ETV Bharat / state

ಆತಂಕ ಬೇಡ; ಮೆಡಿಕಲ್, ಎಂಜಿನಿಯರಿಂಗ್​ಗೆ ಏಕಕಾಲದಲ್ಲೇ ಸೀಟು ಹಂಚಿಕೆ - ಕೆಇಎ - Engineering Seat Allotment

ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಎಲ್ಲ ಕೋರ್ಸುಗಳ ಪ್ರವೇಶಕ್ಕೆ ಈ ಸಲ ಬಾರಿ ಏಕಕಾಲದಲ್ಲೇ ಸೀಟು ಹಂಚಿಕೆ ಪ್ರಕ್ರಿಯೆ ನಡೆಯಲಿದೆ.

author img

By ETV Bharat Karnataka Team

Published : Jul 25, 2024, 5:45 PM IST

engineering seat
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ETv Bharat)

ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಎಲ್ಲ ಕೋರ್ಸುಗಳ ಪ್ರವೇಶಕ್ಕೆ ಈ ಬಾರಿ ಏಕಕಾಲದಲ್ಲೇ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

ಮೊದಲ ಸುತ್ತಿನ ಸೀಟು ಹಂಚಿಕೆಗೆ ಆದ್ಯತೆಗಳನ್ನು ದಾಖಲಿಸಲು ಎಂಜಿನಿಯರಿಂಗ್, ಪಶುವೈದ್ಯಕೀಯ ಇತ್ಯಾದಿ ಕೋರ್ಸ್​​ಗಳಿಗೆ ಅವಕಾಶ ನೀಡಿದ್ದು, ಇದು 7 ದಿನಗಳವರೆಗೆ ನಡೆಯಲಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ವೈದ್ಯಕೀಯ ಆಯೋಗ ನೀಟ್ ಪರೀಕ್ಷೆಯ ಫಲಿತಾಂಶದ ಪಟ್ಟಿಯನ್ನು ಕೆಇಎಗೆ ಹಸ್ತಾಂತರಿಸಿದ ನಂತರ ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ಇತರ ವೈದ್ಯಕೀಯ ಕೋರ್ಸುಗಳ ಆದ್ಯತೆಗಳನ್ನು ದಾಖಲಿಸಲು ಅವಕಾಶ ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ.

ಈ ವಿಷಯದಲ್ಲಿ ಅಭ್ಯರ್ಥಿಗಳಾಗಲಿ ಅಥವಾ ಪೋಷಕರಾಗಲಿ ಗಾಬರಿಪಡುವ ಅಗತ್ಯ ಇಲ್ಲ. ನೀಟ್ ಮಾಹಿತಿ ಇನ್ನೂ ಬರುವುದು ತಡವಾಗುತ್ತಿರುವ ಕಾರಣ ಎಂಜಿನಿಯರಿಂಗ್ ಸೇರಿದಂತೆ ಇತರ ಕೋರ್ಸ್​​ಗಳ ಪ್ರವೇಶ ಸಂಬಂಧ ಆದ್ಯತೆಗಳನ್ನು ದಾಖಲಿಸಲು ಮೊದಲು ಅವಕಾಶ ನೀಡಲಾಗಿದೆ. ನಂತರ ವೈದ್ಯಕೀಯ ಕೋರ್ಸ್​​ಗೂ ಅವಕಾಶ ಕೊಡುತ್ತೇವೆ. ಅದರ ಬಳಿಕವೇ ಅಣಕು ಸೀಟು ಹಂಚಿಕೆ, ನಂತರ ನೈಜ ಸೀಟು ಹಂಚಿಕೆಯನ್ನು ಏಕಕಾಲದಲ್ಲಿಯೇ ಮಾಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ವೈದ್ಯಕೀಯ ಆಯೋಗದ ಜೊತೆಗೂ ಕೆಇಎ ನಿರಂತರ ಸಂಪರ್ಕದಲ್ಲಿದೆ. ಈ ವಾರದಲ್ಲಿ ರಾಷ್ಟ್ರಮಟ್ಟದ ವೈದ್ಯಕೀಯ ಕೌನ್ಸೆಲಿಂಗ್ ದಿನಾಂಕಗಳನ್ನು ಪ್ರಕಟಿಸುವ ಸಾಧ್ಯತೆ ಇದೆ. ಅದರ ನಂತರ ರಾಜ್ಯದ ಸೀಟು ಹಂಚಿಕೆಯ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.

ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಈ ಹಂತದಲ್ಲಿ ಸೀಟು ಹಂಚಿಕೆಗೆ ಪರಿಗಣಿಸುವುದು ಕಷ್ಟಸಾಧ್ಯ. ಹೀಗಾಗಿ, ಮುಂದಿನ ದಿನಗಳಲ್ಲಿ ಈ ಕುರಿತು ಸರ್ಕಾರ ನೀಡುವ ಸೂಚನೆ ಪ್ರಕಾರ ಅವರಿಗೂ ಅವಕಾಶ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಅಭ್ಯರ್ಥಿಗಳು ಪ್ರತಿನಿತ್ಯ ಕನಿಷ್ಠ ಎರಡು ಬಾರಿ ಕೆಇಎ ವೆಬ್​ಸೈಟ್​​ಗೆ ಭೇಟಿ ಕೊಡಬೇಕು. ಆ ಮೂಲಕ ಕಾಲಕಾಲಕ್ಕೆ ಕೆಇಎ ಹೊರಡಿಸುವ ಪ್ರಕಟಣೆಗಳನ್ನು ಗಮನಿಸಿ, ಸೂಕ್ತ ತೀರ್ಮಾನಗಳನ್ನು ತೆಗೆದುಕೊಳ್ಳಬೇಕು ಎಂದು ನಿರ್ದೇಶಕರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಯುಜಿಸಿಇಟಿ-24: ಆಪ್ಶನ್ ಎಂಟ್ರಿ ಆರಂಭ, 7 ದಿನ ಅವಕಾಶ - UGCET 24

ETV Bharat Logo

Copyright © 2024 Ushodaya Enterprises Pvt. Ltd., All Rights Reserved.