ETV Bharat / state

ಕಾರ್ಕಳ ಪರಶುರಾಮ್​​ ಥೀಮ್​​​ ಪಾರ್ಕ್‌ ವಂಚನೆ ಆರೋಪ ಪ್ರಕರಣ : ಶಿಲ್ಪಿ ಬಂಧನ - KARKALA PARASHURAMA IDOL

ಕಾರ್ಕಳ ಪರಶುರಾಮ್​​ ಥೀಮ್​​​ ಪಾರ್ಕ್‌ ವಂಚನೆ ಪ್ರಕರಣದಲ್ಲಿ ಶಿಲ್ಪಿ ಕೃಷ್ಣ ನಾಯ್ಕನನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.

ಪರಶುರಾಮ್​​ ಥೀಮ್​​​ ಪಾರ್ಕ್‌ ವಂಚನೆ ಆರೋಪ ಪ್ರಕರಣದಲ್ಲಿ ಶಿಲ್ಪಿ ಬಂಧನ
ಪರಶುರಾಮ್​​ ಥೀಮ್​​​ ಪಾರ್ಕ್‌ ವಂಚನೆ ಆರೋಪ ಪ್ರಕರಣದಲ್ಲಿ ಶಿಲ್ಪಿ ಬಂಧನ (ETV Bharat)
author img

By ETV Bharat Karnataka Team

Published : Nov 11, 2024, 12:12 PM IST

ಉಡುಪಿ: ಕಾರ್ಕಳ ಬೈಲೂರಿನ ಪರಶುರಾಮ್​​ ಥೀಮ್​​​ ಪಾರ್ಕ್‌ನಲ್ಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರ್ಕಾರಕ್ಕೆ ವಂಚಿಸಿರುವ ಆರೋಪ ಪ್ರಕರಣದ ಆರೋಪಿ ಬೆಂಗಳೂರಿನ ಶಿಲ್ಪಿ ಕೃಷ್ಣ ನಾಯ್ಕ (45) ಅವರನ್ನು ಕಾರ್ಕಳ ಪೊಲೀಸರು ಇಂದು ಪುದುಚೆರಿ ಕೇಂದ್ರಾಡಳಿತ ಪ್ರದೇಶದ ಮಾಹೆ ಎಂಬಲ್ಲಿ ಬಂಧಿಸಿದ್ದಾರೆ.

ಆರೋಪಿ ಕೃಷ್ಣ ನಾಯಕ್ 'ಕೃಷ್ ಆರ್ಟ್ ವರ್ಲ್ಡ್' ಎಂಬ ಸಂಸ್ಥೆಯ ಮೂಲಕ ಥೀಮ್​ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ್​ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರ್ಕಾರಕ್ಕೆ ವಂಚನೆ ಮಾಡಿರುವುದಾಗಿ ನಲ್ಲೂರಿನ ಕೃಷ್ಣ ಶೆಟ್ಟಿ ಅವರು ಜೂನ್ ತಿಂಗಳಲ್ಲಿ ದೂರು ನೀಡಿದ್ದರು. ಈ ದೂರು ಆಧರಿಸಿ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ ಆರೋಪಿ ಕೃಷ್ಣ ನಾಯಕ್, ಈ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ ಹಾಕಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಅ.21ರಂದು ಆರೋಪಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿತ್ತು. ಬಳಿಕ ಆರೋಪಿಯು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಕಾರ್ಕಳ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಕಾರ್ಕಳದಲ್ಲಿ ಪರಶುರಾಮನ ಪ್ರತಿಮೆಯ ಕಳಪೆ ಕಾಮಗಾರಿಗೆ ಹೈಕೋರ್ಟ್ ತರಾಟೆ - Karkala Parashurama Statue

ETV Bharat Logo

Copyright © 2024 Ushodaya Enterprises Pvt. Ltd., All Rights Reserved.