ETV Bharat / state

ಮೆಟ್ರಿಕ್ ಪೂರ್ವ, SSLC, PUC ವಿದ್ಯಾರ್ಥಿಗಳೇ ಗಮನಿಸಿ: ಪ್ರೋತ್ಸಾಹ ಧನಕ್ಕಾಗಿ ಆನ್​ಲೈನ್ ಅರ್ಜಿ ಆಹ್ವಾನ - Scholarship Application - SCHOLARSHIP APPLICATION

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat Telangana)
author img

By ETV Bharat Karnataka Team

Published : Sep 3, 2024, 4:12 PM IST

ಹುಬ್ಬಳ್ಳಿ: 2024-25ನೇ ಸಾಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ನವೀನ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ (1-10ನೇ ತರಗತಿವರೆಗೆ ಈವರೆಗೂ ಅರ್ಜಿ ಸಲ್ಲಿಸದ) ವಿದ್ಯಾರ್ಥಿ ವೇತನದ ಖಾತೆ ತೆರೆಯಲು ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ https://ssp.postmatric.karnataka.gov.in/CA/ ವೆಬ್ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಈಗಾಗಲೇ ಖಾತೆ ರಚಿಸಿದ ವಿಧ್ಯಾರ್ಥಿಗಳು https://ssp.postmatric.karnataka.gov.in/ssppre/ ವೆಬ್ ಸೈಟ್ ಮೂಲಕ ಅರ್ಜಿಯನ್ನು ಪೂರ್ಣಗೊಳಿಸಿ ಸಲ್ಲಿಸಬಹುದಾಗಿದೆ.

2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕುಂದಗೋಳ ತಾಲೂಕಿನ ವಿವಿಧ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಆನ್‌ಲೈನ್​​ನಲ್ಲಿ ತುಂಬಿದ ಅರ್ಜಿಯ ಪ್ರತಿಯನ್ನು ಪಡೆದು ಅವಶ್ಯಕ ದಾಖಲಾತಿಗಳೊಂದಿಗೆ ಸಂಬಂಧಿಸಿದ ಶಾಲಾ ಮುಖ್ಯೋಪಾಧ್ಯಯರಿಗೆ ಸಲ್ಲಿಸಬೇಕು.

ಇದನ್ನೂ ಓದಿ: ಮಂಗಳೂರಿನ ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್​ಗೆ ಅರ್ಜಿ ಆಹ್ವಾನ; 15 ಸಾವಿರ ರೂ. ಶಿಷ್ಯ ವೇತನದ ಜೊತೆಗೆ ಕೆಲಸವೂ ಗ್ಯಾರೆಂಟಿ! - Diploma Course

ಇನ್ನೊಂದೆಡೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಗಳಿಸಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

15,000 ಸಾವಿರ ಪ್ರೋತ್ಸಾಹ ಧನ: ಶೇ.60 ಕ್ಕಿಂತ ಹೆಚ್ಚು ಶೇ.75 ರವರೆಗೆ ಅಂಕಗಳಿಸಿದವರಿಗೆ ಪ್ರೋತ್ಸಾಹಧನ ರೂ. 7000 ಹಾಗೂ ಶೇ.75 ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ರೂ. 15000 ಪ್ರೋತ್ಸಾಹಧನ ನೀಡಲಾಗುವುದು.

ಅರ್ಹ ವಿದ್ಯಾರ್ಥಿಗಳು sw.kar.nic.in ಇಲಾಖಾ ವೆಬ್​​ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು. ಆನ್​​ಲೈನ್ ಅರ್ಜಿ ಸಲ್ಲಿಸಿದ ದೃಢೀಕೃತ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕುಂದಗೋಳ ಕಚೇರಿಗೆ ಸಲ್ಲಿಸಬೇಕು.

ದ್ವಿತೀಯ ಪಿಯುಸಿ ಹಾಗೂ ಅಂತಿಮ ಪದವಿ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಹಾಗೂ ಅಂತಿಮ ಪದವಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08304-290464 ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಂಚಾಯತ್​ ರಾಜ್​ನಲ್ಲಿ ಪದವಿ ಮಾಡಿದ್ದೀರಾ? ತಿಂಗಳಿಗೆ 60 ಸಾವಿರ ರೂಪಾಯಿ ವೇತನ! - RDPR Recruitment

ETV Bharat Logo

Copyright © 2025 Ushodaya Enterprises Pvt. Ltd., All Rights Reserved.