ಬೆಂಗಳೂರು : ರಾಜಧಾನಿಯಲ್ಲಿ ಪಿ.ಜಿಗಳ (ಪೆ ಅಂಡ್ ಗೆಸ್ಟ್) ಪ್ರಮಾಣ ಹೆಚ್ಚುತ್ತಲೇ ಇದ್ದರೂ ಸೂಕ್ತ ರೀತಿಯಲ್ಲಿ ನಿಯಮ ಪಾಲಿಸುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿವೆ. ಇದೀಗ ಪಿ.ಜಿಗಳಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಮಾಹಿತಿ ಒಳಗೊಂಡ ಪೊಲೀಸ್ ಇಲಾಖೆಯ ಪೋಸ್ಟರ್ ಅನ್ನು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.
-
ನಿಮ್ಮ ಪಿ.ಜಿ ಗಳಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳು#Namma112#WeServeWeProtect pic.twitter.com/mUR8LqlIJg
— Raman Gupta, IPS (@AddlCPEast) January 26, 2024 " class="align-text-top noRightClick twitterSection" data="
">ನಿಮ್ಮ ಪಿ.ಜಿ ಗಳಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳು#Namma112#WeServeWeProtect pic.twitter.com/mUR8LqlIJg
— Raman Gupta, IPS (@AddlCPEast) January 26, 2024ನಿಮ್ಮ ಪಿ.ಜಿ ಗಳಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳು#Namma112#WeServeWeProtect pic.twitter.com/mUR8LqlIJg
— Raman Gupta, IPS (@AddlCPEast) January 26, 2024
- ಪಿ.ಜಿ ಮಾಲೀಕರು ಅಗತ್ಯವಿರುವ ಪರವಾನಿಗೆಯನ್ನು ಬಿಬಿಎಂಪಿಯಿಂದ ಕಡ್ಡಾಯವಾಗಿ ಟ್ರೇಡ್ ಲೈಸನ್ಸ್ ಪಡೆಯಬೇಕು.
- ವಾಸಕ್ಕೆ ಬರುವ ಎಲ್ಲಾ ವ್ಯಕ್ತಿಗಳ ಗುರುತಿನ ಚೀಟಿ ಮತ್ತು ಇತ್ತೀಚಿನ ಭಾವಚಿತ್ರ ಪಡೆದು, ರಕ್ತ ಸಂಬಂಧಿಕರ ವಿವರಗಳನ್ನು ಮೊಬೈಲ್ ಸಂಖ್ಯೆಗಳೊಂದಿಗೆ ತಂತ್ರಜ್ಞಾನದ ಮೂಲಕ (ಗಣಕೀಕರಣ) ದಾಖಲಿಸಬೇಕು. ಭೇಟಿ ನೀಡಲು ಬರುವವರ (ಸಂಬಂಧಿಕರು /ಸಾರ್ವಜನಿಕರು ಸೇರಿದಂತೆ) ವಿವರಗಳನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು.
- ಕರ್ನಾಟಕ ಸಾರ್ವಜನಿಕರ ಸುರಕ್ಷತೆ ಅಧಿನಿಯಮ-2017 ರ ಅನ್ವಯ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸುವುದು ಹಾಗೂ ಅಗ್ನಿ ಅನಾಹುತದ ಕುರಿತಂತೆ ಅಗತ್ಯ ಸುರಕ್ಷತೆ ಕ್ರಮಗಳನ್ನು ಅನುಸರಿಸಬೇಕು.
- ಮಾದಕ ವಸ್ತುಗಳ ಸೇವನೆ ಮತ್ತು ಸಂಗ್ರಹಣೆಯಿಂದ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡತಕ್ಕದಲ್ಲ ಎಂದು ತಿಳಿಸಲಾಗಿದೆ.
