ETV Bharat / state

ಮುಂದುವರೆದ ಮಳೆ: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ ಘೋಷಣೆ - HEAVY RAIN IN BENGALURU

ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಮುಂದುವರಿದಿದ್ದು, ಆಸ್ತಿ-ಪಾಸ್ತಿ ಪ್ರಾಣಹಾನಿಯಂತಹ ದುರ್ಘಟನೆಗಳು ನಡೆದಿವೆ. ಹೀಗಾಗಿ ನಾಳೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆಯಾಗಿದೆ.

ಶಾಲೆಗಳಿಗೆ ರಜೆ ಘೋಷಣೆ
ಶಾಲೆಗಳಿಗೆ ರಜೆ ಘೋಷಣೆ (ETV Bharat)
author img

By ETV Bharat Karnataka Team

Published : Oct 22, 2024, 8:02 PM IST

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆ ಮುಂಜಾಗ್ರತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಜಗದೀಶ ಜಿ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಇಂದೇ ಆದೇಶ ಹೊರಡಿಸಿದ್ದು, ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಆಯಾ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನ ಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವಂತೆ ಸೂಚಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ಡಿಸಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿ ಅವರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮಳೆಗೆ ಕುಸಿದ ನಿರ್ಮಾಣ ಹಂತದ ಕಟ್ಟಡ; ಓರ್ವ ಸಾವು, ಅವಶೇಷಗಳಡಿ ಐವರು - ಸಿಸಿಟಿವಿಯಲ್ಲಿ ದೃಶ್ಯ ಸೆರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.