ETV Bharat / state

ಹೈಕಮಾಂಡ್ ಆದೇಶದ ಮುಂದೆ ನಾವು ಕುಣಿದಾಡಲು ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ ಸೈಲೆಂಟ್ ಸ್ಟೇಟ್ಮೆಂಟ್​ - SATISH JARKIHOLI

ನಮ್ಮ ಎದುರು ಯಾವುದೇ ಹುದ್ದೆಯ ಬದಲಾವಣೆಯ ಪ್ರಸ್ತಾಪ ಇಲ್ಲ. ನಾನು ವರಿಷ್ಠರ ನಿರ್ಧಾರಕ್ಕೆ ಬದ್ಧನಾಗಿ ಕೆಲಸ ಮಾಡುತ್ತೇನೆ. ಹೈಕಮಾಂಡ್ ಆದೇಶದ ಮುಂದೆ ನಾವು ಕುಣಿದಾಡಲು ಸಾಧ್ಯವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

MINISTER SATISH JARKIHOLI  BELAGAVI  CONGRESS GOVERNMENT  ಸಚಿವ ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ ಸೈಲೆಂಟ್ ಸ್ಟೇಟ್ಮೆಂಟ್​ (ETV Bharat)
author img

By ETV Bharat Karnataka Team

Published : Jan 22, 2025, 7:58 PM IST

ಚಿಕ್ಕೋಡಿ(ಬೆಳಗಾವಿ): "ವರಿಷ್ಠರ ತೀರ್ಮಾನದ ಹಿನ್ನೆಲೆ ಪಕ್ಷದಲ್ಲಿ ಎಲ್ಲವೂ ಶಾಂತವಾಗಿದೆ, ಹೈಕಮಾಂಡ್​ ಆದೇಶದ ಮುಂದೆ ನಾನು ಕುಣಿದಾಡಲು ಸಾಧ್ಯವಿಲ್ಲ ಈಗ ಪಕ್ಷ ಸಂಘಟನೆಯಷ್ಟೇ ನನ್ನ ಗುರಿ" ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಬುಧವಾರ ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, "ಈಗ ನಮ್ಮ ಎದುರು ಯಾವುದೇ ಹುದ್ದೆಯ ಬದಲಾವಣೆ ಪ್ರಸ್ತಾಪ ಇಲ್ಲ. ನಾನು ವರಿಷ್ಠರ ನಿರ್ಧಾರಕ್ಕೆ ಬದ್ಧನಾಗಿ ಕೆಲಸ ಮಾಡುತ್ತೇನೆ ಎಂದರು. 2028 ರಲ್ಲಿ ಕಾಂಗ್ರೆಸ್​ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ತರುವುದೇ ನನ್ನ ಮುಂದಿನ ಗುರಿಯಾಗಿದೆ. ಈ ನಿಟ್ಟಿನಲ್ಲಿ ಈಗಿನಿಂದಲೇ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ" ಎಂದು ತಿಳಿಸಿದರು.

"ಸಿಎಂ ಹುದ್ದೆಗಾಗಿ ಅಭಿಮಾನಿಗಳ ಪೂಜೆ ಹಳೆಯದಲ್ಲ‌. ಮೊದಲಿನಿಂದಲೂ ಪೂಜೆ ಮಾಡುವುದು ಅವರ ಅಭಿಮಾನ ಮುಖ್ಯಮಂತ್ರಿ ಆಗಲು ಇನ್ನೂ ಕಾಲಾವಕಾಶ ಇದೆ, ಆದರೆ ತಾಳ್ಮೆಯಿಂದ ಕಾಯಬೇಕು" ಎಂದು ಅಭಿಮಾನಿಗಳ ಪೂಜೆಗೆ ಪ್ರತಿಕ್ರಿಯೆ ನೀಡಿದರು.

ಸತೀಶ್ ಜಾರಕಿಹೊಳಿ ಮಾಧ್ಯಮ ಪ್ರತಿಕ್ರಿಯೆ (ETV Bharat)

ಬಸವೇಶ್ವರ ಏತ ನೀರಾವರಿ ಶೀಘ್ರ ಪೂರ್ಣ: "ಅನೇಕ ವರ್ಷಗಳಿಂದ ಆಮೆ ಗತಿಯಲ್ಲಿ ಸಾಗುತ್ತಿರುವ ಬಹು ನಿರೀಕ್ಷಿತ ಬಸವೇಶ್ವರ ಏತ ನೀರಾವರಿ ಯೋಜನೆಯು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು. ಈಗಾಗಲೇ ಶೇ 80ರಷ್ಟು ಅನುದಾನ ನೀಡಲಾಗಿದೆ. ಕೇವಲ ಶೇ 20 ರಷ್ಟು ಬಾಕಿಯಿದೆ. ಬೋರ್ಡ್ ಮೀಟಿಂಗ್ ನಡೆದ ಬಳಿಕ ಇನ್ನುಳಿದ ಅನುದಾನ ಒದಗಿಸಿ ತ್ವರಿತವಾಗಿ ಆ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುತ್ತೇವೆ" ಎಂದು ಭರವಸೆ ನೀಡಿದರು.

"ಇದೇ ವಿಚಾರಕ್ಕೆ ಶಾಸಕ ರಾಜು ಕಾಗೆ ಕೂಡ ಪದೇ ಪದೇ ನಮಗೆ ಹೇಳಿದ್ದಾರೆ. ಅದಕ್ಕಾಗಿ 200 ಕೋಟಿ ರೂಪಾಯಿಗಳಷ್ಟು ಹಣ ನೀಡಲಾಗಿದೆ. ಆ ಯೋಜನೆ ಆದಷ್ಟು ಬೇಗನೆ ಮುಗಿಯಬೇಕಿದೆ ಅನ್ನೋದು ನನ್ನ ಬಯಕೆ ಇದಕ್ಕಾಗಿ ನಾನು ಶ್ರಮಿಸುತ್ತೇನೆ" ಎಂದು ಹೇಳಿದರು.

ಅಥಣಿಯಲ್ಲಿ ಗಣಿಗಾರಿಕೆ ವಿರುದ್ಧ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡುವೆ: "ಅಥಣಿ ಪಟ್ಟಣದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯ ಆರೋಪಿಗಳು ಕೇಳಿ ಬರುತ್ತಿವೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೇರಿದಂತೆ ಸ್ಥಳೀಯ ತಹಸೀಲ್ದಾರ್ ಅವರಿಗೆ ಸೂಚನೆ ನೀಡುತ್ತೇನೆ. ಯಾರೇ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದರೆ ನಿರ್ದಾಕ್ಷಿಣ್ಯ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಸಿದರು.

ಇದನ್ನೂ ಓದಿ: ಡಿಕೆಶಿ ರಾಜ್ಯದ ಸಿಎಂ ಆಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ: ಬಿಜೆಪಿ ಎಂಎಲ್​ಸಿ ಹೆಚ್. ವಿಶ್ವನಾಥ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.