ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯಕೀಯ ನಿಗಾದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯಿಂದ ಎಸ್ಎಂಕೆ ಆರೋಗ್ಯದ ಅಪ್ಡೇಟ್ ಬಿಡುಗಡೆ ಮಾಡಲಾಗಿದೆ.
ಏಪ್ರಿಲ್ 21ರಂದು ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದ ಎಸ್. ಎಂ ಕೃಷ್ಣ ಅವರನ್ನು ಏಪ್ರಿಲ್ 29 ರಂದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಡಾ. ಸತ್ಯನಾರಾಯಣ ಮೈಸೂರು ಮತ್ತು ಡಾ. ಸುನಿಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಸದ್ಯದ ಮಟ್ಟಿಗೆ ಕೃಷ್ಣ ಅವರ ಆರೋಗ್ಯ ಕ್ರಿಟಿಕಲ್ ಕಂಡೀಷನ್ನಲ್ಲಿಯೇ ಇದ್ದರೂ ಆರೋಗ್ಯ ಸ್ಥಿರವಾಗಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಿನದ 24 ಗಂಟೆಯೂ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ.
ಕಳೆದ ಎರಡು ದಿನಗಳಿಂದ ಕೃಷ್ಣ ಅವರ ಆರೋಗ್ಯದಲ್ಲಿ ಹೆಚ್ಚಿನ ಸಮಸ್ಯೆ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು. ಆದರೂ ವೈದ್ಯಕೀಯ ತಂಡ ನಿರಂತರವಾಗಿ ಚಿಕಿತ್ಸೆ ಮುಂದುವರೆಸಿದ್ದು, ಆರೋಗ್ಯ ಸುಧಾರಣೆಗೆ ಪ್ರಯತ್ನ ನಡೆಸಿದೆ. ಸದ್ಯ ವೈದ್ಯಕೀಯ ನೆರವಿನಲ್ಲಿ ಕೃಷ್ಣ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ.
ಇದನ್ನೂ ಓದಿ : ಮಾಜಿ ಸಿಎಂ ಎಸ್.ಎಂ.ಕೃಷ್ಣಗೆ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಕೆ - Former CM S M Krishna