ETV Bharat / state

ಲೋಕಸಭೆ ಚುನಾವಣೆ ಹಿನ್ನೆಲೆ: 6 ತಿಂಗಳು ರೌಡಿಶೀಟರ್‌ ಇರ್ಫಾನ್ ಗಡಿಪಾರು - Rowdy sheeter exiled

ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಒಬ್ಬ ರೌಡಿಶೀಟರ್‌ನನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

author img

By ETV Bharat Karnataka Team

Published : Apr 11, 2024, 11:23 AM IST

ಕಮೀಷನರ್ ರೇಣುಕಾ ಸುಕುಮಾರ್
ಕಮೀಷನರ್ ರೇಣುಕಾ ಸುಕುಮಾರ್

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಗರ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿ ಸಮಾಜದ ಶಾಂತಿಗೆ ಭಂಗ ತರುವ ರೌಡಿಗಳ ಪುಂಡಾಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ಗಡಿಪಾರು ಮಾಡುವಂತಹ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಎಪಿಎಂಸಿ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಓರ್ವ ರೌಡಿಶೀಟರ್‌ನನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ನವನಗರ ಕೆ.ಎಚ್.ಬಿ ಕಾಲನಿ ನಿವಾಸಿಯಾಗಿರುವ ಇರ್ಫಾನ್ (37) ಎಂಬಾತನನ್ನು ದಿನಾಂಕ 20.04.2024 ರಿಂದ 06 ತಿಂಗಳ ಅವಧಿಗೆ ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಿ ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಆದೇಶ ಹೊರಡಿಸಿದ್ದಾರೆ.

'ಈ ರೌಡಿಶೀಟರ್‌ ಬಡ ಕುಟುಂಬದ ಹುಡುಗರ ಗುಂಪು ಕಟ್ಟಿಕೊಂಡು ಸಾರ್ವಜನಿಕರ ಮೇಲೆ ದಬ್ಬಾಳಿಕೆ ಮಾಡುವುದು. ಸಾರ್ವಜನಿಕ ಶಾಂತಿ ಹಾಳು ಮಾಡುವುದು. ವಿನಾಕಾರಣ ಜನರೊಂದಿಗೆ ಜಗಳ ತಗೆದು ಹಲ್ಲೆ ಮಾಡುವುದು, ಜೀವ ಬೆದರಿಕೆ ಹಾಕುವುದು, ಜೂಜಾಟ ಆಡಿಸುವುದು. ರೌಡಿಸಂ ಮೂಲಕ ಜನರಲ್ಲಿ ಭೀತಿ ಉಂಟುಮಾಡುವುದು, ಅಷ್ಟೆ ಅಲ್ಲದೇ ಈ ಹಿಂದೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಅಪರಾಧ ಕೂಡ ಮಾಡಿದ್ದಾನೆ'.

'ಸಾರ್ವಜನಿಕರಲ್ಲಿ ಭಯದ ವಾತಾವರಣ ಹುಟ್ಟಿಸುವ ಮೂಲಕ ಸಾರ್ವಜನಿಕ ಶಾಂತಿ - ಸುವ್ಯವಸ್ಥೆಗೆ ಧಕ್ಕೆ ತರುವಂತಹ ಪ್ರವೃತ್ತಿ ಹೊಂದಿದ್ದು, ಈತನ ಮೇಲೆ ಈಗಾಗಲೇ ಹುಬ್ಬಳ್ಳಿಯ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಹಲವಾರು ಪ್ರಕರಣಗಳು ದಾಖಲಾಗಿದ್ದು, ಈತನ ಮೇಲೆ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಸಹ ತೆರೆಯಲಾಗಿರುತ್ತದೆ'.

'ಆದರೂ ತನ್ನ ವರ್ತನೆ ಸುಧಾರಿಸಿಕೊಳ್ಳದೇ ವಿನಾಕಾರಣ ಸಾರ್ವಜನಿಕರ ಮೇಲೆ ಹಲ್ಲೆ ಮಾಡಿ ಮತ್ತೆ ಜೀವ ಬೆದರಿಕೆ ಹಾಕುವಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ಮುಂದುವರೆಸುತ್ತ ಸಮಾಜದ ಶಾಂತಿ ಮತ್ತು ಸ್ವಾಸ್ಥ್ಯ, ಹಾಳು ಮಾಡುತ್ತಿದ್ದಾನೆ. ಅಲ್ಲದೇ, ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಮತ್ತೆ ಅಪರಾಧಿಕ ಚಟುವಟಿಕೆ ಮಾಡುವ ಸಾಧ್ಯತೆ ಇರುವುದರಿಂದ ಈತನ ಚಟುವಟಿಕೆ ಮೇಲೆ ಸತತ ನಿಗಾ ಇಡಲಾಗಿತ್ತು. ಸಮಾಜದಲ್ಲಿ ಆರೋಗ್ಯಕರ ವಾತಾವರಣ ಕಾಯ್ದುಕೊಳ್ಳಲು ಮತ್ತು ಈತನ ಅಪರಾಧಿಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ 06 ತಿಂಗಳ ಅವಧಿಗೆ ಗಡಿಪಾರು ಮಾಡಿ ಆದೇಶಿಸಲಾಗಿರುತ್ತದೆ'.

ಈ ಮೂಲಕ ನಗರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗುವವರಿಗೆ ಕಠಿಣ ಕ್ರಮದ ಸಂದೇಶವನ್ನು ನೀಡಲಾಗಿದೆ.

ಇದನ್ನೂ ಓದಿ: ಕೊಪ್ಪಳ: ಪತ್ನಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಪತಿ - Koppala Crime Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.