ಹುಬ್ಬಳ್ಳಿ: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ 2 ಕೋಟಿ ರೂಪಾಯಿಗೂ ಅಧಿಕ ನಗದು ಹಣವನ್ನು ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕುಂದಗೋಳ ತಾಲೂಕಿನ ರಾಮನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಶಿಗ್ಗಾಂವಿಯಿಂದ ಬ್ರಿಜಾ ಕಾರಿನಲ್ಲಿ ಹಣವಿದ್ದ ಬ್ಯಾಗ್ಗಳೊಂದಿಗೆ ಪರಾರಿಯಾಗುತ್ತಿದ್ದ ಕಾರನ್ನು ಬೆನ್ನಟ್ಟಿದ ಚುನಾವಣಾ ಫ್ಲೈಯಿಂಗ್ ಸ್ಕ್ಯಾಡ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಹಣ ತಂದವರು ತಪ್ಪಿಸಿಕೊಳ್ಳಲು ವಿಫಲ ಯತ್ನ ನಡೆಸಿದ್ದಾರೆ.
ಸದ್ಯ ಕಾರಿನಲ್ಲಿದ್ದ ಬ್ಯಾಗ್ಗಳಲ್ಲಿ 2,02,42000 ಕೋಟಿ ಹಣ ಪತ್ತೆಯಾಗಿದೆ. ಈ ಹಣವನ್ನು ಚುನಾವಣೆಯಲ್ಲಿ ಹಂಚಲು ತರಲಾಗಿತ್ತಾ? ಅಥವಾ ಯಾವುದೋ ವ್ಯವಹಾರಕ್ಕೆ ಸಾಗಾಟ ಮಾಡಲಾಗುತ್ತಿತ್ತಾ ಎಂಬ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳದಲ್ಲಿ ಧಾರಾವಾಡ ಎಸ್ಪಿ ಗೋಪಾಲ ಬ್ಯಾಕೋಡ್ ಹೆಚ್ಚುವರಿ ಪೊಲೀಸ್ ಅಧೀಕ್ಷಕ ನಾರಾಯಣ ಭರಮನಿ ಸೇರಿದಂತೆ ಚುನಾವಣಾಧಿಕಾರಿಗಳು, ಆದಾಯ ತೆರಿಗೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಹಣದ ಮೂಲದ ಬಗ್ಗೆ ತನಿಖೆ ಮುಂದುವರೆದಿದೆ.
ಇದನ್ನೂ ಓದಿ: ಜಯನಗರದ ಕಾರಲ್ಲಿ ಕೋಟಿ ಹಣ ಪತ್ತೆ ಪ್ರಕರಣ: ಪೊಲೀಸರಿಂದ ಮಹತ್ವದ ಮಾಹಿತಿ ಕಲೆ - Money seize case