ETV Bharat / state

ಸೆಪ್ಟೆಂಬರ್ 1ಕ್ಕೆ ಸಿಇಟಿ/ನೀಟ್ ಸೀಟು ಹಂಚಿಕೆ ಫಲಿತಾಂಶ ಪ್ರಕಟ - CET OR NEET SEAT ALLOTMENT RESULTS - CET OR NEET SEAT ALLOTMENT RESULTS

ಮೊದಲ ಸುತ್ತಿನ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸುಗಳ ಪ್ರವೇಶಕ್ಕೆ ಆಪ್ಷನ್ (ಆಯ್ಕೆ/ಇಚ್ಛೆ) ಗಳನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ರಾತ್ರಿ ತನ್ನ ವೆಬ್ ಸೈಟ್ ನಲ್ಲಿ ಪೋರ್ಟಲ್ ತೆರೆದಿದೆ. ಇದು ವಿದ್ಯಾರ್ಥಿಗಳಿಗೆ ತಮ್ಮ ಇಚ್ಛೆಗನುಸಾರ ಕಾಲೇಜು ಮತ್ತು ಕೋರ್ಸ್​ಗಳನ್ನು ಆಯ್ದುಕೊಳ್ಳಲು ಅನುಕೂಲವಾಗಲಿದೆ.

results-of-cet-or-neet-to-announce
ಸೀಟು ಹಂಚಿಕೆ ಫಲಿತಾಂಶ ಪ್ರಕಟ (ETV Bharat)
author img

By ETV Bharat Karnataka Team

Published : Aug 21, 2024, 7:08 AM IST

ಬೆಂಗಳೂರು: ಸೆಪ್ಟೆಂಬರ್ 1ಕ್ಕೆ ಸಿಇಟಿ/ನೀಟ್ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಿದ್ದು, ಅದಕ್ಕೂ ಮುನ್ನ ಆಗಸ್ಟ್ 25ರ ರಾತ್ರಿ 8ಕ್ಕೆ ಎರಡನೇ ಅಣಕು ಸೀಟು ಹಂಚಿಕೆಯ ಫಲಿತಾಂಶ (ಯುಜಿ ಸಿಇಟಿ/ನೀಟ್) ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಮೊದಲ ಸುತ್ತಿನ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸುಗಳ ಪ್ರವೇಶಕ್ಕೆ ಆಪ್ಷನ್ (ಆಯ್ಕೆ/ಇಚ್ಛೆ) ಗಳನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ರಾತ್ರಿ ತನ್ನ ವೆಬ್ ಸೈಟ್ ನಲ್ಲಿ ಪೋರ್ಟಲ್ ತೆರೆದಿದೆ. ನಾಳೆ (ಆ. 22ರ) ಬೆಳಗ್ಗೆ 10ರ ವರೆಗೆ ಅಭ್ಯರ್ಥಿಗಳು ತಮಗೆ ಇಚ್ಛೆಗೆ ಅನುಸಾರ ಇರುವ ಕಾಲೇಜು ಮತ್ತು ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಈ ಸಂಬಂಧ ಇದೇ ಮೊದಲ ಬಾರಿಗೆ‌ ಅಭ್ಯರ್ಥಿಗಳ ನೋಂದಾಯಿತ ಮೊಬೈಲ್ ಗೆ ವಾಟ್ಸ್​​ಅಪ್ ಸಂದೇಶ ಕೂಡ ರವಾನಿಸುವ ವ್ಯವಸ್ಥೆ ಆರಂಭಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್ ಪ್ರಸನ್ನ ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಎಂಜಿನಿಯರಿಂಗ್ ಹಾಗೂ ಇತರೆ ಕೋರ್ಸುಗಳಿಗೂ ಆಪ್ಷನ್ (ಆಯ್ಕೆ) ಗಳನ್ನು ದಾಖಲಿಸಲು ಅವಕಾಶ ಇರುತ್ತದೆ ಎಂದು ಅವರು ವಿವರಿಸಿದ್ದಾರೆ.

ಆ. 25 ರಂದು ಅಣಕು ಸೀಟು ಹಂಚಿಕೆ; ಆಗಸ್ಟ್ 25ರ ರಾತ್ರಿ 8ಕ್ಕೆ ಎರಡನೇ ಅಣಕು ಸೀಟು ಹಂಚಿಕೆಯ ಫಲಿತಾಂಶ (ಯುಜಿ ಸಿಇಟಿ/ನೀಟ್) ಪ್ರಕಟಿಸಲಾಗುತ್ತದೆ. ನಂತರ ಆಗಸ್ಟ್ 27ರ ಬೆಳಗ್ಗೆ 11ರ ವರೆಗೆ ಇಚ್ಛೆಗಳನ್ನು ಬದಲಿಸಿಕೊಳ್ಳಬಹುದು. ಸೆಪ್ಟೆಂಬರ್ 1ರಂದು ಸಂಜೆ 6ಕ್ಕೆ ನೈಜ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.

ವೆಬ್ ಸೈಟ್​ನಲ್ಲಿ ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಪರಿಶೀಲಿಸಿ ಇಚ್ಛೆ / ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಹಾಗೆಯೇ ಕಾಲೇಜು ಶುಲ್ಕದ ಮಾಹಿತಿ ಕೂಡ ಇದ್ದು, ಅದನ್ನೂ ಗಮನಿಸಿಯೇ‌ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಿ ಎಂದೂ ಹೆಚ್​ ಪ್ರಸನ್ನ ಅವರು ಸಲಹೆ ನೀಡಿದ್ದಾರೆ.

ಆಪ್ಷನ್ ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಂಡೇ ಮುಂದಡಿ ಇಡಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಪದವಿ ಆದವರಿಗೆ ಇಂಡಿಯನ್​ ಬ್ಯಾಂಕ್​ನಲ್ಲಿದೆ ಉದ್ಯೋಗವಕಾಶ - Indian Bank Recruitment

ETV Bharat Logo

Copyright © 2025 Ushodaya Enterprises Pvt. Ltd., All Rights Reserved.