ETV Bharat / state

ಮುಡಾ ಹಗರಣ ಬಯಲಿಗೆಳೆದ ಆರ್​​ಟಿಐ ಕಾರ್ಯಕರ್ತರಿಗೆ ರಾಜ್ಯ ಸರ್ಕಾರದಿಂದ ಕಿರುಕುಳ: ಕೇಂದ್ರ ಸಚಿವ ಹೆಚ್​ಡಿಕೆ ಆರೋಪ - MUDA Scam

ಮುಖ್ಯಮಂತ್ರಿಗಳ ಕುಟುಂಬ ಮೈಸೂರಿನ ಮುಡಾದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಆರ್​​ಟಿಐ ಕಾರ್ಯಕರ್ತರನ್ನು ಕಾಂಗ್ರೆಸ್ ಸರ್ಕಾರ ಗುರಿ ಮಾಡಿಕೊಂಡಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ.

ಕೇಂದ್ರ ಸಚಿವ ಹೆಚ್​ಡಿಕೆ
ಕೇಂದ್ರ ಸಚಿವ ಹೆಚ್​ಡಿಕೆ (ETV Bharat)
author img

By ETV Bharat Karnataka Team

Published : Jul 20, 2024, 8:08 AM IST

Updated : Jul 20, 2024, 10:08 AM IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮುಡಾದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಆರ್​​ಟಿಐ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಗರಣಗಳನ್ನು ಪ್ರಶ್ನಿಸಿದ ಪ್ರತಿಪಕ್ಷಗಳನ್ನು ವಿಧಾನಮಂಡಲದಲ್ಲಿ ಹತ್ತಿಕ್ಕಲಾಯಿತು! ಸತ್ಯಶೋಧನೆಯಲ್ಲಿ ನಿರತರಾದ ಆರ್​​ಟಿಐ ಕಾರ್ಯಕರ್ತರನ್ನು ಅಧಿಕಾರ ದುರ್ಬಳಕೆ ಮಾಡಿಕೊಂಡು ದಮನ ಮಾಡಲಾಗುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಮುಖ್ಯಮಂತ್ರಿಗಳ ಕುಟುಂಬ ಮೈಸೂರಿನ ಮುಡಾದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಆರ್​​ಟಿಐ ಕಾರ್ಯಕರ್ತರನ್ನು ಕಾಂಗ್ರೆಸ್ ಗುರಿ ಮಾಡಿಕೊಂಡಿದೆ. ಆರೋಪಿತ ಸ್ಥಾನದಲ್ಲಿರುವ ಸಿಎಂ ಪರಿವಾರವನ್ನು ರಕ್ಷಿಸುವ ಏಕೈಕ ದುರುದ್ದೇಶದಿಂದ ಕಾಂಗ್ರೆಸ್ಸಿಗರು ಆರ್​ಟಿಐ ಕಾರ್ಯಕರ್ತರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕುಂಬಳಕಾಯಿ ಕಳ್ಳ ಹೆಗಲು ಮುಟ್ಟಿ ನೋಡಿಕೊಂಡ ಎಂಬಂತಿದೆ ಈ ನಾಟಕ ಎಂದು ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದ್ದಾರೆ.

ಪೊಲೀಸ್ ಬಲ ಬಳಸಿ ಸತ್ಯದ ಕತ್ತು ಹಿಚುಕಲು ಸಾಧ್ಯವೇ ಇಲ್ಲ. ಹಾದಿಬೀದಿಯಲ್ಲಿ ಜನರ ಕೈಗೆ ಸಿಕ್ಕಿರುವ ದಾಖಲೆಗಳೇ ಮುಡಾ ಹಗರಣದ 'ಅಸಲಿ ಕೈ' ಯಾವುದು ಎನ್ನುವುದನ್ನು ಸ್ಪಷ್ಟವಾಗಿ ಹೇಳುತ್ತಿವೆ. ಹಾಗಿದ್ದ ಮೇಲೆ ಸತ್ಯವನ್ನು ಹೆಕ್ಕಿ ತೆಗೆದ ಆರ್​​ಟಿಐ ಕಾರ್ಯಕರ್ತರ ಮೇಲೆ ರಾಜ್ಯ ಕಾಂಗ್ರೆಸ್ ಪಕ್ಷ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಅವರು ದೂರಿದ್ದಾರೆ.

ದೂರು ನೀಡಿರುವ ಪ್ರಸಂಗ ಹೇಗಿದೆ ಎಂದರೆ; ಬದಲಿ ನಿವೇಶನ ಫಲಾನುಭವಿಗಳು ಪರೋಕ್ಷವಾಗಿ ಸತ್ಯ ಒಪ್ಪಿಕೊಂಡಂತೆ ಆಗಿದೆ. ಅಷ್ಟೇ ಅಲ್ಲ, ಆರ್​ಟಿಐ ಕಾರ್ಯಕರ್ತರ ಟಾರ್ಗೆಟ್ ಮಾಡಿದಷ್ಟು ಮುಡಾದ ಮೂಲೆಮೂಲೆಗಳಲ್ಲಿ ಮುಗ್ಗುತ್ತಿರುವ ಸತ್ಯಗಳು ಮತ್ತಷ್ಟು ವ್ಯಘ್ರವಾಗಿ ಹೂಂಕರಿಸುತ್ತವೆ. ಇಂಥ ವ್ಯರ್ಥ ಕೆಲಸ ಬಿಟ್ಟು ಮರ್ಯಾದೆಯಿಂದ ಸತ್ಯವನ್ನು ಎದುರಿಸುವುದು ಸಿಎಂ ಆದವರಿಗೆ ಶೋಭೆ ತರುತ್ತದೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಆರ್​ಟಿಐ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ದೂರು: ಆರ್‌ಟಿಐ ಕಾರ್ಯಕರ್ತರಾದ ಗಂಗರಾಜು ಮತ್ತು ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಇವರನ್ನು ಕೂಡಲೇ ಬಂಧಿಸಬೇಕೆಂದು ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ಜಿಲ್ಲಾ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ.

ಬಿಜೆಪಿ ಮತ್ತು ಜೆಡಿಎಸ್ ಮುಖಂಡರೊಂದಿಗೆ ಸೇರಿ ಆರ್​ಟಿಐ ಕಾರ್ಯಕರ್ತರು ಸುಳ್ಳು ದಾಖಲೆಗಳನ್ನು ಸೃಷ್ಟಿಸಿಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ. ಕಳೆದ 30 ದಿನಗಳಿಂದ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್​ ನಾಯಕರು ದೂರಿದ್ದಾರೆ.

ಇದನ್ನೂ ಓದಿ: ಮೈಸೂರು: ಆರ್​ಟಿಐ ಕಾರ್ಯಕರ್ತರ ವಿರುದ್ಧ ದೂರು ಸಲ್ಲಿಸಿದ ಕಾಂಗ್ರೆಸ್ ಮುಖಂಡರು - Complaint against RTI activists

Last Updated : Jul 20, 2024, 10:08 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.