ETV Bharat / state

ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆ: ರೆಡ್ ಅಲರ್ಟ್ ಘೋಷಣೆ, ಇಂದು ಶಾಲೆ ಕಾಲೇಜುಗಳಿಗೆ ರಜೆ - Dakshina Kannada Schools holiday

author img

By ETV Bharat Karnataka Team

Published : Jun 27, 2024, 9:05 PM IST

Updated : Jun 28, 2024, 8:51 AM IST

ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆ
ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆ (ETV Bharat)

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇದರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 28 ರಂದು ಜಿಲ್ಲೆಯ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಮುಂದುವರಿದಿದೆ. ಜೂನ್ 28 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ.

ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಆಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ನೀರು ಇರುವ ತಗ್ಗು ಪ್ರದೇಶ. ಕೆರೆ, ನದಿ ತೀರ ಸಮುದ್ರ ತೀರಕ್ಕೆ ನಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸಬೇಕು.

ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸಬೇಕು. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ನಂಬಂಧಪಟ್ಟ ವಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವಂತೆ ಸೂಚಿಸಲಾಗಿದೆ.

ಇದನ್ನೂಓದಿ: ಮಳೆಯಿಂದ ಕೆಆರ್​ಎಸ್‌, ಕಬಿನಿಗೆ ಒಳ ಹರಿವು ಹೆಚ್ಚಳ; ಗಾಜನೂರು ಡ್ಯಾಂ ಭರ್ತಿ, ತುಂಗಾ ನದಿಗೆ 6 ಕ್ಯೂಸೆಕ್​ ನೀರು ರಿಲೀಸ್​ - KRS and Kabini inflow increased

Last Updated : Jun 28, 2024, 8:51 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.