂ ವಲಯ ಆಯುಕ್ತರ ನೇತೃತ್ವದಲ್ಲಿ ಮುಚ್ಚಿಸಲಾಗುತ್ತದೆ. ನಾನೂ ಮುಖ್ಯರಸ್ತೆಗಳನ್ನು ಪರಿಶೀಲಿಸುತ್ತೇನೆ'' ಎಂದರು.

ಇದನ್ನೂ ಓದಿ: ಗಡುವಿನೊಳಗೆ ಬೆಂಗಳೂರಿನ ರಸ್ತೆಗುಂಡಿ ಮುಚ್ಚದಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ - D K Shivakumar

ETV Bharat Logo

Copyright © 2025 Ushodaya Enterprises Pvt. Ltd., All Rights Reserved.