ರಾಯಚೂರು: ಸಹಾಯಕ ಆಯುಕ್ತರ ಕಚೇರಿಯಲ್ಲಿ ಎಸ್‌ಡಿಎ ಆಗಿ ಕಾರ್ಯ ನಿರ್ವಹಿಸುವ ನೌಕರನೊಬ್ಬ ರಾಸಾಯನಿಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾಸಿಂ ಚೌಧರಿ ಆತ್ಮಹತ್ಯೆಗೆ ಶರಣಾದ ಎಸ್‌ಡಿಎ ನೌಕರ ಎಂದು ಗುರುತಿಸಲಾಗಿದೆ.
ನಗರದ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿರುವ ಈಜುಕೋಳದ ಬಳಿ ಗುರುವಾರ ಸಂಜೆ ಸಾಸಿಂ ಚೌಧರಿ ಕೆಮಿಕಲ್ ಸೇವಿಸಿದ್ದರು. ಇದನ್ನು ನೋಡಿದ ಸ್ಥಳೀಯರು ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ, ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಸದೇ ಇಂದು ಮೃತಪಟ್ಟಿದ್ದಾರೆ. ಈ ಸಂಬಂಧ ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಆತ್ಮಹತ್ಯೆಗೆ ಯತ್ನಿಸಿರುವ ಕುರಿತಾಗಿ ನಿಖರ ಮಾಹಿತಿ ದೊರೆತಿಲ್ಲ. ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
ಶಿವಮೊಗ್ಗದಲ್ಲಿ ಸಾಲಬಾಧೆಯಿಂದ ರೈತ ಆತ್ಮಹತ್ಯೆ: ಸಾಲಬಾಧೆಯಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕು ಗೊಂದಿ ಚಟ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಗೊಂದಿ ಚಟ್ನಳ್ಳಿ ಗ್ರಾಮದ ಮಹೇಶ್(40) ಆತ್ಮಹತ್ಯೆಗೆ ಶರಣಾದವರು. ಇವರು ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದರು. ಇಂದು ಬೆಳಗ್ಗೆ ಮಹೇಶ್ ಅವರ ಜಮೀನಿನ ಪಕ್ಕದ ತುಂಗಾ ನದಿ ದಂಡೆಯಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಹೇಶ್ ಅವರ ಹೆಸರಿನಲ್ಲಿ ಎರಡೂವರೆ ಎಕರೆ ಜಮೀನು ಇದೆ. ಇವರು ಬೆಳೆ ಬೆಳೆಯಲು ಹಾಗೂ ಸಂಸಾರ ನಡೆಸಲು ಸುಮಾರು 15 ಲಕ್ಷ ರೂ ಸಾಲ ಮಾಡಿದ್ದರು ಎನ್ನಲಾಗಿದೆ. ಇವರು ಬ್ಯಾಂಕ್ ಹಾಗೂ ಕೈಗಡ ಸಾಲ ಮಾಡಿಕೊಂಡಿದ್ದರು. ಮಹೇಶ್ ಅವರಿಗೆ ವೃದ್ಧ ತಂದೆ ತಾಯಿ ಹಾಗೂ ಪತ್ನಿ ಇದ್ದಾರೆ. ಮಹೇಶ್ ಕಾಣೆಯಾದ ಬಗ್ಗೆ ಕುಟುಂಬಸ್ಥರು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಳೆದ ಎರಡು ದಿನಗಳಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎಲ್ಲಾ ಕಡೆ ಹುಡುಕಾಟ ನಡೆಸಿದ್ದರು. ಇಂದು ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ ವಿವಿ ಲೆಕ್ಕಪತ್ರ ವಿಭಾಗದ ಸೂಪರಿಂಟೆಂಡೆಂಟ್ ಆತ್ಮಹತ್ಯೆ : ಕಳೆದ ಡಿಸೆಂಬರ್ 27 ರಂದು ಕರ್ನಾಟಕ ವಿಶ್ವವಿದ್ಯಾಲಯ ಲೆಕ್ಕಪತ್ರ ವಿಭಾಗದ ಸೂಪರಿಂಟೆಂಡೆಂಟ್ ಚಂದ್ರಕಾಂತ ಸಾವಳಗಿ (55) ಎಂಬವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ಘಟನೆ ತಡವಾಗಿ ಬೆಳಕಿಗೆ ಬಂದಿತ್ತು. ಈ ಸಂಬಂಧ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಾಯುವ ಮುನ್ನ ಕವಿವಿ ನೌಕರರ ಸಹಕಾರಿ ಪತ್ತಿನ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ಸಾವಳಗಿ ಸೋಲು ಅನುಭವಿಸಿದ್ದರು.
ಇದನ್ನೂ ಓದಿ : ಚಿಕ್ಕಮಗಳೂರು: ಮುರಿದು ಬಿದ್ದ ಮದುವೆ; ಕಬಡ್ಡಿ ಆಟಗಾರ ಆತ್ಮಹತ್ಯೆ