ETV Bharat / state

ಯಲಹಂಕ ಬಳಿ 153 ಎಕರೆ ಅರಣ್ಯ ಭೂಮಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ: ಸಚಿವ ಖಂಡ್ರೆ - SALUMARADA THIMMAKKA GARDEN

ಯಲಹಂಕ ಸಮೀಪ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಶೀಘ್ರದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಸಚಿವ ಈಶ್ವರ ಖಂಡ್ರೆ
ವನ್ಯಜೀವಿ ಸಪ್ತಾಹದ ಔಪಚಾರಿಕ ಸಮಾರೋಪ ಸಮಾರಂಭದಲ್ಲಿ ಸಚಿವ ಈಶ್ವರ ಖಂಡ್ರೆ (ETV Bharat)
author img

By ETV Bharat Karnataka Team

Published : Oct 7, 2024, 5:43 PM IST

ಬೆಂಗಳೂರು: ನಗರದ ಉತ್ತರ ಭಾಗದಲ್ಲಿ ಲಂಗ್ ಸ್ಪೇಸ್ ಕೊರತೆ ಹಿನ್ನೆಲೆಯಲ್ಲಿ ಯಲಹಂಕ ಆರ್​​ಟಿಒ ಬಳಿ ಇರುವ ಮಾದಪ್ಪನಹಳ್ಳಿಯ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅರಣ್ಯ ಭವನದಲ್ಲಿಂದು ನಡೆದ ವನ್ಯಜೀವಿ ಸಪ್ತಾಹದ ಔಪಚಾರಿಕ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

153 ಎಕರೆ ಅರಣ್ಯ ಭೂಮಿಯನ್ನು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತಕ್ಕೆ ಗುತ್ತಿಗೆ ನೀಡಲಾಗಿತ್ತು. ಈಗ ಗುತ್ತಿಗೆ ಅವಧಿ ಮುಗಿದಿದ್ದು, ಸಿಎಸ್​​ಆರ್ ನಿಧಿಯ ನೆರವಿನೊಂದಿಗೆ ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಸ್ಯೋದ್ಯಾನ ಮಾಡಲಾಗುವುದು. ಯಲಹಂಕ ಸುತ್ತುಮುತ್ತ ನಗರೀಕರಣ ವ್ಯಾಪಕವಾಗಿದೆ. ಈ ಹಿನ್ನೆಲೆಯಲ್ಲಿ ಜನರಿಗೆ ಅನುಕೂಲವಾಗುವಂತೆ ಅಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ಸ್ಥಾಪಿಸಿದಲ್ಲಿ ಅದು ಅತ್ಯಂತ ಆಕರ್ಷಣೀಯ ತಾಣವಾಗುತ್ತದೆ ಎಂದರು.

ಭಾರತೀಯ ಅರಣ್ಯ ಸಮೀಕ್ಷಾ ವರದಿಯಂತೆ ಬೆಂಗಳೂರು ಭಾರತದಲ್ಲಿ ಮೂರನೇ ಅತಿ ಹೆಚ್ಚು ಭೂಪ್ರದೇಶ ಹೊಂದಿದೆ. ನಗರವು ಸುಮಾರು 89 ಚದರ ಕಿ.ಮೀನಷ್ಟು ಅರಣ್ಯ ಪ್ರದೇಶ ಹೊಂದಿದೆ. ಬೆಂಗಳೂರಿನ ವೃಕ್ಷ ಹೊದಿಕೆ ಶೇ.6.81ರಷ್ಟಿದೆ. ಕಳೆದ 10 ವರ್ಷಗಳಲ್ಲಿ ಬೆಂಗಳೂರು ನಗರದಲ್ಲಿ 5 ಚದರ ಕಿಮೀನಷ್ಟು ಹಸಿರು ಹೊದಿಕೆ ಕಡಿಮೆಯಾಗಿದೆ. ಬೆಂಗಳೂರಿಗೆ ಉದ್ಯಾನ ನಗರಿ ಎನ್ನುವ ಹೆಗ್ಗಳಿಕೆಯನ್ನು ಮರುಸ್ಥಾಪಿಸಲು ಇಲಾಖೆಯು ಸಾರ್ವಜನಿಕರ ಸಹಭಾಗಿತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಇನ್ನು ಹೆಚ್ಚಾಗಿ ಮಾಡಬೇಕಾಗಿದೆ. ಜೊತೆಗೆ ರಾಜಧಾನಿಯಲ್ಲಿ ಒತ್ತುವರಿಯಾಗಿರುವ ಅರಣ್ಯಭೂಮಿಯನ್ನು ಮರಳಿ ವಶಕ್ಕೆ ಪಡೆಯಬೇಕಿದೆ ಎಂದು ಹೇಳಿದರು.

ವಾರಾಂತ್ಯ ಮತ್ತು ರಜಾದಿನಗಳಲ್ಲಿ ವನ್ಯಜೀವಿಗಳನ್ನು ನೋಡಲೆಂದೇ ಅರಣ್ಯದಲ್ಲಿ ಸಫಾರಿಗೆ ಮತ್ತು ಮೃಗಾಲಯಗಳಿಗೆ ಜನರು ಹೋಗುತ್ತಾರೆ. ಸಫಾರಿಯಲ್ಲಿ ಹುಲಿ, ಚಿರತೆ, ಕರಡಿ, ಗರಿಬಿಚ್ಚಿ ನರ್ತಿಸುವ ನವಿಲು ಕಂಡರೆ ಮಂತ್ರಮುಗ್ಧರಾಗುತ್ತಾರೆ. ಅದೇ ವನ್ಯಜೀವಿಗಳು ಕಾಣದಿದ್ದರೆ ಬೇಸರಗೊಳ್ಳುತ್ತಾರೆ. ಮನಸ್ಸಿಗೆ ಇಷ್ಟು ಸಂತೋಷ, ಮುದ ನೀಡುವ ವನ್ಯಮೃಗಗಳನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ. ಈ ಹಿನ್ನೆಲೆಯಲ್ಲಿ ವನ್ಯಮೃಗಗಳ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜನರಲ್ಲಿ ಅರಿವು ಮೂಡಿಸಲು ಮುಂದಿನ ಪೀಳಿಗೆಗೆ ವನ್ಯಮೃಗಗಳ ಮಹತ್ವ ತಿಳಿಸಲು ಪ್ರತೀ ವರ್ಷ ಅಕ್ಟೋಬರ್ 2ರಿಂದ 8ರವರೆಗೆ ವನ್ಯಜೀವಿ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥ ಬ್ರಿಜೇಶ್ ಕುಮಾರ್ ದೀಕ್ಷಿತ್, ಮುಖ್ಯ ವನ್ಯಜೀವಿ ಪರಿಪಾಲಕ ಸುಭಾಷ್ ಮಾಲ್ಖಡೆ ಮತ್ತಿತರರು ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ವನ್ಯಜೀವಿ ಛಾಯಾಚಿತ್ರ ಪ್ರದರ್ಶನ ಮತ್ತು ಅಂಚೆ ಚೀಟಿ ಪ್ರದರ್ಶನವನ್ನು ಸಚಿವ ಈಶ್ವರ್ ಖಂಡ್ರೆ ವೀಕ್ಷಿಸಿದರು.

ಇದನ್ನೂ ಓದಿ: ಮೈಸೂರು ದಸರಾದಲ್ಲಿ ತೆರೆಮರೆಯಲ್ಲಿ ಸೇವೆ ಮಾಡುವ 'ಮುಕ'ದ ಪರಿಚಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.