ETV Bharat / state

ಸಲಿಂಗ ಕಾಮ: ಸೂರಜ್ ರೇವಣ್ಣ ವಿರುದ್ಧ 2ನೇ ಎಫ್‌ಐಆರ್‌ ದಾಖಲು - Suraj Revanna - SURAJ REVANNA

ಅಸಹಜ ಲೈಂಗಿಕ ದೌರ್ಜನ್ಯ (ಸಲಿಂಗ ಕಾಮ) ಆರೋಪದಡಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ.

ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲು
ಸೂರಜ್ ರೇವಣ್ಣ (ETV Bharat)
author img

By ETV Bharat Karnataka Team

Published : Jun 25, 2024, 10:57 PM IST

ಹಾಸನ: ಸಿಐಡಿ ವಶದಲ್ಲಿರುವ ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಮತ್ತೊಂದು ಎಫ್​ಐಆರ್ ದಾಖಲಾಗಿದೆ. ಹೊಳೆನರಸೀಪುರ ತಾಲೂಕಿನ ಯುವಕನೊಬ್ಬ ಮೂರು ವರ್ಷಗಳ ಹಿಂದೆ ತನ್ನ ಮೇಲೆ ಸೂರಜ್​ ರೇವಣ್ಣ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ದೂರು ನೀಡಿದ್ದು, ಇದೀಗ ಪ್ರಕರಣ ದಾಖಲಾಗಿದೆ.

ಜೂನ್ 21ರಂದು ಸೂರಜ್ ರೇವಣ್ಣ ಅವರಿಗೆ ಬ್ಲಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಈ ಮೊದಲು ದೂರು ನೀಡಿದ್ದ ಸಂತ್ರಸ್ತನ ವಿರುದ್ಧ ಇದೇ ಯುವಕ ಪೊಲೀಸ್​ ಠಾಣೆಗೆ ದೂರು ಕೊಟ್ಟಿದ್ದ.

ಆದರೆ ಇದೀಗ, ಅರಕಲಗೂಡು ಮೂಲದ ಯುವಕನ ವಿರುದ್ಧ ದೂರು ನೀಡಲು ಸೂರಜ್ ಒತ್ತಡ ಹಾಕಿದ್ದರು ಉಲ್ಲೇಖಿಸಿದ್ದಾರೆ. ಕೋವಿಡ್ ಸಮಯದಲ್ಲಿ ನನ್ನ ಮೇಲೂ ಕೂಡ ಇದೇ ರೀತಿ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಅಸಹಜ ಲೈಂಗಿಕ ಕಿರುಕುಳ ಪ್ರಕರಣ: ಸೂರಜ್ ರೇವಣ್ಣ ಜು.1ರ ವರೆಗೆ ಸಿಐಡಿ ವಶಕ್ಕೆ - MLC Suraj Revanna Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.