- ಕರ್ತವ್ಯಕ್ಕೆ ನೇಮಿಸಿಕೊಳ್ಳುವ ಎಲ್ಲಾ ವ್ಯಕ್ತಿಗಳ (ಅಡುಗೆ ಕೆಲಸ, ಸೆಕ್ಯೂರಿಟಿ ಗಾರ್ಡ್ ಹಾಗೂ ಇನ್ನಿತರೇ ವ್ಯಕ್ತಿಗಳ) ಪೂರ್ವಾಪರಗಳನ್ನು ಪೊಲೀಸ್ ಪರಿಶೀಲನೆಗೆ ಒಳಪಡಿಸಿದ ನಂತರ ಕರ್ತವ್ಯಕ್ಕೆ ನೇಮಿಸಿಕೊಳ್ಳಬೇಕು. ಇತರೆ ವಿಳಾಸದ ದೃಢೀಕರಣ ಸೇರಿದಂತೆ ರಕ್ತ ಸಂಬಂಧಿಕರ ಮಾಹಿತಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ಪಡೆದು ನಿರ್ವಹಿಸಬೇಕು.
- ಸ್ಥಳೀಯ ಪೊಲೀಸ್ ಠಾಣೆ, ತುರ್ತು ಸ್ಪಂದನೆಯ-112, ವೈದ್ಯಕೀಯ ಸೇವೆಯ-103, ಮತ್ತು ಸೈಬರ್ ಅಪರಾಧಕ್ಕೆ ಸಂಬಂಧಪಟ್ಟ - 1930 ಮುಂತಾದ ಅಗತ್ಯ ಸೇವೆಗಳ ದೂರವಾಣಿ ಸಂಖ್ಯೆಗಳನ್ನು ಎಲ್ಲರಿಗೂ ಗೋಚರವಾಗುವಂತೆ ಪ್ರದರ್ಶಿಸುವುದು ಹಾಗೂ ಪ್ರಥಮ ಚಿಕಿತ್ಸೆ ಸಲಕರಣೆಗಳನ್ನು ಇಟ್ಟುಕೊಳ್ಳಬೇಕು ಎಂದು ಸುರಕ್ಷತಾ ಕ್ರಮಗಳ ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ.
- ವಿದೇಶಿ ಪ್ರಜೆಗಳು ಪಿ.ಜಿಯಲ್ಲಿ ನೆಲೆಸಿದ್ದರೆ ಮಾಹಿತಿಯನ್ನು ದಿ ರಿಜಿಸ್ಟ್ರೇಷನ್ ಆಫ್ ಫಾರೀನ್ ರೂಲ್ಸ್ 1939 ಅನ್ವಯ ಫಾರಂ ’ಸಿ’’ ಅನ್ವಯ ಸ್ಥಳೀಯ ಪೊಲೀಸ್ ಠಾಣೆಗೆ ನೇರವಾಗಿ ಅಥವಾ ತಂತ್ರಜ್ಞಾನದ ಮೂಲಕ ನೀಡಬೇಕು.
- ವಾಸಕ್ಕೆ ಪ್ರವೇಶ ಪಡೆದಿರುವವರನ್ನು ಹೊರತುಪಡಿಸಿ ಇತರೇ ಯಾರಿಗೂ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಡತಕ್ಕದ್ದಲ್ಲ.
- ಸರ್ವೋಚ್ಛ ನ್ಯಾಯಾಲಯದ ಆದೇಶದ ಅನುಸಾರ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ಧ್ವನಿವರ್ದಕಗಳನ್ನು ಉಪಯೋಗಿಸತಕ್ಕದಲ್ಲ.
- ಒಂದು ವೇಳೆ ಸುರಕ್ಷತಾ ಕ್ರಮ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಯಾವುದಾದರೂ ಅಹಿತಕರ ಘಟನೆ ಸಂಭವಿಸಿದ್ದಲ್ಲಿ, ಸಂಬಂಧಪಟ್ಟ ಪಿ.ಜಿ. ಮಾಲೀಕರು ಅಥವಾ ಅದರ ವ್ಯವಸ್ಥಾಪಕರೇ ನೇರ ಹೊಣೆಗಾರರಾಗುತ್ತಾರೆ ಎಂದು ನಗರ ಪೊಲೀಸರು ಸೂಚಿಸಿದ್ದಾರೆ.
ಇದನ್ನೂ ಓದಿ : ಪಿಜಿ ವಾಸಿಗಳ ಮಾಹಿತಿಗಾಗಿ ವೆಬ್ ಪೋರ್ಟಲ್.. ಮಾಲೀಕರಿಗೆ ಪೊಲೀಸ್ ಕಮೀಷನರ್ ಸೂಚನೆ