ETV Bharat / state

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಅಧಿಕಾರಿಗಳ ಶೋಧ - CCB Search on Central Jail

author img

By ETV Bharat Karnataka Team

Published : Aug 24, 2024, 10:58 AM IST

ಇಂದು ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಅಧಿಕಾರಿಗಳ ಶೋಧ ನಡೆಸುತ್ತಿದ್ದಾರೆ.

CCB OFFICIALS  PARAPPA AGRAHARA CENTRAL JAIL  BENGALURU
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಅಧಿಕಾರಿಗಳ ಶೋಧ (ETV Bharat)

ಬೆಂಗಳೂರು: ಬೆಳ್ಳಂಬೆಳಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸಿಸಿಬಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ನಟೋರಿಯಸ್ ರೌಡಿಗಳಾದ ವಿಲ್ಸನ್ ಗಾರ್ಡನ್ ನಾಗ, ಸುನೀಲ ಸೇರಿದಂತೆ ಹಲವು ಆರೋಪಿಗಳು ಕೇಂದ್ರ ಕಾರಾಗೃಹದಲ್ಲಿದ್ದು, ಜೈಲಿನಲ್ಲಿ ಕೂತು ಹೊರಗಡೆ ಇರುವ ಸಹಚರರ ಮೂಲಕ ಅಪರಾಧ ಚಟುವಟಿಕೆಗಳನ್ನ ನಿಯಂತ್ರಿಸುತ್ತಿದ್ದಾರೆ ಎಂಬ‌ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇಂದು ಬೆಳಗ್ಗೆಯೇ ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಭೇಟಿ ನೀಡಿದ್ದು, ಬ್ಯಾರಕ್‌ನಲ್ಲಿ ಮೊಬೈಲ್, ಶಸ್ತ್ರಾಸ್ತ್ರ ಸೇರಿದಂತೆ ಹಲವು ವಸ್ತುಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೇಂದ್ರ ಕಾರಾಗೃಹದಲ್ಲಿರುವ ಕೆಲವು ಅಪರಾಧಿಗಳನ್ನ ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸುವ ಪ್ರಸ್ತಾಪ ಸಹ ಇದೆ ಎಂದು ತಿಳಿದುಬಂದಿದೆ.

ಓದಿ: ಚುನಾವಣೆ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ಆರೋಪ: ಹಾಸನ ಸಂಸದ ಶ್ರೇಯಸ್ ಪಾಟೀಲ್​ಗೆ ಹೈಕೋರ್ಟ್​ ನೋಟಿಸ್ - High Court Notice to MP

ETV Bharat Logo

Copyright © 2024 Ushodaya Enterprises Pvt. Ltd., All Rights Reserved.