ETV Bharat / state

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ರಾಜ್ಯದಲ್ಲಿ 20ಕ್ಕೂ ಅಧಿಕ‌ ಸ್ಥಾನ: ಸಲೀಂ ಅಹ್ಮದ್ - Salim Ahmed

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಐದು ಗ್ಯಾರಂಟಿ ಮತ್ತು ಕೇಂದ್ರದ ಬಿಜೆಪಿಯ 10 ವರ್ಷಗಳ ದುರಾಡಳಿತ ವ್ಯವಸ್ಥೆಯಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್​ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಲೀಂ ಅಹ್ಮದ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಸಲೀಂ ಅಹ್ಮದ್
ಸಲೀಂ ಅಹ್ಮದ್
author img

By ETV Bharat Karnataka Team

Published : Feb 12, 2024, 7:02 AM IST

ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ. ಈಗಾಗಲೇ ಪಕ್ಷದ ಆಂತರಿಕ ಸರ್ವೇ ವರದಿಯಲ್ಲಿ ಬಹಿರಂಗಗೊಂಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಮಂಗಳೂರಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿಂತೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಫೆಬ್ರವರಿ ಅಂತ್ಯದ ವೇಳೆ ಬಿಡುಗಡೆಯಾಗಲಿದೆ. ಈಗಾಗಲೇ ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅರ್ಹರ ಪಟ್ಟಿಯನ್ನು ಕೆಪಿಸಿಸಿಯಿಂದ ಎಐಸಿಸಿಗೆ ಕಳುಹಿಸಲಾಗಿದೆ. ಇದರ ಪರಿಶೀಲನೆ, ಸರ್ವೆ ಕಾರ್ಯ ನಡೆಯುತ್ತಿದ್ದು, ಶೀಘ್ರ ಅಂತಿಮವಾಗಲಿದೆ ಎಂದರು.

ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಕಾಂಗ್ರೆಸ್‌ನ ಐದು ಮಂದಿಯ ಹೆಸರಿನ ಪಟ್ಟಿಯನ್ನು ಕಳುಹಿಸಿಕೊಡಲಾಗಿದೆ. ಪಕ್ಷದ ಹೈಕಮಾಂಡ್ ಸಮರ್ಥ ಅಭ್ಯರ್ಥಿಯನ್ನು ದ.ಕ ಲೋಕಸಭಾ ಕ್ಷೇತ್ರಕ್ಕೆ ಆಯ್ಕೆ ಮಾಡಲಿದೆ. ಫೆಬ್ರವರಿ ಅಂತ್ಯಕ್ಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಐದು ಗ್ಯಾರಂಟಿ ಮತ್ತು ಕೇಂದ್ರದ ಬಿಜೆಪಿಯ 10 ವರ್ಷಗಳ ದುರಾಡಳಿತ ಕಾಂಗ್ರೆಸ್‌ಗೆ ಗೆಲುವು ತಂದಕೊಡಲಿದೆ. ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳು ಸಿಗುವುದಿಲ್ಲ ಎಂದು ಬಿಜೆಪಿಗೆ ಅರಿವಾಗಿದ್ದು, ಅದಕ್ಕಾಗಿಯೇ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಪಕ್ಷದ ಸಭೆ ಮಾಡುತ್ತಿದ್ದಾರೆ ಎಂದು ಸಲೀಂ ಅಹ್ಮದ್ ಹೇಳಿದರು.

ಫೆ. 17ರಂದು ಸಮಾವೇಶ : ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಬೃಹತ್ ಸಮಾವೇಶ ಫೆ.17ರಂದು ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನನೇಜ್‌ಮೆಂಟ್ ಕಾಲೇಜಿನ ಮೈದಾನದಲ್ಲಿ ನಡೆಯಲಿದೆ. ಸಮಾವೇಶದ ಉದ್ಘಾಟನೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೆರವೇರಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪಕ್ಷದ ಸಂಸದರು, ಶಾಸಕರು, ಭಾಗವಹಿಸಲಿದ್ದಾರೆ. ಇದೊಂದು ಐತಿಹಾಸಿಕ ಸಮಾವೇಶವಾಗಲಿದೆ ಎಂದು ಸಲೀಂ ಅಹ್ಮದ್ ವಿವರಿಸಿದರು.

ಕೇಂದ್ರ ಸರ್ಕಾರ ಕಳೆದ ಐದು ವರ್ಷಗಳಿಂದ ರಾಜ್ಯಕ್ಕೆ ಅನ್ಯಾಯ ಮಾಡಿದೆ. ನಮಗೆ ಬೇಕಾದ ಹಣದ ಪಾಲನ್ನು ನೀಡುತ್ತಿಲ್ಲ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಅವರು ರಾಜ್ಯದ ಪರ ಧ್ವನಿ ಎತ್ತುತ್ತಿಲ್ಲ. 4 ಮಂದಿ ಕೇಂದ್ರ ಸಚಿವರು ಇದ್ದರೂ ಪ್ರಯೋಜನ ಇಲ್ಲ. ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ. ಅವರಲ್ಲಿ ಕೇಳಿದರೆ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ನಿರ್ಮಲಾ ಸೀತಾರಾಮನ್‌ಗೆ ರಾಜ್ಯದ ಪರ ಧ್ವನಿ ಎತ್ತಲು ಸಾಧ್ಯವಾಗದಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಲೀಂ ಅಹ್ಮದ್ ಆಗ್ರಹಿಸಿದರು.

ಇದನ್ನೂ ಓದಿ : ಗ್ಯಾರಂಟಿ ಯೋಜನೆಗಳನ್ನು ಎಲ್ಲಾ ವರ್ಗದ ಜನರಿಗೆ ತಲುಪಿಸುತ್ತೇವೆ : ಸಂತೋಷ್ ಲಾಡ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.