ETV Bharat / state

ಒಕ್ಕಲಿಗ ಸಂಪ್ರದಾಯದಂತೆ ಇಂದು ಮಧ್ಯಾಹ್ನ 3 ಗಂಟೆಗೆ ಎಸ್.ಎಂ.ಕೃಷ್ಣ ಅಂತ್ಯಸಂಸ್ಕಾರ: ಡಿ.ಕೆ.ಶಿವಕುಮಾರ್​ - S M KRISHNA PASSES AWAY

ಕೆಂಗೇರಿ, ಬಿಡದಿ, ರಾಮನಗರ ಮತ್ತು ಚನ್ನಪಟ್ಟಣದ ಒಂದೊಂದು ಕಡೆ ಐದೈದು ನಿಮಿಷ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.​

ಡಿ.ಕೆ. ಶಿವಕುಮಾರ್​
ಡಿ.ಕೆ.ಶಿವಕುಮಾರ್​ (ETV Bharat)
author img

By ETV Bharat Karnataka Team

Published : Dec 10, 2024, 6:58 PM IST

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್​.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಇಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಥಳಕ್ಕೆ ತೆರಳಿ ಸಿದ್ಧತೆಗಳ ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಬೆಳಗ್ಗೆ 8 ಗಂಟೆಯವರೆಗೆ ಸದಾಶಿವನಗರದಲ್ಲಿರುವ ಕೃಷ್ಣ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. 8 ಗಂಟೆಗೆ ಮೃತದೇಹವನ್ನು ವಾಹನದ ಮೂಲಕ ಸೋಮನಹಳ್ಳಿಗೆ ತರಲಾಗುತ್ತದೆ. ಮಾರ್ಗಮಧ್ಯೆ ಕೆಂಗೇರಿ, ಬಿಡದಿ, ರಾಮನಗರ ಮತ್ತು ಚನ್ನಪಟ್ಟಣದ ಒಂದೊಂದು ಕಡೆ ಐದೈದು ನಿಮಿಷ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಸಾರ್ವಜನಿಕರು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನ ಪಡೆಯಬಹುದು" ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ (ETV Bharat)

"ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. ಸಿಎಂ ಸಿದ್ದರಾಮಯ್ಯ, ಎಲ್ಲ ಸಚಿವರು ಮತ್ತು ಪಕ್ಷದ ಎಲ್ಲಾ ಶಾಸಕರು ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ನಾಯಕರು ಬರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಬುಧವಾರ ರಾಜ್ಯಾದ್ಯಂತ ರಜೆ ಘೋಷಿಸಲಾಗಿದೆ. ಸದನದಲ್ಲೂ ಸಂತಾಪ ಸೂಚಿಸಲಾಗಿದೆ. 3 ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ" ಎಂದು ತಿಳಿಸಿದರು.

ಇದನ್ನೂ ಓದಿ: ಕರ್ನಾಟಕ ರಾಜಕೀಯ ರಂಗದ ಧೃವ ನಕ್ಷತ್ರ ಕಳಚಿ ಬಿದ್ದಂತಾಗಿದೆ: ಡಿ.ಕೆ. ಶಿವಕುಮಾರ್ ಕಂಬನಿ

ಮಾರ್ಗ ಮಧ್ಯೆ ಅಂತಿಮ ನಮನಕ್ಕೆ ಅವಕಾಶ: ಬೆಂಗಳೂರಿನಿಂದ ಮದ್ದೂರಿಗೆ ತೆರಳುವ ಮಾರ್ಗಮಧ್ಯೆ ರಾಮನಗರ ಜಿಲ್ಲೆಯ ಬಿಡದಿ, ರಾಮನಗರ ಪಟ್ಟಣ, ಚನ್ನಪಟ್ಟಣದಲ್ಲಿ ಜಿಲ್ಲೆಯ ನಾಗರಿಕರು, ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆಯಲು ಜಿಲ್ಲಾಡಳಿತದಿಂದ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಯಶವಂತ್ ವಿ. ಗುರುಕರ್ ತಿಳಿಸಿದರು.

ಎಸ್. ಎಂ. ಕೃಷ್ಣ ಅವರ ಪಾರ್ಥಿವ ಶರೀರವು ಬುಧವಾರ ಬೆಂಗಳೂರಿನ ಸದಾಶಿವ ನಗರದಿಂದ ಮಂಡ್ಯದ ಸೋಮನಹಳ್ಳಿಗೆ ಹಳೇ ಮೈಸೂರು ರಸ್ತೆಯಲ್ಲಿ ಹಾದುಹೋಗುತ್ತದೆ. ರಾಮನಗರ ಜಿಲ್ಲೆಯ ಬಿಡದಿಯ ಬಿ.ಜಿ.ಎಸ್ ಸರ್ಕಲ್‌ನಲ್ಲಿ ಅಂದು ಬೆಳಗ್ಗೆ 8.45 ರಿಂದ 9 ಗಂಟೆಗೆ, ರಾಮನಗರದ ಐಜೂರು ಸರ್ಕಲ್‌ನಲ್ಲಿ ಬೆಳಿಗ್ಗೆ 9.30ಕ್ಕೆ ಆಗಮಿಸುತ್ತದೆ. ನಂತರ ಚನ್ನಪಟ್ಟಣದ ಗಾಂಧಿ ಭವನ ಸರ್ಕಲ್‌ನಲ್ಲಿ ಬೆಳಗ್ಗೆ 10 ಗಂಟೆಯಿಂದ 10.15ಕ್ಕೆ ಆಗಮಿಸುತ್ತದೆ. ಈ ಸಂದರ್ಭದಲ್ಲಿ 15 ರಿಂದ 20 ನಿಮಿಷಗಳವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಇದಕ್ಕೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.

ಇದನ್ನೂ ಓದಿ: ವೀರಪ್ಪನ್ ಸೆರೆಯಲ್ಲಿದ್ದ ಡಾ.ರಾಜ್ ಅವರನ್ನು SMK ಯಶಸ್ವಿಯಾಗಿ ಬಿಡಿಸಿಕೊಂಡು ಬಂದಿದ್ದೇ ರೋಚಕ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.