ಮೈಸೂರು: ಟ್ಯೂಷನ್ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನು ಕರೆದೊಯ್ದ ಸೋದರಮಾವನೇ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಆರೋಪಿ ವಿರುದ್ದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಾಲಕಿಯ ಸೋದರ ಮಾವನಾಗಿರುವ ಆರೋಪಿ ಒಬ್ಬ ರೌಡಿಶೀಟರ್ ಕೂಡಾ ಹೌದು. ಸಾಕಷ್ಟು ಕ್ರಿಮಿನಲ್ ಪ್ರಕರಣಗಳು ಈತನ ವಿರುದ್ಧ ಇವೆ ಎಂದೂ ಕೂಡಾ ತಿಳಿದು ಬಂದಿದೆ.
ಮಗಳ ಮೇಲೆ ಅತ್ಯಾಚಾರ ಎಸಗಿದ ಬಗ್ಗೆ ಸಂತ್ರಸ್ತೆಯ ತಾಯಿ ಏಪ್ರಿಲ್ 25ರಂದು ಪೊಲೀಸರಿಗೆ ದೂರು ನೀಡಿದ್ದರು. ಏಪ್ರಿಲ್ 24ರಂದು 16 ವರ್ಷದ ಬಾಲಕಿಯನ್ನು ಟ್ಯೂಷನ್ಗೆ ಬಿಡುವುದಾಗಿ ನಂಬಿಸಿ ಕಾರಿನಲ್ಲಿ ತನ್ನ ಮನೆಗೆ ಕರೆದೊಯ್ದು ದುಷ್ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಯಾರಿಗೂ ಹೇಳಬೇಡ. ಮೊಬೈಲ್ ಕೊಡಿಸುತ್ತೇನೆ ಎಂದು ಆಮಿಷ ತೋರಿಸಿ ಕೃತ್ಯ ಮರೆಮಾಚಲು ಯತ್ನಿಸಿದ್ದಾನೆ. ನಂತರ ತಾನೇ ಮನೆಗೆ ಮರಳಿ ಬಿಟ್ಟು ಹೋಗಿದ್ದಾನೆ. ಇದರಿಂದ ಆತಂಕಗೊಂಡು ಆಳುತ್ತಾ ಬಾಲಕಿ ಮನೆಯವರಿಗೆ ಮಾಹಿತಿ ನೀಡಿದ್ದಾಳೆ. ಅಣ್ಣನಾದ ಆರೋಪಿ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಬೇಕೆಂದು ತಾಯಿ ದೂರಿನಲ್ಲಿ ಒತ್ತಾಯಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ: ಭೋಪಾಲ್: ಖಾಸಗಿ ಶಾಲೆಯ ಹಾಸ್ಟೆಲ್ನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ - Minor Girl Raped